Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, ಆ.20 NEWS DESK : ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಡಿಸಿಸಿ ಬ್ಯಾಂಕ್) ಸುಂಟಿಕೊಪ್ಪ ಶಾಖೆಯು 2025-26ನೇ ಸಾಲಿನಲ್ಲಿ ರೂ.51.70 ಕೋಟಿ ಠೇವಣಿ ಸಂಗ್ರಹಿಸಿ, ರೂ.42.01 ಕೋಟಿ ಸಾಲ ವಿತರಿಸುವ ಮೂಲಕ ರೂ.1.29 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ತಿಳಿಸಿದ್ದಾರೆ. ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗುಂಡುಗುಟ್ಟಿ ಮಂಜನಾಥಯ್ಯ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಜಿಲ್ಲೆಯಲ್ಲಿ 25 ಶಾಖೆಗಳನ್ನು ಹೊಂದಿದ್ದು, ಎಲ್ಲ ಶಾಖೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. 2025-26ನೇ ಸಾಲಿನಲ್ಲಿ ಬ್ಯಾಂಕ್ ವಿವಿಧ ರೀತಿಯ ರೂ.2,043 ಕೋಟಿ ಠೇವಣಿ ಸಂಗ್ರಹಿಸಿದ್ದು, ಸದಸ್ಯರಿಗೆ ರೂ.1,772 ಕೋಟಿ ವಿವಿಧ ರೀತಿಯ ಸಾಲಗಳನ್ನು ವಿತರಿಸಿದೆ. ಈ ಅವಧಿಯಲ್ಲಿ ರೂ.22.39 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಮಾಹಿತಿ ನೀಡಿದರು. ಸಾಲ ವಸೂಲಾತಿಯಲ್ಲಿ ಶೇ.98ರಷ್ಟು ಪ್ರಗತಿ ಸಾಧಿಸಲಾಗಿದ್ದು, ಬ್ಯಾಂಕಿನ ಒಟ್ಟು ಅನುತ್ಪಾದಕ ಆಸ್ತಿ (ಎನ್‌ಪಿಎ) ಪ್ರಮಾಣ ಶೇ.1.12ರಷ್ಟಿದೆ ಎಂದು ತಿಳಿಸಿದರು. ಬ್ಯಾಂಕ್ ಈ ಬಾರಿ ಹೆಚ್ಚಿನ ಲಾಭ ಗಳಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್‌ಗಳ ಪೈಕಿ ಅತ್ಯಧಿಕ ಶೇ.20ರಷ್ಟು ಡಿವಿಡೆಂಡ್ ಘೋಷಿಸಲಾಗಿದೆ. ಇದರಿಂದ ಹೆಚ್ಚಿನ ಲಾಭವನ್ನು ಸದಸ್ಯ ಸಹಕಾರ ಸಂಘಗಳಿಗೆ ವರ್ಗಾಯಿಸಲು ಸಾಧ್ಯವಾಗಿದೆ ಎಂದು ಕೊಡಂದೇರ ಪಿ. ಗಣಪತಿ ಹೇಳಿದರು. ಸಭೆಯಲ್ಲಿ ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆರ್ಮಿ ಡಿಸೋಜ, ನಿರ್ದೇಶಕರಾದ ಕ್ಲೈವ್ ಪೊನ್ನಪ್ಪ, ಕೆ.ಎಸ್. ಮಂಜುನಾಥ್, ರಮೇಶ್ ಚಂಗಪ್ಪ, ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ, ಮಹಿಳಾ ಸಮಾಜದ ಅಧ್ಯಕ್ಷೆ ಪಿ.ಪಿ. ಲೀಲಾವತಿ, ಎನ್.ಸಿ. ದಿಕರ, ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಪಂಡ ಎಂ. ಉತ್ತಪ್ಪ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಣವಟ್ಟಿರ ಬಿ. ಬೆಳ್ಳಿಯಪ್ಪ ಹಾಗೂ ಅಧ್ಯಕ್ಷರ ಆಪ್ತ ಸಹಾಯಕ ಸಿ.ಎಸ್. ಗಣಪತಿ ಉಪಸ್ಥಿತರಿದ್ದರು. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಸುಂಟಿಕೊಪ್ಪ ಶಾಖೆಯ ವ್ಯವಸ್ಥಾಪಕ ಸತೀಶ್ ಸ್ವಾಗತಿಸಿ, ವಾರ್ಷಿಕ ವರದಿ ವಾಚಿಸಿದರು. ಸಹಾಯಕ ಶಾಖಾ ವ್ಯವಸ್ಥಾಪಕಿ ಎಂ.ಮಮತಾ ವಂದಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.