
ಮಡಿಕೇರಿ ಆ.20 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದಂಪತಿಗಳು ಸ್ಥಾಪಿಸಿರುವ ದತ್ತಿಯ ಆಶಯದಂತೆ, ಕೊಡಗು ಜಿಲ್ಲೆಯ ಲೇಖಕರು ರಚಿಸಿರುವ ಉತ್ತಮ ಕೃತಿಗೆ ‘ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ’ ನೀಡಲು ಕೃತಿಗಳನ್ನು ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ನೀಡಲಾಗುವ ಪ್ರಥಮ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಲೇಖಕ-ಲೇಖಕಿಯರು ತಾವು ಪ್ರಕಟಿಸಿರುವ ಕಥೆ, ಕವನ, ಕಾದಂಬರಿ, ಕಥಾ ಸಂಕಲನ, ವೈಚಾರಿಕ ಲೇಖನಮಾಲೆ ಹಾಗೂ ಲೇಖನಗಳ ಗುಚ್ಛ ಸೇರಿದಂತೆ ವಿವಿಧ ಕೃತಿಗಳನ್ನು ಸ್ಪರ್ಧೆಗೆ ಕಳುಹಿಸಬಹುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ತಮ್ಮ ಕೃತಿಯ ನಾಲ್ಕು ಪ್ರತಿಗಳನ್ನು ಕಳುಹಿಸಬೇಕು. 2021ರ ನಂತರ ಪ್ರಕಟಗೊಂಡ ಕೃತಿಗಳನ್ನು ಮಾತ್ರ ಪರಿಗಣಿಸಲಾಗುವುದು. ಸ್ಪರ್ಧೆಗೆ ಕೃತಿ ಕಳುಹಿಸುವವರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಒಬ್ಬ ಲೇಖಕರು ಒಂದು ಕೃತಿಯನ್ನು ಮಾತ್ರ ಕಳುಹಿಸಬಹುದಾಗಿದೆ. ಕೃತಿಯ ಲಕೋಟೆಯ ಮೇಲೆ ‘ಶ್ರೀ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ. ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿಗೆ’ ಎಂದು ನಮೂದಿಸಬೇಕು. ಈ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಲೇಖಕ-ಲೇಖಕಿಯರಿಗೆ ಮಾತ್ರ ಅವಕಾಶವಿದ್ದು, ಕೃತಿಗಳು ಆ.31, 2026ರೊಳಗೆ ತಲುಪುವಂತೆ ಕಳುಹಿಸಬೇಕು. ಕೃತಿಗಳನ್ನು ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ 94483 46276 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









