Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೋಟರಿ ಮಡಿಕೇರಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ದೇಶ ಸೇವೆಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಲು ನಿವೃತ್ತ ಕರ್ನಲ್ ಸಿ.ಎಂ.ತಿಮ್ಮಣ್ಣ ಕರೆ*
  • *ರೋಟರಿ ವುಡ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ : ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಿ : ಸುಬ್ರಾಯ ಸಂಪಾಜೆ*
  • *ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*
  • *ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*
  • *ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*
  • *ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ವುಡ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ : ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಿ : ಸುಬ್ರಾಯ ಸಂಪಾಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ವುಡ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ : ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಿ : ಸುಬ್ರಾಯ ಸಂಪಾಜೆ*

ಆಗಷ್ಟ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.21 : ರೋಟರಿ ಮಡಿಕೇರಿ ವುಡ್ಸ್, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ರೋಟರಾಕ್ಟ್ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಹಿರಿಯ ನಾಗರಿಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರು ಹಿರಿಯರನ್ನು ಗೌರವಿಸಿ, ಅವರ ಜೀವನದ ಸಂಧ್ಯಾಕಾಲದಲ್ಲಿ ಅವರೊಂದಿಗೆ ಇದ್ದು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಹಿರಿಯರಿಗೆ ಪ್ರೀತಿ ತೋರಿಸುವ ಮೂಲಕ ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರೋಟರಿ ವುಡ್ಸ್ ಅಧ್ಯಕ್ಷೆ ರೊ.ಪ್ರಮೀಳಾ ಶೆಟ್ಟಿ ಅವರು ಹಿರಿಯರು ನಡೆದು ಬಂದ ದಾರಿ ಕಿರಿಯರಿಗೆ ದಾರಿ ದೀಪದಂತಿದೆ ಎಂದರು. ಹಿರಿಯ ನಾಗರಿಕರನ್ನು ಮರದ ಆಳವಾದ ಬೇರಿಗೆ ಹೋಲಿಸಿದ ಅವರು, ಸುಮಧುರ ಗೀತೆ ಹಾಡುವ ಮೂಲಕ ಕಾರ್ಯಕ್ರಮದ ಮಹತ್ವವನ್ನು ಸಾರಿದರು. ಸುಬ್ರಾಯ ಸಂಪಾಜೆ ಅವರು ಹಿರಿಯ ನಾಗರಿಕರಿಗೆ ಸಂಬ0ಧಿಸಿದ ಪುರಾಣ ಕಥೆಗಳನ್ನು ಉಲ್ಲೇಖಿಸಿ ಯಕ್ಷಗಾನದ ಹಾಡುಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು. ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ವೇಣುಗೋಪಾಲ್ ಅವರು ಹಿರಿಯರನ್ನು ಪ್ರೀತಿಯಿಂದ ನೋಡಿಕೊಳ್ಳುವಂತೆ ಕರೆ ನೀಡಿದರು. ರೋಟರಿ ಜಿಲ್ಲೆ 3181ರ ವಲಯ 6ರ ವಲಯ ಸೇನಾನಿ ರೊ.ವಸಂತ್ ಕುಮಾರ್ ಅವರು ಮಾತನಾಡಿ ಹಿರಿಯ ನಾಗರಿಕರ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ಹಿರಿಯರ ಆರೈಕೆ ನಮ್ಮ ಜವಾಬ್ದಾರಿ ಎಂಬುವುದನ್ನು ಅರಿತು ಅವರನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಹೇಳಿದರು. ರೋಟರಿ ವುಡ್ಸ್ ನ ನಿಕಟಪೂರ್ವ ಅಧ್ಯಕ್ಷ ರೊ.ಕಿರಣ್ ಕುಂದರ್ ಹಾಗೂ ವುಡ್ಸ್ ಕಾರ್ಯದರ್ಶಿ ರೊ.ಸ್ಮಿತಾ ಚೆಂಗಪ್ಪ ಉಪಸ್ಥಿತರಿದ್ದರು. ಹಿರಿಯ ತಲೆಮಾರು ನಡೆದು ಬಂದ ರೀತಿ, ಕೂಡು ಕುಟುಂಬದ ಸಂಭ್ರಮ ಹಾಗೂ ಆಚಾರ-ವಿಚಾರಗಳನ್ನು ಒಳಗೊಂಡ ಸಾಕ್ಷ್ಯಚಿತ್ರ ಚಿತ್ರವನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಲಾಯಿತು. ಸಾಕ್ಷ್ಯಚಿತ್ರ ಚಿತ್ರ ವೀಕ್ಷಿಸಿದ ಸಭಿಕರು ಭಾವುಕರಾದರು. ಬಳಿಕ ಹಿರಿಯ ನಾಗರಿಕರನ್ನು ವೇದಿಕೆಗೆ ಆಹ್ವಾನಿಸಿ ಅವರ ಜೀವನಾನುಭವಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಿರಿಯ ನಾಗರಿಕರಿಗೆ ರೋಟರಿ ವುಡ್ಸ್ ಹೆಸರಿನ ಛತ್ರಿಗಳನ್ನು ನೀಡಿ ಗೌರವಿಸಲಾಯಿತು. ಕಾಲೇಜು ಉಪನ್ಯಾಸಕಿ ರಾಖೀ ಪೂವಣ್ಣ ಅವರ ಮಾರ್ಗದರ್ಶನದಲ್ಲಿ ರೋಟರಾಕ್ಟ್ ಕ್ಲಬ್ ಸದಸ್ಯರು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಿರ್ವಹಿಸಿ ಗಮನ ಸೆಳೆದರು. ರೋಟರಿಯನ್ನರಾದ ಧನಂಜಯ ಶಾಸ್ತಿç, ರವಿ ಪಿ., ರವೀಂದ್ರ ಹೆಚ್., ದಿವ್ಯಾ ಲೋಕೇಶ್ ಸೇರಿದಂತೆ ಬೋಧಕ ವರ್ಗ ಹಾಗೂ ಪೋಷಕರು ಉಪಸ್ಥಿತರಿದ್ದರು. ರೋಟರಾಕ್ಟ್ ಕ್ಲಬ್ ಸದಸ್ಯರ ಪ್ರಾರ್ಥನೆ ಹಾಗೂ ಹೂವಿನ ಕುಂಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೋಟರಿ ಮಡಿಕೇರಿಯಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ದೇಶ ಸೇವೆಯ ಬಗ್ಗೆ ಯುವ ಸಮೂಹದಲ್ಲಿ ಜಾಗೃತಿ ಮೂಡಿಸಲು ನಿವೃತ್ತ ಕರ್ನಲ್ ಸಿ.ಎಂ.ತಿಮ್ಮಣ್ಣ ಕರೆ*

ಆಗಷ್ಟ್ 21, 2026

*ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*

ಆಗಷ್ಟ್ 20, 2026

*ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*

ಆಗಷ್ಟ್ 20, 2026

*ರೋಟರಿ ವುಡ್ಸ್ ನಿಂದ ಹಿರಿಯ ನಾಗರಿಕರ ದಿನಾಚರಣೆ : ನಾವೂ ಒಂದು ದಿನ ಹಿರಿಯ ನಾಗರಿಕರಾಗಲಿದ್ದೇವೆ ಎಂಬ ಸತ್ಯವನ್ನು ಅರಿತುಕೊಳ್ಳಿ : ಸುಬ್ರಾಯ ಸಂಪಾಜೆ*

ಆಗಷ್ಟ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.21 : ರೋಟರಿ ಮಡಿಕೇರಿ ವುಡ್ಸ್, ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ…

*ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*

ಆಗಷ್ಟ್ 20, 2026

*ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*

ಆಗಷ್ಟ್ 20, 2026

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026

*ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*

ಆಗಷ್ಟ್ 20, 2026

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.