Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳ ಆರಂಭ* 

ಆಗಷ್ಟ್ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
  ಮಡಿಕೇರಿ, NEWS DESK ಆ.21-ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಿಗೆ ನೂತನವಾಗಿ ಜಾರಿಗೆ ಬಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‍ಗಾರ್ ಮತ್ತು ಅಜೀವಿಕ್ ಮಿಷನ್ ಗ್ರಾಮೀಣ-2026 ಯೋಜನೆಯಡಿ ಜಿಲ್ಲೆಯಾದ್ಯಂತ ಸೆಪ್ಟಂಬರ್ 15 ರ ವರೆಗೆ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ ಎಂದು ಕೊಡಗು ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.
ಜಿಲ್ಲೆಯ 102 ಗ್ರಾಮ ಪಂಚಾಯತ್ ಗಳಲ್ಲಿ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ಸಮುದಾಯ ಆಧಾರಿತ ಮತ್ತು ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ವೈಯಕ್ತಿಕ ಬಾವಿ, ದನದ ಕೊಟ್ಟಿಗೆ, ಕೋಳಿ ಶೆಡ್ ಸೇರಿದಂತೆ ಒಟ್ಟಾರೆ 318 ಕಾಮಗಾರಿಗಳಿಗೆ ಅವಕಾಶವಿದೆ ಎಂದು ತಿಳಿಸಿದರು.
ಹಿಂದಿನ ನರೇಗಾ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಉದ್ಯೋಗ ನೀಡಲಾಗುತ್ತಿತ್ತು. ನೂತನ ವಿಬಿ ಜಿ ರಾಮ್ ಜಿ ಯಲ್ಲಿ 125 ದಿನಗಳ ಉದ್ಯೋಗವನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಗ್ರಾ.ಪಂ.ಗಳು ನಿಯಮಾನುಸಾರ ಕ್ರಿಯಾಯೋಜನೆ ಸಲ್ಲಿಸಿದ್ದು, ಅವುಗಳಿಗೆ ಅನುಮೋದನೆ ನೀಡಲಾಗಿದೆ. ಜಿಲ್ಲೆಯಲ್ಲಿಯೂ ವಿಬಿ ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿಗಳು ಆರಂಭಗೊಂಡಿದ್ದು, ಗ್ರಾಮೀಣ ಜನರಿಗೆ ದಿನವೊಂದಕ್ಕೆ ರೂ. 382 ಕೂಲಿ ನಿಗದಿಪಡಿಸಲಾಗಿದೆ ಎಂದರು.
ನಮೂನೆ-6 ರಲ್ಲಿ ಕೆಲಸಕ್ಕೆ ಬೇಡಿಕೆ ಸಲ್ಲಿಸಿದಲ್ಲಿ 15ದಿನಗಳ ಒಳಗಾಗಿ ಗ್ರಾ.ಪಂ.ವತಿಯಿಂದ ಉದ್ಯೋಗ ಒದಗಿಸಲಾಗುತ್ತದೆ. ಕೊಡಗಿನ ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲೆಯಾದ್ಯಂತ ಜಾಬ್ ಕಾರ್ಡ್ ಮೇಳವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುವ ಸಲುವಾಗಿ 5 ತಾಲೂಕುಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ಜಾಬ್ ಕಾರ್ಡ್ ಪಡೆದುಕೊಳ್ಳಲು ಹಾಗೂ ಕಾಮಗಾರಿ ಪಡೆಯಲು ಮತ್ತು ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸಲು ಇಚ್ಛಿಸುವ ಗ್ರಾಮೀಣ ಭಾಗದ ಜನರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಾಕ್ಸ್: ಜಾಬ್ ಕಾರ್ಡ್ ಮೇಳದ ಅಂಗವಾಗಿ 20-08-2026 ರಂದು ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮ ಪಂಚಾಯಿತಿಯಲ್ಲಿ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಜಾಬ್ ಕಾರ್ಡ್ ಮೇಳ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ದೊರಕುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡು ಕಸಾಪದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ: ಕನ್ನಡದ ಉಳಿವು ಮತ್ತು ಬೆಳವಣಿಗೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ: ಈರಮಂಡ ಹರಿಣಿ ವಿಜಯ್

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಮಡಿಕೇರಿಯ ಓಂಕಾರ್ ಆಟೋ ಸ್ನೇಹಿತರ ಬಳಗದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ : ಭುವನೇಶ್ವರಿಗೆ ಪುಷ್ಪನಮನ ಸಲ್ಲಿಸಿದ ಸಚಿವ ನರೇಂದ್ರಸ್ವಾಮಿ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.1 : ಮಡಿಕೇರಿ ನಗರದ ಓಂಕಾರ್ ಆಟೋ ಸ್ನೇಹಿತರ ಬಳಗದ ವತಿಯಿಂದ 71 ನೇ ಕನ್ನಡ…

ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿಗೆ ರೋಚಕ ತೆರೆ: ಮೂರ್ನಾಡು ಎಂಆರ್‌ಎಫ್, ಪೊನ್ನಂಪೇಟೆ ಕ್ರೀಡಾ ಶಾಲೆ, ಕೂರ್ಗ್ ವಂಡರ್ ಹಾಗೂ ಕೊಡವ ಹಾಕಿ ಅಕಾಡೆಮಿಗೆ ಪ್ರಶಸ್ತಿ

ನವೆಂಬರ್ 1, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡಗಿಗೆ ಯುಟಿ ಸ್ಥಾನಮಾನಕ್ಕೆ ಆಗ್ರಹಿಸಿ ಸಿಎನ್‌ಸಿ ಸತ್ಯಾಗ್ರಹ

ನವೆಂಬರ್ 1, 2026

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಮೌನ ವಿ.ಜೆ.ಗೆ ಅತ್ಯುನ್ನತ ಶ್ರೇಣಿ

ನವೆಂಬರ್ 1, 2026

ಕೊಡಗು ಪತ್ರಿಕಾ ಭವನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪ ಇಮ್ಯಾನುವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ವಾರ್ಷಿಕ ಬೆಳೆ ಹಬ್ಬ ಆಚರಣೆ

ನವೆಂಬರ್ 1, 2026

ನ.3 ರಂದು ಮಂಗಳವಾರ ಶಾಸಕ ಡಾ.ಮಂತರ್ ಗೌಡ ಅವರಿಗೆ ಮಡಿಕೇರಿಯಲ್ಲಿ ಪೌರಸನ್ಮಾನ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಿ: ಎ.ಲೋಕೇಶ್ ಕುಮಾರ್

ನವೆಂಬರ್ 1, 2026

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.