Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
  • *ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*
  • *ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.23 : ಮೋಡ ಬಿತ್ತನೆಯಿಂದ ಕೊಡಗು ಜಿಲ್ಲೆಗೆ ಹಾಗೂ ಇಲ್ಲಿನ ಜನರಿಗೆ ಪ್ರಯೋಜನಗಿಂತ ನಷ್ಟವೇ ಹೆಚ್ಚು ಆಗುವುದರಿಂದ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡುವುದನ್ನು ಬಿಜೆಪಿ ವಿರೋಧಿಸುತ್ತದೆ. ಅಲ್ಲದೆ ಮೋಡ ಬಿತ್ತನೆಯಿಂದ ಆಗುವ ನಷ್ಟವನ್ನು ಸರಕಾರವೇ ತುಂಬಬೇಕು ಎಂದು ಒತ್ತಾಯಿಸುತ್ತದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರ್ನಾಟಕ ಸರ್ಕಾರವು ಮುಂಗಾರು ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿ ನೀಗಿಸಲು ಅಂದಾಜು ರೂ. 28.52 ಕೋಟಿ ವೆಚ್ಚದಲ್ಲಿ 60 ದಿನಗಳ ಕಾಲ 200 ಗಂಟೆಗಳ ವೈಮಾನಿಕ ಹಾರಾಟದ ‘ಕರ್ನಾಟಕ ತುರ್ತು ಮೋಡ ಬಿತ್ತನೆ ಕಾರ್ಯಕ್ರಮ-2026′ ಅನ್ನು ಘೋಷಿಸಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ಇಂದಿನ ಪರಿಸ್ಥಿತಿಯಲ್ಲಿ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಿದರೆ ರೈತರ ಬೆಳೆಗೆ ಹಾನಿಯಾಗಲಿದೆ, ಕೊಳೆ ರೋಗ ಕಾಡಲಿದೆ. ಅತಿಯಾದ ಮಳೆಯಿಂದ ಕೊಡಗಿನ ರಸ್ತೆಗಳು ಮತ್ತಷ್ಟು ಹದಗೆಡಲಿವೆ, ಅಲ್ಲದೆ ಗುಡ್ಡ ಕುಸಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ರಾಜ್ಯದ ಹಿತದೃಷ್ಟಿಯಿಂದ ಮೋಡ ಬಿತ್ತನೆ ಕಾರ್ಯಕ್ಕೆ ಮುಂದಾಗಿರುವ ರಾಜ್ಯ ಸರಕಾರ ಕಾವೇರಿ ನಾಡು ಕೊಡಗಿನ ಜನರ ಹಿತದೃಷ್ಟಿಯನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ಅದಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದಾಗ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಇದನ್ನು ಸ್ಥಗಿತಗೊಳಿಸಿ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿರುವ ರಾಕೇಶ್ ದೇವಯ್ಯ ಕೊಡಗಿನ ಸಂಕಷ್ಟವನ್ನು ಕೇಳಲು ಹಾಗೂ ಸ್ಪಂದಿಸಲು ವಿಫಲವಾಗಿರುವ ರಾಜ್ಯ ಸರಕಾರ ತಕ್ಷಣ ವಿಶೇಷ ಅನುದಾನ ಮತ್ತು ಬೆಳೆ ನಷ್ಟ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ವರ್ಷ ಕೊಡಗು ಜಿಲ್ಲೆಯ ತುರ್ತು ಕಾಮಗಾರಿಗಳಿಗೆ ಎನ್‌ಡಿಆರ್‌ಎಫ್ ಮೂಲಕ ಮೀಸಲಿಟ್ಟ ಅಂದಾಜು ರೂ.32 ಕೋಟಿಯನ್ನು ಸದುಪಯೋಗಪಡಿಸದೆ ಬೇರೆ ಜಿಲ್ಲೆಗೆ ವರ್ಗಾಯಿಸಿದ್ದಾರೆ ಎನ್ನುವ ಆರೋಪವಿದೆ. ಇದು ಕೊಡಗು ಜಿಲ್ಲೆಗೆ ಮಾಡಿರುವ ದೊಡ್ಡ ಅನ್ಯಾಯವಾಗಿದ್ದು, ಈ ರೀತಿಯ ಮಲತಾಯಿ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.12: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಕಾನೂನು ಹಾಗೂ…

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026

*ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಖಂಡನೆ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 12, 2026

*ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.