Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.24 : ವಿಶ್ವ ಬುಡಕಟ್ಟು ದಿನಾಚರಣೆ ಹಾಗೂ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಸಂಸ್ಕೃತಿ ಸಿರಿ ಟ್ರಸ್ಟ್ ಕೊಡಗು ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಕೊಡಗು ಘಟಕದ ಸಹಯೋಗದಲ್ಲಿ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಬುಡಕಟ್ಟು ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರ ಹಾಗೂ ಜೀವನ ಪದ್ಧತಿಯನ್ನು ಹೊಂದಿದ್ದು, ಅವುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಬುಡಕಟ್ಟು ಸಮುದಾಯದ ಮಕ್ಕಳು ಹಾಗೂ ಯುವಜನರಿಗೆ ಶಿಕ್ಷಣ, ಆರೋಗ್ಯ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯ ಅವಕಾಶಗಳು ದೊರೆಯಬೇಕು ಎಂದರು. ವಿಶ್ವ ಬುಡಕಟ್ಟು ದಿನಾಚರಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಬುಡಕಟ್ಟು ಸಮುದಾಯದ ಸಾಧನೆಗಳು, ಸಮಸ್ಯೆಗಳು ಮತ್ತು ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ವೇದಿಕೆಯಾಗಬೇಕು. ಮಕ್ಕಳಲ್ಲಿ ತಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಹೆಮ್ಮೆ ಹಾಗೂ ಗೌರವ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಸಲಹೆ ನೀಡಿದರು. ಬುಡಕಟ್ಟು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಭಾವಂತ ಮಕ್ಕಳಿಗೆ ಸೂಕ್ತ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ದೊರೆತರೆ ಅವರು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಬಾಳುಗೋಡು ಏಕಲವ್ಯ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಎ.ಎಸ್.ಪೊನ್ನಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ ಮಾತನಾಡಿ, ಬುಡಕಟ್ಟು ಮಕ್ಕಳ ಶಿಕ್ಷಣ, ಪ್ರತಿಭೆ ಹಾಗೂ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು. ಕಾರ್ಯಕ್ರಮದಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಲಾಯಿತು. ವಿಶ್ವ ಬುಡಕಟ್ಟು ದಿನಾಚರಣೆಯ ಅಂಗವಾಗಿ ನಡೆದ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಬಹುಮಾನ ವಿತರಿಸಲಾಯಿತು. ರಾಷ್ಟçಮಟ್ಟದ ಶೂಟಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆಯ ವಿದ್ಯಾರ್ಥಿ ಉದಂತ್ ಪಿ.ಎಂ ಅವರನ್ನು ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಅಭಿನಂದಿಸಿದರು. ಸಮಾಜ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಡಾ.ವಿಕ್ರಂ ಶೆಟ್ಟಿ, ಡಾ.ಚಿನ್ಮಯಿ, ವತ್ಸಲಾ ರಮೇಶ್ ಹಾಗೂ ಕೊಡಗಿನ ಹೆಸರಾಂತ ಗಾಯಕಿ ಪುತ್ತಮನೆ ವಿದ್ಯಾ ಜಗದೀಶ್ ಅವರನ್ನು ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೂಡ ಟ್ರಸ್ಟ್ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕ ಡಾ.ಲೋಕೇಶ್, ಕೊಡಗು ಜಿಲ್ಲಾ ಆಸ್ಪತ್ರೆಯ ತುರ್ತು ವಿಭಾಗದ ಮುಖ್ಯಸ್ಥ ಡಾ.ಮೋಹನ್ ಅಪ್ಪಾಜಿ, ಡಾ.ಸೋಮಶೇಖರ್, ರಕ್ತನಿಧಿ ಮುಖ್ಯಸ್ಥ ಡಾ.ಕರುಂಬಯ್ಯ, ಡಾ.ನಂಜುAಡಯ್ಯ, ಬುಡಕಟ್ಟು ಕಲ್ಯಾಣಾಧಿಕಾರಿ ಭಾಗೀರಥಿ, ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್, ಏಕಲವ್ಯ ಶಾಲೆಯ ಪ್ರಾಂಶುಪಾಲ ಮೇವಾಲಾಲ್ ಕಟಿಕ್ ಹಾಗೂ ಸಂಸ್ಕೃತಿ ಸಿರಿ ಟ್ರಸ್ಟ್ ಅಧ್ಯಕ್ಷೆ ಹರಿಣಿ ವಿಜಯ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವೈದ್ಯಕೀಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆಗಳನ್ನು ನೀಡಲಾಯಿತು. ರಕ್ತದಾನ ಶಿಬಿರದಲ್ಲೂ ಹಲವರು ಸ್ವಯಂಪ್ರೇರಿತರಾಗಿ ಭಾಗವಹಿಸಿ ರಕ್ತದಾನ ಮಾಡಿದರು. ಬುಡಕಟ್ಟು ಸಂಸ್ಕೃತಿಯ ವೈವಿಧ್ಯತೆಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಕಲೆ, ನೃತ್ಯ ಹಾಗೂ ತಮ್ಮ ಸಾಂಸ್ಕೃತಿಕ ಪ್ರತಿಭೆಯನ್ನು ಪ್ರದರ್ಶಿಸಿದರು. ಶಿಕ್ಷಣ, ಆರೋಗ್ಯ, ಸಂಸ್ಕೃತಿ ಸಂರಕ್ಷಣೆ ಮತ್ತು ಸಮಾಜ ಸೇವೆಯನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿದ ಕಾರ್ಯಕ್ರಮ ಅರ್ಥಪೂರ್ಣವಾಗಿ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.