Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
  • *ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.24 : ಕಾವೇರಿ ನದಿಯ ಸಂರಕ್ಷಣೆ, ಸ್ವಚ್ಛತೆ ಮತ್ತು ಜನಜಾಗೃತಿಗಾಗಿ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಅ.26ರಿಂದ ತಲಕಾವೇರಿಯಲ್ಲಿ ಆರಂಭವಾಗಿ ನ.18ರಂದು ಕಾವೇರಿಯು ಬಂಗಾಳಕೊಲ್ಲಿಯಲ್ಲಿ ಸಂಗಮವಾಗುವ ತಮಿಳುನಾಡಿನ ಪೂಂಪುಹಾರ್ ವರೆಗೆ ನಡೆಯಲಿದೆ ಎಂದು ರಾಜ್ಯ ಸಂಚಾಲಕ ಎಂ.ಎನ್.ಚAದ್ರಮೋಹನ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಸನ್ಯಾಸಿ ಸಂಘದ ಆಶ್ರಯದಲ್ಲಿ, ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದಲ್ಲಿ ರಥಯಾತ್ರೆ ಆಯೋಜಿಸಲಾಗಿದೆ ಎಂದರು.
ಕಾವೇರಿ ನದಿ ದಕ್ಷಿಣ ಭಾರತದ ಕೋಟ್ಯಂತರ ಜನರು ಹಾಗೂ ಜಾನುವಾರುಗಳಿಗೆ ಜೀವಜಲವಾಗಿದ್ದು, ಇತ್ತೀಚಿನ ದಿನಗಳಲ್ಲಿ ಮಾಲಿನ್ಯ, ಅರಣ್ಯ ನಾಶ, ಪ್ಲಾಸ್ಟಿಕ್ ತ್ಯಾಜ್ಯ, ರಾಸಾಯನಿಕ ಕೃಷಿ, ಒಳಚರಂಡಿ ಹಾಗೂ ಕೈಗಾರಿಕಾ ತ್ಯಾಜ್ಯಗಳಿಂದ ನದಿಯ ಪಾವಿತ್ರ‍್ಯತೆ ಹಾಳಾಗುತ್ತಿದೆ. ನದಿ ತಟಗಳ ಒತ್ತುವರಿ ಮತ್ತು ಜಲಮೂಲಗಳ ನಾಶದಿಂದ ಕಾವೇರಿ ತನ್ನ ಮೂಲ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರಥಯಾತ್ರೆಯ ಮೂಲಕ ಕರ್ನಾಟಕ ಮತ್ತು ತಮಿಳುನಾಡಿನ ವಿವಿಧ ಭಾಗಗಳಲ್ಲಿ ಸಾಧು-ಸಂತರು, ಸ್ವಾಮೀಜಿಗಳು ಹಾಗೂ ಕಾರ್ಯಕರ್ತರು ಕಾವೇರಿ ನದಿ ತಟಗಳಲ್ಲಿ ಸಂಚರಿಸಿ ಜನರಿಗೆ ನದಿ ಸಂರಕ್ಷಣೆ, ನೀರಿನ ಸ್ವಚ್ಛತೆ ಮತ್ತು ಪರಿಸರ ಜಾಗೃತಿ ಮೂಡಿಸಲಿದ್ದಾರೆ ಎಂದು ಹೇಳಿದರು.
ರಥಯಾತ್ರೆಗೆ ಚಾಲನೆ- ಅ.25ರಂದು ಕಾವೇರಿ ನದಿ ಜಾಗೃತಿ ತೀರ್ಥಯಾತ್ರೆ ತಂಡ ಕುಶಾಲನಗರ ಮೂಲಕ ತಲಕಾವೇರಿಗೆ ಸಂಜೆ ತಲುಪಲಿದೆ. ಅ.26ರಂದು ಬೆಳಗ್ಗೆ 8 ಗಂಟೆಗೆ ತಲಕಾವೇರಿ ಕ್ಷೇತ್ರದಲ್ಲಿ ರಥಯಾತ್ರೆಗೆ ಚಾಲನೆ ದೊರಕಲಿದೆ. ಬಳಿಕ ಭಾಗಮಂಡಲ ಸಂಗಮದಲ್ಲಿ ಕಾವೇರಿ ಆರತಿ ನಡೆಯಲಿದೆಯೆಂದು ತಿಳಿಸಿದರು.


ಬೆಳದಿಂಗಳ ಊಟ ಕಾರ್ಯಕ್ರಮ- ಅಂದು ಸಂಜೆ 4 ಗಂಟೆಗೆ ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ಕಾವೇರಿ ಆರತಿ ನಡೆಯಲಿದೆ. ಸಂಜೆ 7 ಗಂಟೆಗೆ ಕುಶಾಲನಗರದ ಕೊಪ್ಪ ಗಡಿ ಭಾಗದ ಕಾವೇರಿ ನದಿ ಸೇತುವೆಯಲ್ಲಿ ನಿರ್ಮಾಣವಾಗಿರುವ ಕಾವೇರಿ ರೋಟರಿ ಉದ್ಯಾನದಲ್ಲಿ ಸಾಧು ಸಂತರು, ವಿವಿಧ ಸಂಘ ಸಂಸ್ಥೆಗಳೊAದಿಗೆ “ಬೆಳದಿಂಗಳ ಊಟ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅ.27 ರಂದು ಬೆಳಗ್ಗೆ ಕುಶಾಲನಗರದದಿಂದ ಕಣಿವೆ , ರಾಮನಾಥಪುರ ಮಾರ್ಗವಾಗಿ ತೆರಳಲಿರುವುದಾಗಿ ವಿವರಗಳನ್ನಿತ್ತರು.
ಕಾವೇರಿಯ ಗಡಿಗಳನ್ನು ಗುರುತಿಸಿ- ಕಳೆದ ಹದಿನಾರು ವರ್ಷಗಳಿಂದ ಯಾತ್ರೆಯ ಮೂಲಕ ಕಾವೇರಿ ನದಿ ಸ್ವಚ್ಛತೆ, ಪಾವಿತ್ರö್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆÀ. ಪ್ರಮುಖವಾಗಿ ಕೊಡಗಿನಲ್ಲಿ ಕಾವೇರಿಯ ಪಾತ್ರಗಳು ಒತ್ತುವರಿಯಾಗುತ್ತಿದ್ದು, ಇವುಗಳನ್ನು ತೆರವುಗೊಳಿಸಿ, ಒತ್ತುವರಿದಾರರಿಗೆ ಪುನರ್ವಸತಿ ಕಲ್ಪಿಸಬೇಕು ಮತ್ತು ನದಿ ಗಡಿಗಳನ್ನು ಗುರುತಿಸಬೇಕಾಗಿದೆ. ಕಾವೇರಿ ನದಿ ನೀರಿನ ಹಂಚಿಕೆಯ ಕಾನೂನು ವಿವಾದಗಳಿಗೆ ಕೋಟ್ಯಂತರ ವ್ಯಯವಾಗುತ್ತಿದೆ. ಇದಕ್ಕೆ ಬದಲಾಗಿ ಒಂದು ಸಾವಿರ ಕೊಟಿ ರೂ,.ಗಳ ವಿಶೇಷ ಪ್ಯಾಕೇಜನ್ನು ಕಾವೇರಿ ನದಿಯ ಸ್ವಚ್ಛತೆ, ಪರಿಸರ ಸಂರಕ್ಷಣೆಯ ಸಮಗ್ರ ಯೋಜನೆಗೆ ಮೀಸಲಿಡಬೇಕೆಂದು ಒತ್ತಾಯಿಸಿದರು.
ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿಗಳು ಮಾತನಾಡಿ, ನದಿಗಳು ಮತ್ತು ಅವುಗಳ ಪರಿಸರ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತಾಗಬೇಕು. ನದಿಯ ಪಾವಿತ್ರö್ಯತೆ ಮತ್ತು ಸ್ವಚ್ಛತೆಯಿಂದ ಆರೋಗ್ಯಯುತವಾದ ಸಮಾಜ ನಿರ್ಮಾಣ ಸಾಧ್ಯವಾಗಬಲ್ಲುದು. ಈ ನಿಟ್ಟಿನಲ್ಲಿ ಕಳೆದ ಹದಿನಾರು ವರ್ಷಗಳಿಂದ ರಥಯಾತ್ರೆಯ ಮೂಲಕ ಜಾಗೃತಿ ಕಾರ್ಯಕ್ರಮ ನಡೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಮಾಮಿ ಕಾವೇರಿ ಸಂಘÀಟನೆಯ ಅಧ್ಯಕ್ಷರಾದ ವನಿತಾ ಚಂದ್ರ ಮೋಹನ್ ಮಾತನಾಡಿ, ಕಾವೇರಿ ಪರಿಸರದ ಸಂರಕ್ಷಣೆÉಗೆ ಪೂರಕವಾಗಿ “ತಾಯಿಯ ನೆನಪಿನಲ್ಲಿ ಒಂದು ಗಿಡ” ಕಾರ್ಯಕ್ರಮವನ್ನು ಸಂಘಟನೆ ನಡೆಸುತ್ತಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಮಾಮಿ ಕಾವೇರಿ ಸಂಘಟನೆಯ ಪ್ರಮುಖರಾದ ಕೊಕ್ಕಲೆರ ಧರಣಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್.…

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.