Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.24 : ಈಶಾ ಔಟ್‌ರೀಚ್ ಸಹಕಾರ ಮತ್ತು ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಾಪೋಕ್ಲುವಿನ ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಯು ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿಗೆ ಭಾಜನವಾಗಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷÀ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರು, ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಠ ಕೇಂದ್ರದಲ್ಲಿ ಆಯೋಜಿತ ಸಂಸ್ಥೆಯ 9ನೇ ಸಂಸ್ಥಾಪನಾ ದಿನಾಚರಣೆೆ ಸಮಾರಂಭದಲ್ಲಿ ಪೊನ್ನಾಡ್ ಎಫ್‌ಪಿಓಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಎಂದರು.
ರಾಜ್ಯ ವ್ಯಾಪಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಟ್ಟದ 1750 ಎಫ್‌ಪಿಓ ಮತ್ತು ಕೇಂದ್ರ ಸರ್ಕಾರದ ಪ್ರಾಯೋಜಕತ್ವದಡಿ ನಬಾರ್ಡ್ ಸಹಕಾರದೊಂದಿಗೆ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ 250 ಎಫ್‌ಪಿಓ ಸೇರಿದಂತೆ ಒಟ್ಟು 2 ಸಾವಿರ ಎಫ್‌ಪಿಓಗಳ ಪೈಕಿ ನಾಪೋಕ್ಲು ಪೊನ್ನಾಡ್ ರೈತ ಉತ್ಪಾದಕರ ಸಂಸ್ಥೆ ಮಾರುಕಟ್ಟೆ ವಿಭಾಗದಲ್ಲಿ ಗಣನೀಯ ಸಾಧನೆ ಮಾಡುವ ಮೂಲಕ ಪ್ರಥಮ ಸ್ಥಾನದ ಗೌರವಕ್ಕೆ ಪಾತ್ರವಾಗಿದೆ ಎಂದು ತಿಳಿಸಿದರು.
15 ಕೋಟಿ ವ್ಯವಹಾರ- ಪೊನ್ನಾಡ್ ರೈತ ಉತ್ಪಾದಕರ ಸಂಸ್ಥೆ 2023ರಲ್ಲಿ ನಾಪೋಕ್ಲು ಒಳಗೊಂಡAತೆ ಸುತ್ತಮುತ್ತಲ 24 ಗ್ರಾಮ ವ್ಯಾಪ್ತಿಯ ಬೆಳೆÉಗಾರರ ಅನುಕೂಲಕ್ಕಾಗಿ ಕೇಂದ್ರ ಪ್ರಾಯೋಜಿತ ಯೋಜನೆಯಡಿ ಪೊನ್ನಾಡ್ ರೈತ ಉತ್ಪಾದಕರ ಸಂಸ್ಥೆ ಆರಂಭಗೊAಡಿತು. ಪ್ರಸ್ತುತ ಸಂಸ್ಥೆ 750 ಸದಸ್ಯ ಬಲವನ್ನು ಹೊಂದಿದ್ದು, ಕಳೆದ ಸಾಲಿನಲ್ಲಿ ಸಂಘ ಒಟ್ಟು 15 ಕೋಟಿ ರೂ. ವಹಿವಾಟು ನಡೆಸಿದೆ. ಈ ಎಲ್ಲಾ ವ್ಯವಹಾರಗಳಲ್ಲಿ ಅತ್ಯಂತ ಕನಿಷ್ಟ 3 ಲಕ್ಷ ರೂ. ಲಾಭಾಂಶವನ್ನಷ್ಟೆ ಇರಿಸಿಕೊಂಡು ಬೆಳೆಗಾರರ ಅನುಕೂಲಕ್ಕಾಗಿ ಸಂಸ್ಥೆ ಕಾರ್ಯನಿರ್ವಹಿಸಿದೆ. ಸಂಸ್ಥೆಯ ಈ ವಹಿವಾಟು ರಾಜ್ಯಪ್ರಶಸ್ತಿಗೆ ಕಾರಣವಾಗಿದೆಯೆಂದು ಮನು ಮುತ್ತಪ್ಪ ಹೇಳಿದರು.


ಪೊನ್ನಾಡ್ ಕಾಫಿ “ಬ್ರಾಂಡ್” ಚಿಂತನೆ- ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ ಈಗಾಗಲೆ ಬೆಳೆಗಾರರಿಂದ ಕಾಫಿ ಖರೀದಿ ವ್ಯವಹಾರವನ್ನು ನಡೆಸುತ್ತಿದೆ. ಮುಂಬರುವ ದಿನಗಳಲ್ಲಿ ಸ್ಥಳೀಯ ಕಾಫಿಯನ್ನು ಪುಡಿ ಮಾಡಿ “ಬ್ರಾಂಡ್” ಮಾಡುವ ಮೂಲಕ ಮಾರಾಟ ಮಾಡುವ ಚಿಂತನೆಯನ್ನು ಹೊಂದಿರುವುದಾಗಿ ಮನು ಮುತ್ತಪ್ಪ ಮಾಹಿತಿಯನ್ನಿತ್ತು, ಇದರೊಮದಿಗೆ ಸಂಸ್ಥೆ ಕರಿಮೆಣಸು, ಏಲಕ್ಕಿ ಖರೀದಿ, ಸಂಗ್ರಹಣೆ ಮೂಲಕ ಮಾರುಕಟ್ಟೆ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ರೈತರಿಗೆ ಉತ್ತಮ ಮಾರುಕಟ್ಟೆ ಅವಕಾಶವನ್ನು ಸೃಷ್ಟಿಸುತ್ತಿದೆ. ಸಂಸ್ಥೆಯ ಈ ಎಲ್ಲಾ ಕಾರ್ಯಗಳಿಗೆ ಈಶಾ ಸಂಸ್ಥೆ ಅಗತ್ಯ ಸಲಹೆ, ಮಾರ್ಗದರ್ಶನಗಳನ್ನು ನೀಡುತ್ತಿರುವುದಲ್ಲದೆ, ಕೊಯಂಬತ್ತೂರಿನಲ್ಲಿ ಅಗತ್ಯ ತರಬೇತಿಯನ್ನು ನೀಡುತ್ತಿರುವುದಾಗಿ ವಿವರಗಳನ್ನಿತ್ತರು.
ಬೆಳೆಗಾರರಿಗೆ ಗುಣ ಮಟ್ಟದ ಸುಣ್ಣ- ಸಂಸ್ಥೆಯ ವತಿಯಿಂದ ಗುಣಮಟ್ಟದ ಸುಣ್ಣವನ್ನು ಕೃಷಿಕ ಸದಸ್ಯರಿಗೆ ವಿತರಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಸುಣ್ಣವನ್ನು ಟನ್ ಒಂದಕ್ಕೆ 5,500 ರೂ.ಗಳಿಂದ 8 ಸಾವಿರದವರೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಪೊನ್ನಾಡ್ ಸಂಸ್ಥೆ ಗುಣಮಟ್ಟದ ಸುಣ್ಣವನ್ನು 3750 ರೂ.ಗಳಿಂದ 4 ಸಾವಿರ ರೂ.ಗಳಿಗೆ ಬೆಳೆಗಾರರಿಗೆ ವಿತರಿಸುತ್ತಿರುವುದಾಗಿ ಮಾಹಿತಿ ನೀಡಿದರು.
ಉಚಿತ ಮಣ್ಣು ಪರೀಕ್ಷೆ- ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ ಈ ಬಾರಿ ಉಚಿತವಾಗಿ ಮಣ್ಣು ಪರೀಕ್ಷಾ ಸೌಲಭ್ಯವನ್ನು ಒದಗಿಸಿತ್ತು. ಸಾಮಾನ್ಯವಾಗಿ ಮಣ್ಣು ಪರೀಕ್ಷೆ ಎಂದಾಗ ಮಣ್ಣಿನ ಪಿಹೆಚ್ ಮೌಲ್ಯವನ್ನಷ್ಟೆ ನೋಡಲಾಗುತ್ತದೆ. ಆದರೆ, ಸಂಸ್ಥೆಯಿAದ ಮಣ್ಣಿನ 16 ವಿವಿಧ ಗುಣ ಲಕ್ಷಣಗಳ ಪರೀಕ್ಷೆಯನ್ನು ನಡೆಸಿ, ಬೆಳೆÉಗಾರರಿಗೆ ಅವರ ತೋಟದ ಮಣ್ಣಿನ ಸತ್ವವನ್ನು ಕಾಪಾಡಲು ಬಳಸಬೇಕಾದ ಪೋಷಕಾಂಶಗಳ ಮಾಹಿತಿಯನ್ನು ಒದಗಿಸಲಾಗಿದೆ. ಸುಮಾರು 130 ಮಣ್ಣಿನ ಮಾದರಿಗಳ ಪರೀಕ್ಷೆಗಳನ್ನು ಕೊಯಂಬತ್ತೂರಿನಲ್ಲಿ ನಡೆಸಲಾಗಿದೆಯೆಂದು ವಿವರಗಳನ್ನಿತ್ತರು.
ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಕುಲ್ಲೇಟಿರ ಅಜಿತ್ ನಾಣಯ್ಯ ಮಾತನಾಡಿ, ಪೊನ್ನಾಡ್ ಸಂಸ್ಥೆ ಕಳೆದ ಸಾಲಿನಲ್ಲಿ ಒಟ್ಟು 20 ಸಾವಿರ ಚೀಲ ಕಾಫಿಯನ್ನು ಬೆಳೆÉಗಾರರಿಗೆ ಉತ್ತಮ ದರವನ್ನು ನೀಡಿ ಖರೀದಿಸಿದೆ. ಕಾಫಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದಕ್ಕೆ ಪೂರಕವಾಗಿ ಸಂಸ್ಥೆ ಬೆಳೆಗಾರಿಗೆ ಅಗತ್ಯ ಸಹಕಾರವನ್ನು ಒದಗಿಸುತ್ತಾ ಬರುತ್ತಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಕೇಟೋಳಿರ ರತ್ನ ಚರ್ಮಣ, ಕಾಟುಮಣಿಯಂಡ ಎಂ.ಉಮೇಶ್ ಹಾಗೂ ಈಶಾ ಔಟ್ ರೀಚ್‌ನ ರಾಜ್ಯ ಸಂಯೋಜಕ ವಿಶ್ವನಾಥ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.