Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.25 : ಕೊಡಗಿನ ಜನತೆಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯಲ್ಲಿನ ಕೊಡಗಿನ ಸೂಕ್ಷ್ಮ ಪರಿಸರ ಪ್ರದೇಶಗಳಾಗಿ ಗುರುತಿಸಲ್ಪಟ್ಟ ಗ್ರಾಮಗಳನ್ನು ವರದಿಯಿಂದ ಕೈ ಬಿಡುವುದಕ್ಕೆ ಪೂರಕವಾಗಿ ಕಂದಾಯ ಮತ್ತು ಅರಣ್ಯ ಇಲಾಖಾ ಜಂಟಿ ಸರ್ವೆ ಕಾರ್ಯಕ್ಕೆ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಇದನ್ನು ರಾಜ್ಯ ಸರ್ಕಾರ ಈಗಾಗಲೇ ತಿರಸ್ಕರಿಸಿದ್ದು, ಇದಕ್ಕೆ ನಮ್ಮ ಸಹಮತ ಮತ್ತು ಬೆಂಬಲವಿದೆ. ಆದರೆ, ವರದಿಯನ್ನು ತಿರಸ್ಕರಿಸಿರುವ ಕ್ರಮ ಕೇವಲ ಪಶ್ಚಿಮಘಟ್ಟ ಪ್ರದೇಶದ ಜನರ ಆಕ್ರೋಶದಿಂದ ತಪ್ಪಿಸಿಕೊಳ್ಳುವ ಅಥವಾ ಕೈತೊಳೆದುಕೊಳ್ಳುವ ಪ್ರಯತ್ನವಾಗಬಾರದು ಎಂದರು.
ಕಸ್ತೂರಿ ರಂಗನ್ ವರದಿಯ ಆರಂಭದ ಹಂತದಲ್ಲೆ ನೆರೆಯ ಕೇರಳ ರಾಜ್ಯವು, ತನ್ನ ರಾಜ್ಯದಲ್ಲಿನ ಪರಿಸರ ಸೂಕ್ಷ್ಮ ವಲಯಕ್ಕೆ ಒಳಪಟ್ಟ ಗ್ರಾಮಗಳಿಗೆ ಸಂಬಂಧಿಸಿದಂತೆ ಕಂದಾಯ, ಅರಣ್ಯ ಇಲಾಖೆಯ ಜಂಟಿ ಸರ್ವೇ ನಡೆಸಿ, ಆ ಗ್ರಾಮಗಳನ್ನು ಪಟ್ಟಿಯಿಂದ ತೆಗೆಸುವಲ್ಲಿ ಯಶಸ್ವಿಯಾಗಿದೆ. ಅದೇ ರೀತಿ ಕೊಡಗನ್ನು ಒಳಗೊಂಡಂತೆ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿನ 1500ಕ್ಕೂ ಹೆಚ್ಚಿನ ಜನವಸತಿಯನ್ನು ಹೊಂದಿದ ಸೂಕ್ಷö್ಮ ಪರಿಸರ ವಲಯಕ್ಕೆ ಒಳಪಟ್ಟ ಗ್ರಾಮಗಳನ್ನು ಕೈ ಬಿಡುವ ಕುರಿತಾದ ಸಮಗ್ರ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಬೇಕೆಂದು ತಿಳಿಸಿದರು.
ಬಫರ್ ಝೋನ್ “0”ಗೆ ಸೀಮಿತವಾಗಲಿ- ಪಶ್ಚಿಮಘಟ್ಟ ಸಂರಕ್ಷಣೆೆಗೆ ಸಂಬಂಧಿಸಿದಂತೆ ಕಸ್ತೂರಿ ರಂಗನ್ ವರದಿಯಲ್ಲಿ ಪರಿಸರ ಸೂಕ್ಷ್ಮ ವಲಯದ ಗಡಿಯಿಂದ 0 ದಿಂದ 10 ಕಿ.ಮೀ. ವರೆಗಿನ ಪ್ರದೇಶವನ್ನು ಬಫರ್ ಝೋನ್‌ಗೆ ಅವಕಾಶವಿದೆ. ಇದನ್ನು “0”ಗೆ ಸೀಮಿತಗೊಳಿಸಬೇಕು. ಯಾವುದೇ ಕಾರಣಕ್ಕೂ ಬಫರ್‌ಝೋನ್ ವಿಸ್ತ್ತರಿಸಕೂಡದೆಂದು ಆಗ್ರಹಿಸಿದರು.
ಕಸ್ತೂರಿ ರಂಗನ್ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಕೆ ಮಾಡಲು 60 ದಿನಗಳ ಕಾಲಾವಕಾಶ ನೀಡಲಾಗಿದೆ. ಪ್ರಸ್ತುತ ಗ್ರಾಮ ಪಂಚಾಯ್ತಿಗಳಲ್ಲಿ ಆಡಳಿತ ಮಂಡಳಿ ಇಲ್ಲದೆ, ಆಡಳಿತಾಧಿಕಾರಿಗಳಷ್ಟೆ ಇದ್ದಾರೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ಸರ್ಕಾರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಗ್ರಾ.ಪಂ ಆಡಳಿತಾಧಿಕಾರಿಗಳಿಗೆ “ವಿಶೇಷ ಗ್ರಾಮ ಸಭೆ” ನಡೆಸಲು ಸೂಚನೆ ನೀಡಬೇಕು ಮತ್ತು ಈ ವಿಶೇಷ ಸಭೆಗಳಲ್ಲಿ ಕಸ್ತೂರಿ ರಂಗನ್ ವರದಿಗೆ ವಿರುದ್ಧವಾದ ನಿರ್ಣಯ ಕೈಗೊಂಡು ಕಳುಹಿಸುವ ಕಾರ್ಯ ನಡೆಯಬೇಕು ಎಂದರು.
ಆ.27 ರಂದು ಸರ್ವಪಕ್ಷಗಳ ಸಭೆ- ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸರ್ವ ಪಕ್ಷಗಳ , ಸಂಘ ಸಂಸ್ಥೆಗಳ ಸಭೆಯನ್ನು ಸಂಸದ ಯದುವೀರ್ ಒಡೆಯರ್ ಅವರು ಆ.27ರಂದು ಬೆ.11 ಗಂಟೆಗೆ ನಗರದ ರಾಜದರ್ಶನ ಸಭಾಂಗಣದಲ್ಲಿ ಕರೆದಿದ್ದಾರೆ. ಇದಕ್ಕೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಲಾಗುತ್ತದೆ ಎಂದು ರವಿ ಕಾಳಪ್ಪ ಸ್ಪಷ್ಟಪಡಿಸಿದರು.
ಕೃತಕ ಮಳೆಯಿಂದ ರಾಸಾಯನಿಕಗಳು ಭೂಮಿಗೆ ಸೇರಿ ಅಲ್ಲಿನ ಸೂಕ್ಷö್ಮ ಜೀವಿಗಳಿಗೆ ತೊಂದರೆಯುಂಟಾಗುವ ಸಾಧ್ಯತೆ ಇದೆ. ಈಗಾಗಲೆ ಜಿಲೆಯಲ್ಲಿ ಹೆಚ್ಚಿನ ಮಳೆಯಿಂದ ಕಾಫಿ ಕೃಷಿಯಲ್ಲಿ ಕೊಳೆರೋಗದ ಬಾಧೆ ಕಾಣಿಸಿಕೊಂಡಿದ್ದು, ಯಾವುದೇ ಕಾರಣಕ್ಕೂ ಮೋಡಬಿತ್ತನೆ ಜಿಲ್ಲೆಗೆ ಬೇಡ. ಅಗತ್ಯ ಸರ್ವೇ ನಡೆಸಿ ಜಿಲ್ಲೆಯ ಬೆಳೆಗಾರರಿಗೆ ಕೃಷಿ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಒದಗಿಸಬೇಕೆಂದರು.
ಪಕ್ಷದ ಪ್ರಮುಖರಾದ ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ, ಕಂದಾಯ ಮತ್ತು ಅರಣ್ಯ ಇಲಾಖಾ ಸರ್ವೇ ಕಾರ್ಯದ ಮೂಲಕ ಕೃಷಿ ಪ್ರದೇಶ ಮತ್ತು ಸ್ವಾಭಾವಿಕ ಅರಣ್ಯಗಳನ್ನು ಸ್ಪಷ್ಟವಾಗಿ ಗುರುತಿಸುವ ಕಾರ್ಯ ನಡೆಯಬೇಕಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಉಪಾಧ್ಯಕ್ಷ ಕಾರೇರ ಸತೀಶ್ ಹಾಗೂ ಮಂಡಲ ಅಧ್ಯಕ್ಷ ಸುವಿನ್ ಗಣಪತಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.