Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
  • *ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*
  • *ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ*

ಆಗಷ್ಟ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.25  :ಕೊಡಗು ಜಿಲ್ಲೆಯಲ್ಲಿ ಕಾವೇರಿ ನದಿ ಗಡಿ ಗುರುತು ಕುರಿತು ಸರ್ವೆ ಮಾಡುವ ಮೂಲಕ ನದಿಯ ಸಂರಕ್ಷಣೆ ಮತ್ತು ನದಿ ತಟಗಳ ಅಭಿವೃದ್ಧಿ ಹಾಗೂ ನದಿ ತಟಗಳಲ್ಲಿ ಅಕ್ರಮವಾಗಿ ಆಗಿರುವ ಒತ್ತುವರಿ ತೆರವುಗೊಳಿಸಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಸರ್ಕಾರದ ಮೂಲಕ ಯೋಜನೆ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಮೂಲಕ ಮನವಿ ಸಲ್ಲಿಸಿ ಚರ್ಚಿಸಲಾಯಿತು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಮಾರ್ಗದರ್ಶಕರಾದ ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಮತ್ತು ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಚಂದ್ರಮೋಹನ್ ಎಂ ಎನ್ ಮತ್ತಿತರರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜೀವನದಿ ಕಾವೇರಿ ಕೊಡಗು ಜಿಲ್ಲೆಯಲ್ಲಿ ಮೂಲದಿಂದಲೇ ನಿರಂತರವಾಗಿ ಕಲುಷಿತಗೊಳ್ಳುತ್ತಿದ್ದು ಅದಕ್ಕೆ ಪ್ರಮುಖ ಕಾರಣಗಳು ಮತ್ತು ಆಗಬೇಕಾದ ಯೋಜನೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು.
ನದಿ ತಟಗಳು ಅಕ್ರಮವಾಗಿ ಒತ್ತುವರಿ ಆಗುವುದರೊಂದಿಗೆ ಅಕ್ರಮವಾಗಿ ವಾಣಿಜ್ಯ ಚಟುವಟಿಕೆಗಳು ನಡೆಯಲು ಆರಂಭಗೊಂಡಿವೆ. ಪ್ರವಾಸಿಗರಿಂದ ಉತ್ಪತ್ತಿಯಾಗುವ ತ್ಯಾಜ್ಯಗಳು ನೇರವಾಗಿ ನದಿ ಪಾಲಾಗುತ್ತಿವೆ. ಈ ಮೂಲಕ ನದಿ ನೀರಿನ ಗುಣಮಟ್ಟ ಸಂಪೂರ್ಣ ಕ್ಷೀಣಗೊಳ್ಳುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದು, ಈ ಬಗ್ಗೆ ಕಾರ್ಯಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಲಾಯಿತು.
ಮಡಿಕೇರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ತಲಕಾವೇರಿ ಭಾಗಮಂಡಲ ಬೆಂಗೂರು, ಕುಂದಚೇರಿ ನಾಪೋಕ್ಲು ಬಲ್ಲಮಾವಟಿ, ಹೊದ್ದೂರು, ಮೂರ್ನಾಡು ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಾಣ ಸ್ವಚ್ಛ ಕುಡಿಯುವ ನೀರಿನ ಘಟಕ ಸ್ಥಾಪನೆ ಕಸ ವಿಲೇವಾರಿಗೆ ವಿಶೇಷ ವಾಹನ ಸೌಲಭ್ಯ ಹಾಗೂ ನಾಪೋಕ್ಲು ವ್ಯಾಪ್ತಿಯಲ್ಲಿ ನದಿ ತಟದಲ್ಲಿ ತಡೆಗೋಡೆ ನಿರ್ಮಾಣ ಅಲ್ಲದೆ ತೀರದಲ್ಲಿರುವ ಸಾವಿರಕ್ಕೂ ಅಧಿಕ ಮನೆಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಲ್ಪಿಸುವಂತೆ ಜಿಲ್ಲಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ವಿರಾಜಪೇಟೆ ತಾಲೂಕು ವ್ಯಾಪ್ತಿಯ ಕಾಕೋಟುಪರಂಬು, ಬೇತ್ರಿ ಹಾಲುಗುಂದ ಕನ್ನಂಗಾಲ ಸಿದ್ದಾಪುರ ನೆಲ್ಲಿಹುದಿಕೇರಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಾವೇರಿ ನದಿ ತಟಗಳಲ್ಲಿರುವ ನೂರಾರು ಮನೆಗಳನ್ನು ಸ್ಥಳಾಂತರಿಸಿ ಶಾಶ್ವತ ಪುನರ್ವಸತಿ ಕಲ್ಪಿಸುವುದು ಮತ್ತು ನದಿ ತಟವನ್ನು ಅಭಿವೃದ್ಧಿಗೊಳಿಸುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಕುಶಾಲನಗರ ತಾಲೂಕು ವ್ಯಾಪ್ತಿಯ ನೆಲ್ಲಿಹುದಿಕೇರಿಯಿಂದ ಶಿರಂಗಾಲ ತನಕ ಹಲವು ಗ್ರಾಮಗಳು ಮತ್ತು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಪ್ರವಾಸಿ ಕೇಂದ್ರಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳು ನೇರವಾಗಿ ನದಿ ಒಡಲು ಸೇರುತ್ತಿದೆ. ಪ್ರವಾಸಿಗರು ಒಯ್ಯುವ ಪ್ಲಾಸ್ಟಿಕ್ ಬಾಟಲಿಗಳು ಅರಣ್ಯ ಮತ್ತು ಜಲಮೂಲಗಳನ್ನು ಹಾನಿಗೊಳಿಸುತ್ತಿವೆ. ಪ್ರವಾಸಿಗರಿಗೆ ಸ್ವಚ್ಛತೆ ಬಗ್ಗೆ ಅರಿವು ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದೆ. ಖಾಸಗಿ ಸಂಸ್ಥೆಗಳ ಲಾಭಾಂಶದ ಸಿ ಎಸ್ ಆರ್ ಫಂಡ್ ಬಳಸಿ ಪ್ರವಾಸಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಕುಶಾಲನಗರ ಪಟ್ಟಣದ ಬಹುತೇಕ ಬಡಾವಣೆಗಳು ಮಳೆಗಾಲ ಅವಧಿಯಲ್ಲಿ ಜಲಾವೃತಗೊಂಡು ಜನಜೀವನ ಏರುಪೇರಾಗುತ್ತಿದೆ.
ಈ ಹಿನ್ನಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ನದಿಗೆ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಗ್ರಾಮ ಪಟ್ಟಣಗಳಲ್ಲಿನದಿ ತಟಗಳ ವ್ಯಾಪ್ತಿಯಲ್ಲಿ ಮಾಂಸದ ಅಂಗಡಿಗಳಿಗೆ ಪರವಾನಿಗೆ ನೀಡದಂತೆ ಎಚ್ಚರವಹಿಸುವುದು. ಕಾವೇರಿ ನದಿ ತಟಗಳಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ನಿಯಮಬಾಹಿರ ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಸಿ ಅಭಿವೃದ್ಧಿಗೊಳಿಸುವ ಕಾರ್ಯ ಯೋಜನೆ ರೂಪಿಸುವಂತೆ ಹಾಗೂ ಕುಶಾಲನಗರ ಪಟ್ಟಣದ ಒಳಚರಂಡಿ ಕಾಮಗಾರಿ ವಿಳಂಬದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದು ,ತಕ್ಷಣ ಯೋಜನೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದು.
ಕಾವೇರಿ ನದಿ ಬಫರ್ ಜೋನ್ ಬಗ್ಗೆ ಸರ್ವೆ ಕಾರ್ಯ ನಡೆಸಿ ನದಿ ಜಲಮೂಲಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭ ಪ್ರತಿಕ್ರಿಯೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಶೀಘ್ರದಲ್ಲಿಯೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ವನಿತಾ ಚಂದ್ರಮೋಹನ್, ಕೊಕ್ಕಲೆರ ಧರಣಿ, ಪ್ರದೀಪ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಹಾಗೂ ಅತ್ತೂರು…

*ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ : ನದಿಗಳಲ್ಲಿ ನೀರಿನ ಮಟ್ಟ ಏರಿಕೆ*

ಆಗಷ್ಟ್ 25, 2026

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.