Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.26 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಆಗಸ್ಟ್ 22 ಹಾಗೂ 23ರಂದು ಎರಡುದಿನಗಳ ಉತ್ತರ ಕರ್ನಾಟಕದ ವಾಡೆ ಮನೆಗಳ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಅರೆಭಾಷಿಕರ ಐನ್ ಮನೆಗಳು ಹಾಗೂ ವಾಡೆ ಮನೆಗಳ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಈ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷರಾದ ಸದಾನಂದ ಮಾವಜಿಯವರ ನೇತೃತ್ವದ ಅಧ್ಯಯನ ಪ್ರವಾಸದ ವೇಳೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿರುವ ಸುಮಾರು 850 ವರ್ಷದ ಭವ್ಯ ಇತಿಹಾಸ ವಿರುವ ಚಚಡಿ ದೇಸಾಯಿ ವಾಡೆಯನ್ನು ಪ್ರಧಾನವಾಗಿ ವೀಕ್ಷಿಸಿ ಅಧ್ಯಯನ ನಡೆಸಲಾಯಿತು. ವಾಡೆಯಲ್ಲಿ ಪ್ರಸ್ತುತ ವಾಸ್ತವ್ಯವಿರುವ ನಾಗರಾಜ ದೇಸಾಯಿಯವರು ಮಾಹಿತಿ ನೀಡಿದರು. 12ನೇ ಶತಮಾನದಲ್ಲಿ ರಟ್ಟರ ರಾಜವಂಶದ ಎರಡನೇಯ ಕಾರ್ತ್ಯವೀರ ನಿರ್ಮಿಸಿದ ಈ ಮಹಲ್ ಕೋಟೆಯಿಂದ ಆವೃತವಾಗಿದ್ದು 25 ತಲೆಮಾರುಗಳನ್ನು ಕಂಡಿದ್ದು ಇದೀಗ 26ನೇ ತಲೆಮಾರಿನ ದೇಸಾಯಿ ಕುಟುಂಬ ಇದನ್ನು ಮುನ್ನಡೆಸುತ್ತಿದೆ. ಚಚಡಿ ವಾಡೆ ವೀಕ್ಷಣೆ ಬಳಿಕ ಅಧ್ಯಯನ ತಂಡವು ಸವದತ್ತಿ ತಾಲೂಕಿನ ರುದ್ರಾಪುರದಲ್ಲಿರುವ ರುದ್ರಾಪುರ ವಾಡೆಯನ್ನು ವೀಕ್ಷಿಸಿತು. ಉದಯ ಕುಮಾರ್ ಅವರ ವಶದಲ್ಲಿರುವ ವಾಡೆಯು ಚಿಕ್ಕ ವಾಡೆಯಾದರೂ ಇಂದಿಗೂ ತನ್ನ ಪುರಾತನ ಭವ್ಯತೆಯನ್ನು ಉಳಿಸಿಕೊಂಡಿದೆ. ಬಳಿಕ ಅಧ್ಯಯನ ತಂಡವು ತಲ್ಲೂರು ವಾಡೆಯನ್ನು ವೀಕ್ಷಿಸಿತು. ತಲ್ಲೂರು ವಾಡೆಯು ಮುಖ್ಯವಾಗಿ ಕಿತ್ತೂರು ಸಂಸ್ಥಾನದ ರಾಜಮನೆತನದೊಂದಿಗೆ ನೇರ ರಕ್ತಸಂಬಂಧ ಮತ್ತು ಐತಿಹಾಸಿಕ ಒಡನಾಟವನ್ನು ಹೊಂದಿದ್ದ ವಾಡೆಯಾಗಿರುತ್ತದೆ. ಇಲ್ಲಿ ವಾಸ್ತವ್ಯವಿದ್ದ ಅನಿಲ್ ಕುಮಾರ್ ದೇಸಾಯಿ ಅವರು ವಾಡೆಯ ಕುರಿತು ವಿವರ ನೀಡಿದರು. ಈ ಮೂರು ವಾಡೆಗಳ ಮೂಲ ಪುರುಷ ಅಪ್ರತಿಮ ವೀರ ವೀರಪ್ಪ ನಾಯ್ಕ ಎಂಬವರು. ಕರಿ ಹುಲಿಯನ್ನು (ಕಪ್ಪುಚಿರತೆ) ಬರಿಗೈಯಲ್ಲಿ ಹೊಡೆದು ಹಾಕಿದ್ದ ಕಾರಣ ರಟ್ಟ ವಂಶಸ್ಥ ರಾಜ ಎರಡನೇ ಕಾರ್ತವೀರ್ಯರಿಂದ 1126ರಲ್ಲಿ 30 ಹಳ್ಳಿಗಳ ಬಹುಮಾನವನ್ನು ಪಡೆದಿದ್ದರು. ಚಚಡಿ, ತಲ್ಲೂರು, ರುದ್ರಾಪುರ, ಮುತವಾಡ, ಗೊಂತಮಾರ, ಇಂಗಳಗಿ, ಬೆಳವಡಿ ಸಂಸ್ಥಾನಗಳ ಮೂಲ ಪುರುಷ ವೀರಪ್ಪ ನಾಯ್ಕ ಎಂಬುದಾಗಿ ಇತಿಹಾಸ ಸಾರುತ್ತದೆ. ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಸ್. ಪಾಟೀಲರ ವಾಡೆಮನೆಗೆ ಭೇಟಿ ಅಧ್ಯಯನದ ವೇಳೆ ತಂಡವು ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದ ಕೇಸರಕೊಪ್ಪ ಗ್ರಾಮದಲ್ಲಿರುವ ಕಿತ್ತೂರು ಶಾಸಕರಾದ ಬಾಬೂಸಾಹೇಬ ಪಾಟೀಲರು ವಾಸ್ತವ್ಯ ಇರುವ ವಾಡೆಗೂ ಭೇಟಿ ನೀಡಿತು. ಈ ವಾಡೆಯು ಸುಮಾರು 400 ವರ್ಷಗಳಷ್ಟು ಹಳೆಯದಾಗಿದ್ದು ಇದು ಸಹ ಗತವೈಭವವನ್ನು ಸಾರುತ್ತಿದೆ. ಚಚಡಿ ವಾಡೆಗೂ ಈ ವಾಡೆಗೂ ಬೀಗತನದ ಸಂಬಂಧವಿದೆ. ಶಾಸಕರ ಅಕ್ಕ ಪಾರ್ವತಿ ದೇಸಾಯಿ (ಸೀಮಾ) ಅವರು ಚಚಡಿ ವಾಡೆಯ ಯಜಮಾನರಾಗಿರುವ ನಾಗರಾಜ ದೇಸಾಯಿಯವರ ಪತ್ನಿಯಾಗಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಪಾಟೀಲ ದಂಪತಿಗಳು ಅರೆಭಾಷೆ ಅಕಾಡೆಮಿ ಅಧ್ಯಯನ ತಂಡವನ್ನು ಬರಮಾಡಿಕೊಂಡರು. ತಂಡವು ವಾಡೆಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡುದಲ್ಲದೆ, ಅಕಾಡೆಮಿಯ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ನೀಡಿತು. ಶಾಸಕರು ಹಾಗೂ ಅವರ ಪತ್ನಿ ಹಾಲಿ ಕೆಪಿಸಿಸಿ ಸದಸ್ಯೆ ಹಾಗೂ ಮಾಜಿ ಜಿಲ್ಲಾಪಂಚಾಯತ್ ಸದಸ್ಯರಾದ ರೋಹಿಣಿ ಪಾಟೀಲ್ ಅವರನ್ನು ಈ ಸಂದರ್ಭದಲ್ಲಿ ಅಕಾಡೆಮಿ ವತಿಯಿಂದ ಶಾಲು ಹೊದಿಸಿ ಹೂಗುಚ್ಛ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು. ಪಾಟೀಲ್ ದಂಪತಿಗಳು ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಶಾಲು ಹೊದಿಸಿ ಗೌರವಿಸಿದರು. ಪ್ರವಾಸದ ಉಸ್ತುವಾರಿಯನ್ನು ಸದಸ್ಯ ಸಂಚಾಕರಾದ ಡಾ. ಜ್ಞಾನೇಶ್ ಎನ್.ಎ ವಹಿಸಿದ್ದರು. ತಂಡದಲ್ಲಿ ಸದಸ್ಯರಾದ ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್. ಕಾರ್ಯಪ್ಪ, ಸೂದನ್ ಎಸ್. ಈರಪ್ಪ, ಪಿ.ಎಂ. ಸಂದೀಪ್, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಮೋಹನ್ ಪೊನ್ನಚನ, ಪ್ರಕಾಶ್ ಕುದುಪಜೆ ಇವರುಗಳು ಭಾಗಿಯಾಗಿದ್ದರು. ಧಾರವಾಡದವರಾಗಿರುವ ಕಾರವಾರ ಜಿಲ್ಲೆಯ ಮುಂಡಗೋಡು ತಾಲೂಕು ಕಾರ್ಯನಿರ್ವಹಣಾಧಿಕಾರಿ ಟಿ. ವೈ. ದಾಸನಕೊಪ್ಪ ಹಾಗೂ ಅಧ್ಯಯನ ಪ್ರವಾಸಕ್ಕಾಗಿ ಸವದತ್ತಿ ತಾಲೂಕು ಪಂಚಾಯತ್ ನಿಯೋಜನೆ ಮಾಡಿದ ರುದ್ರಾಪುರ ಗ್ರಾಮ ಪಂಚಾಯತ್ ಅಧಿಕಾರಿ ವಿಜಯ ಕುಮಾರ್ ಅಂಗಡಿ ಅವರು ಎರಡು ದಿನಗಳ ಪ್ರವಾಸದ ವೇಳೆ ತಂಡಕ್ಕೆ ಮಾರ್ಗದರ್ಶಕರಾಗಿ ಸಹಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.06: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.