Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
  • *ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ. 26: ಆಟಿ ಪಾಯಸ, ಬಗೆ ಬಗೆಯ ಹಿಟ್ಟು, ಪತ್ರೊಡೆ, ಕಣಿಲೆ ಪಲ್ಯ, ಅಕ್ಕಿ ರೊಟ್ಟಿ, ಮಾವಿನಹಣ್ಣಿನ ಸಾರು, ಬೈನೆ ಹುಡಿಯ ಹಲ್ವಾ, ತರಕಾರಿ ಇಡ್ಲಿ, ಪಾಪಿಟ್ಟು, ಕೋಳಿ ಸಾರು, ಮೊಟ್ಟೆ, ಮೀನು ಫ್ರೈ, ಹಣ್ಣಿನ ರಸಾಯನ, ಚರ್ಮೆ ಸೊಪ್ಪಿನ ಪಲ್ಯ, ಕೆಸ ಸಾರು, ನೀರು ದೋಸೆ, ಕೈಹುಳಿ ಚಟ್ನಿ, ಕೂಗಲೆ ಹಿಟ್ಟು, ಏಡಿ ಸಾರು, ಎಳ್ಳು-ಮೆಂತೆ, ಬಟರ್ ಫ್ರೂಟ್ ಹಲ್ವಾ ಹೀಗೆ ಬಗೆ ಬಗೆಯ ಆಟಿ ಹಬ್ಬದೂಟದ ಘಮಲು ಘಮ ಘಮಿಸಿದವು. ಇದು ಕಂಡು ಬಂದಿದ್ದು ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಆಟಿ ಜಂಬರದಲ್ಲಿ.

ಆಟಿ ತಿಂಗಳ ಸಾಂಪ್ರದಾಯಿಕ ಆಚರಣೆ, ವಿಶಿಷ್ಟ ಆಹಾರ ಪದ್ಧತಿ ಹಾಗೂ ಗೌಡ ಸಮುದಾಯದ ಸಾಂಸ್ಕೃತಿಕ ವೈಭವ ಆಟಿ ಜಂಬರದಲ್ಲಿ ಅನಾವರಣಗೊಂಡಿತು. ಮಹಿಳೆಯರು ತಮ್ಮ ಮನೆಗಳಲ್ಲಿ ಸಿದ್ಧಪಡಿಸಿಕೊಂಡು ಬಂದಿದ್ದ ಸಾಂಪ್ರದಾಯಿಕ ಖಾದ್ಯಗಳು ಎಲ್ಲರ ಗಮನ ಸೆಳೆದವು. ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಮಕ್ಕಂದೂರಿನ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಮಾಜಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ತಂದರು.

ಕೃಷಿಯಿಂದ ವಿಮುಖರಾಗಬಾರದು

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ, ಆಟಿ ತಿಂಗಳು ವೈಜ್ಞಾನಿಕವಾಗಿಯೂ, ಸಾಂಪ್ರದಾಯಿಕವಾಗಿಯೂ ವಿಶೇಷ ಮಹತ್ವ ಹೊಂದಿದೆ. ಈ ಸಂದರ್ಭದಲ್ಲಿ ಸಿಗುವ ಸಾಂಪ್ರದಾಯಿಕ ಆಹಾರ ಪದಾರ್ಥಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ರೈತರು ಕೃಷಿಯಿಂದ ವಿಮುಖರಾಗದೆ ಭತ್ತದ ಕೃಷಿಯನ್ನು ಮುಂದುವರಿಸಬೇಕು ಎಂದು ಕರೆ ನೀಡಿದರು.

ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ಕಚೇರಿ ನಿರ್ಮಾಣಕ್ಕೆ ರೂ. 25 ಸಾವಿರ ಹಾಗೂ ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದ ಕಟ್ಟಡ ಅಭಿವೃದ್ಧಿಗೆ ರೂ. 1 ಲಕ್ಷ ನೆರವು ನೀಡುವುದಾಗಿ ಭರವಸೆ ನೀಡಿದ ಆನಂದ್ ಕರಂದ್ಲಾಜೆ, ಇತರ ದಾನಿಗಳಿಂದಲೂ ಅಗತ್ಯ ಸಹಕಾರ ಒದಗಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅರೆಭಾಷೆ ಗೌಡ ನಿಗಮದ ಅಗತ್ಯದ ಕುರಿತು ಗಮನ ಸೆಳೆಯಲಾಗಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಾಸಕ ಮಂತರ್ ಗೌಡ ಅವರ ಒತ್ತಾಸೆಯಿಂದ ಶೀಘ್ರದಲ್ಲೇ ಬುನಾದಿ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಹಕಾರದ ಭರವಸೆ

ಉದ್ಯಮಿ ಹಾಗೂ ಸಮಾಜ ಸೇವಕ ಎಡಿಕೇರಿ ಪ್ರಸನ್ನ ಮಾತನಾಡಿ, ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು. ಯಾವುದೇ ಕೆಲಸ ಅಥವಾ ಕಾರ್ಯಕ್ರಮ ಮಾಡುವ ಸಂದರ್ಭದಲ್ಲಿ ಯಾಕಾಗಿ, ಯಾವಾಗ, ಯಾರು, ಹೇಗೆ, ಎಲ್ಲಿ ಮಾಡಬೇಕೆಂಬ ಬಗ್ಗೆ ಪೂರ್ವಾಲೋಚನೆ ಮಾಡಬೇಕೆಂದು ಐದು ‘ಡಬ್ಲ್ಯೂ’ಗಳ ಬಗ್ಗೆ ವಿವರಿಸಿದರು.

ಒಗ್ಗಟ್ಟಿರಬೇಕು

ಆಹಾರ ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದ ಕೊಡಗು-ದಕ್ಷಿಣ ಕನ್ನಡ ಗೌಡ ಒಕ್ಕಲಿಗರ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮೂಟೇರ ಪುಷ್ಪಾವತಿ ರಮೇಶ್ ಮಾತನಾಡಿ, ಗೌಡ ಸಮುದಾಯ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ತಮಗೆ ದೊರೆಯಬೇಕಾದ ಮೂಲಸೌಕರ್ಯ ಹಾಗೂ ಸ್ಥಾನಮಾನಗಳನ್ನು ಪಡೆದುಕೊಳ್ಳಬೇಕು ಎಂದರು.

ಗೌಡ ಯುವ ವೇದಿಕೆಯ ಸಹಯೋಗದೊಂದಿಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಒಕ್ಕಲಿಗ, ಅರೆಭಾಷೆ ಹಾಗೂ ತುಳು ಜಾನಪದ ಶೈಲಿಯ ಹಾಡುಗಳನ್ನು ಕ್ಯಾಸೆಟ್/ಸಿಡಿ ರೂಪದಲ್ಲಿ ಹೊರತರುವ ಉದ್ದೇಶವಿದ್ದು, ಸ್ವತಃ ರಚಿಸಿರುವ ಜನಪದ ಹಾಡುಗಳನ್ನು ಸಮುದಾಯದವರು ನೀಡಿದರೆ ಅವುಗಳನ್ನು ಬಳಸಿಕೊಳ್ಳಲಾಗುವುದು ಎಂದರು.

ಪ್ರತಿಭೆ ಪ್ರದರ್ಶಿಸಬೇಕು

ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಮಾತನಾಡಿ, ಮಹಿಳೆಯರು ಆಕಾಶವಾಣಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಹೆಸರುವಾಸಿಯಾಗಬೇಕು ಎಂದು ಸಲಹೆ ನೀಡಿದರು.

ಸಂಸ್ಕೃತಿ ಉಳಿವಿಗೆ ಶ್ರಮ

ಕೊಡಗು-ದಕ್ಷಿಣ ಕನ್ನಡ ಗೌಡ ಒಕ್ಕಲಿಗರ ಮಹಿಳಾ ಒಕ್ಕೂಟದ ಸ್ಥಾಪಕಾಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್ ಮಾತನಾಡಿ, ಕೊಡಗು ಗೌಡ ವಿದ್ಯಾ ಸಂಘವನ್ನು ಸ್ಥಾಪಿಸಿದವರು ಮಕ್ಕಂದೂರು ಗ್ರಾಮದ ಕುಂಬಗೌಡನ ಕುಶಾಲಪ್ಪ ಎಂಬುದನ್ನು ಸ್ಮರಿಸಿಕೊಂಡರು. ಸಂಘವನ್ನು ಕಟ್ಟುವುದು ಸುಲಭವಾದರೂ ಅದನ್ನು ನಿರಂತರವಾಗಿ ಮುನ್ನಡೆಸುವುದು ಸವಾಲಿನ ಕೆಲಸ. ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ನವೀನ ಕುಮಾರಿ ನೇತೃತ್ವದ ಉತ್ಸಾಹಿ ತಂಡ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮುದಾಯದ ಏಳಿಗೆ ಹಾಗೂ ಸಂಸ್ಕೃತಿಯ ಉಳಿವಿಗೆ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು.

ಸ್ಕೌಟ್ಸ್ ಆಂಡ್ ಗೈಡ್ಸ್ ತರಬೇತಿ ಆಯುಕ್ತ ಕುಂಬಗೌಡನ ರಂಜಿತ್ ಆಟಿ ತಿಂಗಳ ಮಹತ್ವ ಹಾಗೂ ಅದರ ಹಿಂದಿರುವ ಸಾಂಪ್ರದಾಯಿಕ ಆಚರಣೆಗಳ ಕುರಿತು ವಿವರಿಸಿದರು.

ಮಕ್ಕಂದೂರು-ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ತೂಟೆರ ನವೀನ ಕುಮಾರಿ ಮಾತನಾಡಿ, ಮಹಿಳಾ ಒಕ್ಕೂಟ ನಡೆದುಬಂದ ಹಾದಿ, ಇದುವರೆಗೆ ಕೈಗೊಂಡ ಕಾರ್ಯಕ್ರಮಗಳು ಹಾಗೂ ಮಹಿಳೆಯರ ಸಂಘಟಿತ ಪ್ರಯತ್ನಗಳ ಕುರಿತು ಮಾಹಿತಿ ನೀಡಿದರು. ಒಕ್ಕೂಟದ ಮಹಿಳೆಯರ ಶ್ರಮ ಮತ್ತು ಪ್ರಯತ್ನವನ್ನು ಶ್ಲಾಘಿಸಿದರು.

ಗೌಡ ಸಮಾಜದ ಉಪಾಧ್ಯಕ್ಷ ಕೊಟ್ಟಕೇರಿಯನ ಪ್ರದೀಪ್ ಮಾತನಾಡಿ, ಜನಾಂಗದ ಒಗ್ಗಟ್ಟು ಹಾಗೂ ಶ್ರೇಯೋಭಿವೃದ್ಧಿಗಾಗಿ ಏರ್ಪಡಿಸಲಾಗುವ ಇಂತಹ ಕಾರ್ಯಕ್ರಮಗಳಲ್ಲಿ ಆಹ್ವಾನವಿಲ್ಲದಿದ್ದರೂ ಅಭಿಮಾನದಿಂದ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದು ಹೇಳಿದರು.

ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದ ಅಧ್ಯಕ್ಷ ಲಕ್ಕಪ್ಪನ ಹರೀಶ್ ಅಧ್ಯಕ್ಷತೆ ವಹಿಸಿ, ಸಮಾಜ ಹಾಗೂ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗುವ ಎಲ್ಲ ಕಾರ್ಯಕ್ರಮಗಳಿಗೂ ಸಹಕರಿಸುವಂತೆ ಕೋರಿದರು. ಸಮಾಜದ ಪದಾಧಿಕಾರಿ ಕುಡೆಕಲ್ ಸಂತೋಷ್ ಪ್ರಾಸ್ತಾವಿಕವಾಗಿ ಮಾತನಾಡಿ, ಗೌಡ ಸಮಾಜ ಹಾಗೂ ಮಹಿಳಾ ಒಕ್ಕೂಟದ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು.

ಗೌಡ ಸಮಾಜದ ಕಾರ್ಯದರ್ಶಿ ಚೀಯಂಡಿ ಸುಜಯ್, ಪದಾಧಿಕಾರಿಗಳಾದ ಚೌಕಿ ರಘು ತಿಮ್ಮಯ್ಯ, ಅಣ್ಣಚ್ಚಿರ ಸತೀಶ್, ಕುಂಬಗೌಡನ ಮಧು, ಲಕ್ಕಪ್ಪನ ವಿಜೇತ, ಮಾನಡ್ಕ ಮಂಜು, ತೇಲಬೈಲು ದಿನೇಶ್, ಈರೇಗೌಡನ ತೀರ್ಥ ಸೇರಿದಂತೆ ಅನೇಕರು ಸಹಕಾರ ನೀಡಿದರು.

ಅಗೆ ತೆಗೆಯುವ ಸಾಂಪ್ರದಾಯಿಕ ಆಚರಣೆಯಿಂದ ಆರಂಭಗೊಂಡು, ಆಟಿ ತಿಂಗಳ ಅಪರೂಪದ ಖಾದ್ಯಗಳ ಪ್ರದರ್ಶನದವರೆಗೆ ಇಡೀ ಕಾರ್ಯಕ್ರಮವು ಗೌಡ ಸಮುದಾಯದ ಒಗ್ಗಟ್ಟು ಹಾಗೂ ಸಂಸ್ಕೃತಿಯ ಚಿತ್ರಣವನ್ನು ಕಟ್ಟಿಕೊಟ್ಟಿತು. ಆಟಿ ಜಂಬರವು ಕೇವಲ ಸಂಭ್ರಮದ ಕಾರ್ಯಕ್ರಮವಾಗಿರದೆ, ಹಿರಿಯರಿಂದ ಬಂದ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅರ್ಥಪೂರ್ಣ ವೇದಿಕೆಯಾಗಿ ಗಮನ ಸೆಳೆಯಿತು.

ತೇಲಬೈಲು ದಿವಿನ ಪ್ರಾರ್ಥಿಸಿದರು. ಮಹಿಳಾ ಒಕ್ಕೂಟದ ನಿರ್ದೇಶಕಿ ಕುಂಬಗೌಡನ ಲೇಖ ಜಗದೀಶ್ ಸ್ವಾಗತಿಸಿದರು. ಉಪಾಧ್ಯಕ್ಷೆ ಕುಂಬಗೌಡನ ಕವಿತಾ ಸುನಿಲ್ ಸದಸ್ಯತ್ವದ ವಿವರ ನೀಡಿದರೆ, ನಿರ್ದೇಶಕಿ ಮಳ್ಳನ ಹೇಮಾ ವಿಜಯ್ ದಾನಿಗಳ ವಿವರ ನೀಡಿದರು. ಕಾರ್ಯದರ್ಶಿ ತೇಲಬೈಲು ಆಶಿಕಾ ದಿನೇಶ್ ಕಾರ್ಯಕ್ರಮ ನಿರ್ವಹಿಸಿದರೆ, ಸಹ ಕಾರ್ಯದರ್ಶಿ ಕುಡೆಕಲ್ ಸವಿತಾ ಸಂತೋಷ್ ವಂದಿಸಿದರು.

ಆರಂಭದಲ್ಲೇ ವಿಶೇಷ

ಬಾಕ್ಸ್/ಚಿತ್ರ

ಕಾರ್ಯಕ್ರಮದ ಆರಂಭವೇ ವಿಶೇಷವಾಗಿತ್ತು. ಮಹಿಳೆಯರು ವೇದಿಕೆಯ ಮುಂಭಾಗದಲ್ಲಿ ಸಾಂಪ್ರದಾಯಿಕವಾಗಿ ಅಗೆ ತೆಗೆಯುವ ಮೂಲಕ ಆಟಿ ಜಂಬರಕ್ಕೆ ಚಾಲನೆ ನೀಡಿದ್ದು ವಿಶೇಷ ಆಕರ್ಷಣೆಯಾಗಿತ್ತು. ಅಗೆ ತೆಗೆಯುವ ಕಾರ್ಯದ ಸಾರಥ್ಯ ವಹಿಸಿದ್ದ ಒಕ್ಕೂಟದ ಅಧ್ಯಕ್ಷೆ ಅಗೆ ತೆಗೆಯುವ ಮಹತ್ವ ಹಾಗೂ ಸಾಂಪ್ರದಾಯಿಕವಾಗಿ ಅಗೆ ಬೊಟ್ಟು ತಯಾರಿಸುವ ವಿಧಾನವನ್ನು ಪರಿಚಯಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.26: ಕೊಡಗು ಜಿಲ್ಲೆಯಲ್ಲಿ ಮೋಡ ಭಿತ್ತನೆ ಮಾಡಲ್ಲ. ಅದರ ಅಗತ್ಯವೂ ಜಿಲ್ಲೆಗೆ ಇಲ್ಲ ಎಂದು ಮಡಿಕೇರಿ…

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026

*ಹಬ್ಬದ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿಶೇಷ ಅನುಮತಿ ನೀಡಿ : ಕೊಡಗು ಯುವ ಸೇನಾ ಒತ್ತಾಯ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.