Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಆ.26: ಚಾಲಕನ ನಿಯಂತ್ರಣ ಕಳೆದುಕೊಂಡ ಸರಕು ತುಂಬಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್ ವಾಹನದ ಮೇಲೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯನಾಡು ಅಬ್ಬಿಕೊಲ್ಲಿ ಬಳಿ ನಡೆದಿದೆ.
ಗುಜರಾತ್ ರಾಜ್ಯದ ಅಹಮದಾಬಾದ್ ಮೂಲದ 8 ಮಂದಿ ಪ್ರವಾಸಿಗರು ನೆನ್ನೆ ದಿನ ಮಡಿಕೇರಿಗೆ ಆಗಮಿಸಿ ಇಲ್ಲಿನ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಬುಧವಾರ ಈ ತಂಡ ಟಿ.ಟಿ ವಾಹನದಲ್ಲಿ(ಕೆಎ.13.ಸಿ.3250) ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದರು. ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಮದೆನಾಡು-ಜೋಡುಪಾಲ ನಡುವಿನ ಅಬ್ಬಿಕೊಲ್ಲಿ ಎಂಬಲ್ಲಿ ಈ ಪ್ರವಾಸಿ ತಂಡ ಹೆದ್ದಾರಿ ಬದಿ ಇರುವ ಜಲಪಾತ ವೀಕ್ಷಿಸಿ ಟೀ ಕುಡಿಯುವ ಸಲುವಾಗಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮೂವರು ವಾಹನದಿಂದ ಕೆಳಗೆ ಇಳಿದಿದ್ದರು. ವಾಹನದಲ್ಲಿದ್ದ ಚಾಲಕ ಸಹಿತ 6 ಮಂದಿ ಕೆಳಗೆ ಇಳಿಯುವ ಸಂದರ್ಭ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಲ್ಲಿಸಿದ್ದ ಟಿ.ಟಿ ವಾಹನದ ಮೇಲೆ ಮಗುಚಿದೆ.
ಪರಿಣಾಮ ಟಿ.ಟಿ ವಾಹನ ಹೆದ್ದಾರಿ ಬದಿಯ ಬರೆಗೆ ಅಪ್ಪಳಿಸಿದ್ದು ವಾಹದಿಂದ ಹೊರ ಬರುವ ಎಲ್ಲಾ ಕಿಟಕಿ ಬಾಗಿಲುಗಳು ಜಖಂ ಆಗಿ ಬಂದ್ ಆಗಿದ್ದವು. ಇದರಿಂದ ಸ್ಥಳೀಯ ನಿವಾಸಿಗಳು ಗಾಯಾಳುಗಳನ್ನು ಹೊರ ತೆಗೆಯಲು ಹರ ಸಾಹಸ ಪಡುವಂತಾಯಿತು. ಆ ಬಳಿಕ ಕ್ರೇನ್ ಅನ್ನು ಸ್ಥಳಕ್ಕೆ ಕರೆಯಿಸಿ ಲಾರಿಯನ್ನು ಎಳೆದು ಬದಿಗೆ ಸರಿಸಿ ಕಿಟಕಿ ಬಾಗಿಲುಗಳನ್ನು ಕ್ರೇನ್ ಸಹಾಯದಿಂದ ಎಳೆದು 4 ಮಂದಿ ಗಾಯಾಳುಗಳನ್ನು ಸುರಕ್ಷಿತವಾಗಿ ಹೊರ ತೆಗೆದರು. ಬಳಿಕ ಗಾಯಾಳುಗಳನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಾಳುಗಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಘಟನೆ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.