ಬೆಂಗಳೂರು, NEWS DESK ಆ.26: ನೂತನವಾಗಿ ಆಯ್ಕೆಯಾಗಿರುವ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳು ಹಾಗೂ ಅಹವಾಲುಗಳನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಾರ್ ಕೌನ್ಸಿಲ್‌ಗೆ ನೂತನ ಕಟ್ಟಡ ನಿರ್ಮಾಣ ಹಾಗೂ ವಕೀಲರ ವೆಲ್ಫೇರ್ ನಿಧಿಗೆ ಸಂಬಂಧಿಸಿದಂತೆ ಪ್ರಮುಖವಾಗಿ ಚರ್ಚೆ ನಡೆಸಲಾಯಿತು. ವಕೀಲರ ಹಿತಾಸಕ್ತಿ ಹಾಗೂ ಕಲ್ಯಾಣಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸುವಂತೆ ಸದಸ್ಯರು ಮನವಿ ಮಾಡಿದರು.
ಭೇಟಿಯ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರು ಉಪಸ್ಥಿತರಿದ್ದರು.







