
ಮೂರ್ನಾಡು ಆ.26 NEWS DESK : ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಡಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಕಾವೇರಿ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಸಂಪನ್ಮೂಲ ವ್ಯಕ್ತಿ ಡಾ. ಕೆ.ಎಂ. ಬಾಬು ಅವರು ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಸಂಘದ ಅಧೀಕ್ಷಕ ಸತೀಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂರ್ನಾಡು ವಲಯದ ಮೇಲ್ವಿಚಾರಕ ಸುಜೀತ್ ಕುಲಾಲ್ ಹಾಗೂ ಮೂರ್ನಾಡು ವಲಯದ ಸೇವಾ ಪ್ರತಿನಿಧಿ ದಿವ್ಯ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕಿ ರೋಹಿಣಿ ಸ್ವಾಗತಿಸಿದರು. ರಶ್ಮಿ ಕಾರ್ಯಕ್ರಮ ನಿರೂಪಿಸಿದರು. ಸೌಮಿನಿ ವಂದಿಸಿದರು.
ವರದಿ: ನಾಗರಾಜ್ ಟಿ.ಸಿ., ಮೂರ್ನಾಡು










