
ಮಡಿಕೇರಿ NEWS DESK ಆ.28 : ಮಡಿಕೇರಿ ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣಾಷ್ಟಮಿ ಹಾಗೂ ಶ್ರೀ ಕೃಷ್ಣ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 4ರಂದು ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ದೇವಾಲಯದಲ್ಲಿ ರಾತ್ರಿ ವಿಶೇಷ ಪೂಜೆ ನೆರವೇರಲಿದ್ದು, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ವತಿಯಿಂದ ವಿಶೇಷ ಭಜನಾ ಕಾರ್ಯಕ್ರಮವೂ ನಡೆಯಲಿದೆ. *ಮೊಸರು ಕುಡಿಕೆ ಒಡೆಯುವ ಸ್ಪರ್ಧೆ, ಮಕ್ಕಳಿಗೆ ಛದ್ಮವೇಷ ಸ್ಪರ್ಧೆ* ಸೆಪ್ಟೆಂಬರ್ 6ರಂದು ಭಾನುವಾರ ಸಂಜೆ 4 ಗಂಟೆಗೆ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 6 ವರ್ಷದೊಳಗಿನ ಮಕ್ಕಳಿಗಾಗಿ ಶ್ರೀ ಕೃಷ್ಣ ಹಾಗೂ ರಾಧೆ ಛದ್ಮವೇಷ ಸ್ಪರ್ಧೆಯನ್ನೂ ಹಮ್ಮಿಕೊಳ್ಳಲಾಗಿದೆ. ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಕೃಷ್ಣನ ಆರಾಧನೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮನವಿ ಮಾಡಿದೆ. ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸುವವರು ಕೆಳಗಿನ ಮೊಬೈಲ್ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು: ಜಿ.ಎಲ್. ದಾಸ – 94821 92248, ಜಿ.ಸಿ. ರಮೇಶ್ – 97314 11523, ಜಿ.ಆರ್. ಗಣೇಶ್ – 80958 58864










