ಮಡಿಕೇರಿ, NEWS DESK ಆ.28: ಕೊಡಗು ಜಿಲ್ಲಾ ಪೊಲೀಸ್ ಕಚೇರಿ ವತಿಯಿಂದ ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯನ್ನು ಆಗಸ್ಟ್ 29ರಂದು ಆಯೋಜಿಸಲಾಗಿದೆ.
ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಜಿಲ್ಲೆಯ ವಿವಿಧ ಉಪವಿಭಾಗಗಳ ವ್ಯಾಪ್ತಿಯ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರು ಸಭೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ.
ಸಭೆಯಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದ ಮುಖಂಡರು ತಮ್ಮ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಪ್ರಸ್ತಾಪಿಸಿ, ಸೂಕ್ತ ಪರಿಹಾರಕ್ಕಾಗಿ ಮನವಿ ಸಲ್ಲಿಸಬಹುದಾಗಿದೆ.
ಸಭೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಸಭೆಯ ಕುರಿತು ಸಂಬಂಧಪಟ್ಟ ಸಮುದಾಯದ ಮುಖಂಡರಿಗೆ ಮಾಹಿತಿ ನೀಡಿ, ತಪ್ಪದೇ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ತಿಳಿಸಿದ್ದಾರೆ.








