Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»Uncategorized»ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ
Uncategorized

ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ

ಆಗಷ್ಟ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಆ.28: ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಬಿಟ್ಟು ಕೊಡಗಿನ ಜನರು ಹಾಗೂ ರೈತರ ಹಿತಾಸಕ್ತಿಗೆ ಅನುಗುಣವಾಗಿ ಸ್ಪಷ್ಟವಾದ ದಾಖಲೆ ಆಧಾರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರಕಾರ ಹಾಗೂ ಶಾಸಕರು ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಇದು ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ರೈತರಿಗೆ ಸರಕಾರ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು 2013ರಲ್ಲಿ ಅಂದಿನ ಕೇಂದ್ರ ಸರಕಾರ ಒಪ್ಪಿಕೊಂಡಿದ್ದು, ವರದಿ ಅಂಗೀಕಾರಗೊಂಡ ಬಳಿಕವೂ ಇದನ್ನು ಏಕೆ ಅನುಷ್ಠಾನಗೊಳಿಸಲಾಗಿಲ್ಲ ಎಂಬುದಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕೇಂದ್ರ ಸರಕಾರವನ್ನು ಪ್ರಶ್ನಿಸುತ್ತಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ರಾಜ್ಯ ಸರಕಾರಕ್ಕೆ ಅವಕಾಶವಿದೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವೂ ತನ್ನ ಆದೇಶದಲ್ಲಿ ರಾಜ್ಯ ಸರಕಾರಕ್ಕೆ ಅವಕಾಶ ನೀಡಿರುವುದಾಗಿ ಹೇಳಿಕೊಂಡಿದೆ. ಹೀಗಾಗಿ ರಾಜ್ಯ ಸರಕಾರ ತನ್ನ ಆಕ್ಷೇಪಣೆಗಳು ಹಾಗೂ ಅಗತ್ಯ ತಿದ್ದುಪಡಿಗಳ ಪ್ರಸ್ತಾವನೆಯನ್ನು ದಾಖಲೆಗಳೊಂದಿಗೆ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಡಗಿನ ಜನರು ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ವಿರೋಧಿಸುತ್ತಿಲ್ಲ. ತಮ್ಮ ಸ್ವಂತ ತೋಟಗಳು ಹಾಗೂ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷö್ಮ ಪ್ರದೇಶಗಳೆಂದು ಗುರುತಿಸುವುದಕ್ಕೆ ಮಾತ್ರ ವಿರೋಧವಿದೆ ಎಂದು ರಾಕೇಶ್ ದೇವಯ್ಯ ಸ್ಪಷ್ಟಪಡಿಸಿದ್ದಾರೆ.
ದಾಖಲೆಗಳ ಪ್ರಕಾರ ಅರಣ್ಯ ಪ್ರದೇಶಗಳನ್ನು ಮಾತ್ರ ಪರಿಸರ ಸೂಕ್ಷö್ಮ ಪ್ರದೇಶವೆಂದು ಗುರುತಿಸಿ, ಅದಕ್ಕೆ ಸೀಮಿತವಾಗಿ ‘ಜೀರೋ ಬಫರ್ ಝೋನ್’ ನಿಗದಿಪಡಿಸಬೇಕು. ಇದಕ್ಕಾಗಿ ರಾಜ್ಯ ಸರಕಾರ ಮೊದಲು ಭೌತಿಕ ಸಮೀಕ್ಷೆ ನಡೆಸಿ, ನೈಸರ್ಗಿಕ ಅರಣ್ಯ, ರೈತರ ತೋಟಗಳು ಹಾಗೂ ಜನವಸತಿ ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕು. ಕೇರಳ ರಾಜ್ಯ ಸರಕಾರ ಇದೇ ರೀತಿಯ ಕ್ರಮ ಕೈಗೊಂಡು ತನ್ನ ರಾಜ್ಯದ ಜನರ ಹಿತಾಸಕ್ತಿಯನ್ನು ಕಾಪಾಡಿದೆ. ಕರ್ನಾಟಕ ಸರಕಾರ ಕೇರಳದ ಮಾದರಿಯಲ್ಲಿ ತನ್ನ ಆಕ್ಷೇಪಣೆ ಹಾಗೂ ತಿದ್ದುಪಡಿಗಳನ್ನು ಕೇಂದ್ರಕ್ಕೆ ಸಲ್ಲಿಸಬೇಕು.
ರಾಜ್ಯ ಸರಕಾರ ತನ್ನ ಆಕ್ಷೇಪಣೆ ಮತ್ತು ತಿದ್ದುಪಡಿಗಳನ್ನು ಕೇಂದ್ರಕ್ಕೆ ಕಳುಹಿಸಿದ ಬಳಿಕ ಸಂಬಂಧಪಟ್ಟ ಸಮಿತಿ ಹಾಗೂ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಅವರು ಈಗಾಗಲೇ ತಿಳಿಸಿದ್ದಾರೆ. ರಾಜ್ಯ ಸರಕಾರ ಮೊದಲು ಈ ಪ್ರಕ್ರಿಯೆಯನ್ನು ಕೈಗೊಂಡು ನಂತರ ಕೇಂದ್ರ ಸರಕಾರದೆಡೆಗೆ ಬೊಟ್ಟು ಮಾಡಲಿ ಎಂದು ತಿಳಿಸಿದ್ದಾರೆ.
ಅರಣ್ಯ ಸಂರಕ್ಷಣೆಗೆ ಕೊಡಗಿನ ರೈತರು ಹಾಗೂ ಜನರು ಸದಾ ಬೆಂಬಲವಾಗಿ ನಿಂತಿದ್ದಾರೆ. ಪರಿಸರ ಸಂರಕ್ಷಣೆಯ ಜೊತೆಗೆ ರೈತರು ಮತ್ತು ಜನವಸತಿ ಪ್ರದೇಶಗಳ ಹಿತಾಸಕ್ತಿಯನ್ನೂ ಕಾಪಾಡುವ ಜವಾಬ್ದಾರಿ ಸರಕಾರದ್ದಾಗಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಜನರ ಹಾಗೂ ರೈತರ ನೆರವಿಗೆ ರಾಜ್ಯ ಸರಕಾರ ನಿಲ್ಲಬೇಕು ಎಂದು ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ

ಸೆಪ್ಟೆಂಬರ್ 15, 2026

“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ

ಸೆಪ್ಟೆಂಬರ್ 5, 2026

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸೆಪ್ಟೆಂಬರ್ 1, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.15: ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನೇಸರ ಉದ್ಯಾನದಲ್ಲಿ ಅಕ್ಟೋಬರ್ 17ರಂದು…

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.