ಮಡಿಕೇರಿ, NEWS DESK ಆ.29: ಮಡಿಕೇರಿ ತಾಲೂಕು ಮಟ್ಟದ ಅಂತರ ಶಾಲಾ ಅಂಡರ್–14 ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ತಂಡದಲ್ಲಿ ಯಶಸ್ ಮಂದಣ್ಣ, ಶೋಧನ್, ಅಕ್ಷಯ್ ಹಾಗೂ ಜೀವಿತ್ ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಜಯ ತಂದುಕೊಟ್ಟರು.
ಇದೇ ವೇಳೆ ಅಂಡರ್–17 ವಿಭಾಗದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ಎರಡೂ ತಂಡಗಳು ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿವೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.








