ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ ಬಾಂದವ್ಯವನ್ನು ಗಟ್ಟಿಗೊಳಿಸುವ ಶಾಶ್ವತ ಬಂಧ ಎಂದು ಸೇವ ಭಾರತಿ ಜಿಲ್ಲಾಧ್ಯಕ್ಷರಾದ ಚಂದ್ರನ್ ಅಭಿಪ್ರಾಯ ಪಟ್ಟರು.
ವಿರಾಜಪೇಟೆ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ರಕ್ಷಾ ಬಂಧನವು ಇಂದು ರಕ್ತ ಸಂಬಂದವನ್ನು ಮೀರಿ ನಿಂತ ಹಬ್ಬವಾಗಿದ್ದು ಸಹೋದರತೆಯನ್ನು ಬಿತ್ತುವ ಹಬ್ಬ. ಸಹೋದರತೆಯಿಂದ ಸಾಮರಸ್ಯ , ಇವೆರಡು ಸೇರಿ ಸಂಘಟನೆ ನಂತರ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಇದು ಕೇವಲ ಹಬ್ಬ ಮಾತ್ರವಲ್ಲ. ಭಾವನೆಗಳನ್ನು ಬೆಸೆಯುವ ಹಬ್ಬವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಪರಸ್ಪರ ಬಬ್ಬರನ್ನೊಬ್ಬರು ರಕ್ಷಣೆ ಮಾಡುತ್ತ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಯುವಶಕ್ತಿ ದೇಶದ ಶಕ್ತಿ ಎಂಬಂತೆ ಉತ್ತಮ ಆದರ್ಶ ಪ್ರಾಯರಾಗಿ ಜೀವನ ನಡೆಸಿ ಎಂದರು .
ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಬ್ರಾತೃತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾ ಬಂಧನ ಹಬ್ಬದ ನೀತಿಯಾಗಿದೆ.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಕೆ ಜಿ ವೀಣಾ ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಬ್ರಾತೃತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ. ಅದರಂತೆ ನಾವೆಲ್ಲರೂ ಸದಾ ಸೋದರತೆಯ ಪ್ರೀತಿ ಹಂಚುತ್ತ ಯಾರಿಗೂ ಕೆಡುಕನ್ನು ಬಯಸದೆ ಸದಾ ಒಳಿತನ್ನು ಯೋಚಿಸೋಣ ಎಂದರು.
ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ.ಪದ್ಮ ರಕ್ಷಾ ಬಂಧನದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ರಾಘವೇಂದ್ರ , ದಮಯಂತಿ , ಗಾಯತ್ರಿ , ಅಕ್ಷಿತಾ ನಾಯ್ಕ್ , ಅನುಪಮಾ , ಸುನಿಲ್ ,ಹಾಗೂ ಪದವಿ , ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಸಿಬ್ಬಂದಿಗಳು ಹಾಜರಿದ್ದರು.









