Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.31 : ಕಾವೇರಿ ನದಿ ನೀರಿನಿಂದ ಸಾಕಷ್ಟು ಲಾಭ ಮಾಡಿಕೊಳ್ಳುತ್ತಿರುವ ರಾಜ್ಯ ಸರಕಾರ ಕಾವೇರಿಯ ಜನ್ಮ ಸ್ಥಳ ಕೊಡಗಿನ ಅಭಿವೃದ್ಧಿಗೆ ದೊಡ್ಡ ಮೊತ್ತದ ಅನುದಾನವನ್ನು ನೀಡದೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಬಾರಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಎಲ್ಲಾ ರಸ್ತೆಗಳನ್ನು ಪುನರ್ ಡಾಂಬರೀಕರಣ ಮತ್ತು ಕಾಂಕ್ರಿಟೀಕರಣ ಮಾಡುವ ಅನಿವಾರ್ಯತೆ ಇದೆ. ಆದ್ದರಿಂದ ಕೊಡಗಿನ ರಸ್ತೆಗಳ ಅಭಿವೃದ್ಧಿಗಾಗಿ ರಾಜ್ಯ ಸರಕಾರ ರೂ.1 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನ್ನು ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ. ಕೊಡಗಿನಲ್ಲಿ ಉತ್ತಮ ಮಳೆಯಾಗುವುದರಿಂದ ರಾಜ್ಯದ ಕೋಟ್ಯಾಂತರ ಜನ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ. ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ನಡೆಯುತ್ತಿರುವ ಸಂಘರ್ಷ ಶಮನವಾಗಲು ಜಿಲ್ಲೆಯಲ್ಲಾಗಿರುವ ಮಳೆಯೇ ಕಾರಣವಾಗಿದೆ. ಮಳೆಗಾಗಿ ಪ್ರಾರ್ಥನೆ ಸಲ್ಲಿಸುವ ಸರಕಾರ ಮಳೆಯಿಂದಾಗಿ ಅನೇಕ ಕಷ್ಟನಷ್ಟಗಳನ್ನು ಅನುಭವಿಸುವ ಜಿಲ್ಲೆಗೆ ದೊಡ್ಡ ಮೊತ್ತದ ಅನುದಾನವನ್ನು ನೀಡದೆ ಮಲತಾಯಿ ಧೋರಣೆ ತೋರುವುದು ಸರಿಯಲ್ಲ. ಕಾವೇರಿ ತುಲಾಸಂಕ್ರಮಣ ಜಾತ್ರೆಗೆ ಸರಕಾರ 2 ಕೋಟಿ ರೂ.ಗಳನ್ನು ನೀಡುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಇದು ಮೂಗಿಗೆ ತುಪ್ಪ ಸವರುವ ಪ್ರಯತ್ನವಾಗಿದ್ದು, ತಲಕಾವೇರಿ ಹಾಗೂ ಭಾಗಮಂಡಲ ಕ್ಷೇತ್ರಗಳ ರಸ್ತೆಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನವನ್ನು ಬಿಡುಗಡೆ ಮಾಡಬೇಕು. ರಾಜ್ಯದ ಎಲ್ಲಾ ಪುಣ್ಯ ಕ್ಷೇತ್ರಗಳ ರಸ್ತೆಗಳು ಗುಣಮಟ್ಟದ ಕಾಮಗಾರಿಯೊಂದಿಗೆ ಉನ್ನತ ಮಟ್ಟದಲ್ಲಿವೆ. ಆದರೆ ದಕ್ಷಿಣ ಗಂಗೆ ಖ್ಯಾತಿಯ ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ರಸ್ತೆ ಶಾಸಕರುಗಳಿಗೇ ಪ್ರೀತಿ ಎನ್ನುವಂತ್ತಿದೆ. ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ವಾರ್ಷಿಕ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಪ್ರವಾಸೋದ್ಯಮದ ಮೂಲಕ ರಾಜ್ಯ ಸರಕಾರಕ್ಕೆ ಹೆಚ್ಚು ಆದಾಯ ಹರಿದು ಬರುತ್ತಿದೆ. ಆದರೆ ಪುಣ್ಯ ಕ್ಷೇತ್ರ ತಲಕಾವೇರಿಗೆ ಸರ್ವಋತು ರಸ್ತೆ ನಿರ್ಮಾಣಕ್ಕೆ ಸರಕಾರ ಆಸಕ್ತಿ ತೋರುತ್ತಿಲ್ಲ. ಅಲ್ಲದೆ ಈ ಬಗ್ಗೆ ಶಾಸಕರು ಕೂಡ ಕಾಳಜಿ ವಹಿಸುತ್ತಿಲ್ಲ. ಕಾಂಗ್ರೆಸ್ ಸರಕಾರ ಬಂದಾಗಿನಿAದ ಜಿಲ್ಲೆಗೆ ವಿವಿಧ ಯೋಜನೆಗಳು ಘೋಷಣೆಯಾಯಿತೇ ಹೊರತು ಯಾವುದೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಜಿಲ್ಲೆಯ ಜನರಿಗೆ ಸೂರ್ಯ, ಚಂದ್ರರನ್ನು ತೋರಿಸಿ ಭ್ರಮೆಯನ್ನಷ್ಟೇ ಮೂಡಿಸಲಾಗುತ್ತಿದೆ ಎಂದು ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ.
ಮಳೆ, ಚಳಿ, ಗಾಳಿಯೊಂದಿಗೆ ಜೀವನ ಸಾಗಿಸುತ್ತಿರುವ ಕೊಡಗಿನ ಜನ ತ್ಯಾಗಮಯಿಗಳಾಗಿದ್ದಾರೆ. ಕಾವೇರಿ ನದಿ ನೀರಿನ ಲಾಭವನ್ನು ರಾಜ್ಯ ಮತ್ತು ಹೊರ ರಾಜ್ಯದ ಮಂದಿ ಪಡೆದುಕೊಳ್ಳುತ್ತಿದ್ದಾರೆ. ಆದರೆ ಜಿಲ್ಲೆಯ ಜನ ಮಳೆಯಿಂದ ಹದಗೆಟ್ಟ ರಸ್ತೆಯಲ್ಲಿ ಸುಗಮ ಸಂಚಾರವಿಲ್ಲದೆ ನಿತ್ಯ ಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆಗಳೆಲ್ಲವೂ ಗುಂಡಿಮಯವಾಗಿದ್ದು, ಪ್ರವಾಸಿಗರೆದುರು ಕೊಡಗು ತಲೆ ತಗ್ಗಿಸುವಂತ್ತಾಗಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಗೆ ಯಾವುದೇ ಬೃಹತ್ ಯೋಜನೆಗಳನ್ನು ನೀಡದ ಕಾಂಗ್ರೆಸ್ ಸರಕಾರ ಕನಿಷ್ಠ ರಸ್ತೆಗಳ ಅಭಿವೃದ್ಧಿಗಾದರೂ 1 ಸಾವಿರ ಕೋಟಿ ರೂ. ನೀಡಲಿ. ಜಿಲ್ಲೆಯ ಶಾಸಕರುಗಳು ಕೂಡ ಈ ಬೇಡಿಕೆಯ ಬಗ್ಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಲಿ ಎಂದು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.