Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  
  • *ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*
  • *ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*
  • *ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*
  • *ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
  • *ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*
  • *ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*
  • *ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*
  • *ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಆ.31 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮೆಡಿಕಲ್ ವಿಭಾಗ, ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ನಶೆ ಮುಕ್ತ ಭಾರತ ಅಭಿಯಾನ ಹಾಗೂ ಮಿಷನ್ ಸ್ಪಂದನ ಯೋಜನೆಯಡಿ ಆಯೋಜಿಸಲಾಗಿದ್ದ ಬೃಹತ್ ಜಾಗೃತಿ ಕಾರ್ಯಕ್ರಮಗಳು ವಿರಾಜಪೇಟೆ ನಗರ ಹಾಗೂ ಸುತ್ತಮುತ್ತಲಿನ ವಿವಿಧ ಕಾಲೇಜುಗಳಲ್ಲಿ ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ಭಾರತದಾದ್ಯಂತ ಸುಮಾರು 7,000 ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾದ 10 ಕೋಟಿ ನಶೆ ಮುಕ್ತ ಪ್ರತಿಜ್ಞೆಗಳ ಮಹಾ ಅಭಿಯಾನದ ಭಾಗವಾಗಿ ಈ ಜಾಗೃತಿ ತರಬೇತಿಗಳನ್ನು ನಡೆಸಲಾಯಿತು. ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡ ಹಾಗೂ ವಿವಿಧ ದುರಭ್ಯಾಸಗಳಿಂದ ಹೊರಬರಲು ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಆಧ್ಯಾತ್ಮಿಕ ಜ್ಞಾನ ಮತ್ತು ರಾಜಯೋಗ ಧ್ಯಾನದ ಕುರಿತು ವಿಶೇಷ ಮಾರ್ಗದರ್ಶನ ನೀಡಲಾಯಿತು. ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಎಂ.ಕೆ. ಪದ್ಮಾ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿತು. ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ.ವೀಣಾ ಅವರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಜೀವನದ ಕುರಿತು ಅರಿವು ಮೂಡಿಸಲಾಯಿತು. ಸೇಂಟ್ ಆನ್ಸ್ ಕಾಲೇಜು, ಪ್ರಾಂಶುಪಾಲರಾದ ತೃಪ್ತಿ ಬೊಪ್ಪಣ್ಣ ಅವರ ನೇತೃತ್ವದಲ್ಲಿ ಹಾಗೂ ಸರ್ವೋದಯ ಬಿಎಡ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಬಿ.ಕೆ. ಕೋಮಲ ಹಾಗೂ ಬಿ.ಕೆ. ಧನಲಕ್ಷ್ಮಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸನ್ಮಾರ್ಗದಲ್ಲಿ ನಡೆಯಲು ಹಾಗೂ ನಶೆ ಮುಕ್ತ ಸಮಾಜ ನಿರ್ಮಿಸಲು ಪ್ರತಿಜ್ಞಾವಿಧಿ ಬೋಧಿಸಿದರು. ನಶೆ ಮುಕ್ತ ಜೀವನದ ಮಹತ್ವದ ಬಗ್ಗೆ ಮಾಹಿತಿ ನೀಡಿ, ವ್ಯಸನಮುಕ್ತ ಜೀವನವು ಉತ್ತಮ ಆರೋಗ್ಯ, ಮನಸ್ಸಿನ ಶಾಂತಿ, ಉಜ್ವಲ ಭವಿಷ್ಯ ಹಾಗೂ ಸಕಾರಾತ್ಮಕ ಜೀವನಶೈಲಿಗೆ ಸಹಕಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಟ್ಟಣದ ವಿವಿಧ ಬಡಾವಣೆಗೆ ಒಳಚರಂಡಿ ಸಂಪರ್ಕಕ್ಕೆ ಅವಕಾಶ*  

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ಅಸುರಕ್ಷಿತ ಆಹಾರ ಮಾರಾಟಗಾರರ ವಿರುದ್ಧ ಕ್ರಮ*

ಆಗಷ್ಟ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.31 NEWS DESK : ಕೊಡಗು ಜಿಲ್ಲೆಯಲ್ಲಿ 2025-26 ಹಾಗೂ 2026-27ನೇ ಸಾಲಿನಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 899…

*ಸೆ.4 ರಂದು ಶ್ರೀಕೃಷ್ಣ ಜನ್ಮಾಷ್ಠಮಿ*

ಆಗಷ್ಟ್ 31, 2026

*ವಿರಾಜಪೇಟೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ : ಅರ್ಹರಿಗೆ ವೀಲ್‌ಚೇರ್, ವಾಟರ್ ಬೆಡ್ ವಿತರಣೆ*

ಆಗಷ್ಟ್ 31, 2026

*ನಶೆ ಮುಕ್ತ ಭಾರತ ಅಭಿಯಾನ : ವಿರಾಜಪೇಟೆಯ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ*

ಆಗಷ್ಟ್ 31, 2026

*ವಿರಕ್ತ ದೊಡ್ಡಮಠದಲ್ಲಿ ಪ್ರವಾದಿ ಮುಹಮ್ಮದ್ (ಸ) ಸೀರತ್ ಕೃತಿಗಳ ಬಿಡುಗಡೆ*

ಆಗಷ್ಟ್ 31, 2026

*ಕೂಗೂರಿನಲ್ಲಿ ಸೆ.6ರಂದು ಒಕ್ಕಲಿಗರ ಯುವ ವೇದಿಕೆಯಿಂದ 10ನೇ ವರ್ಷದ ಕೆಸರುಗದ್ದೆ ಕ್ರೀಡಾ ಹಬ್ಬ*

ಆಗಷ್ಟ್ 31, 2026

*ಸುಂಟಿಕೊಪ್ಪ : ನಾರಾಯಣ ಗುರು ಬಿಲ್ಲವ ಸೇವಾ ಸಂಘದಿಂದ ರಕ್ಷಾಬಂಧನ ಕಾರ್ಯಕ್ರಮ*

ಆಗಷ್ಟ್ 31, 2026

*ಮೂಗಿಗೆ ತುಪ್ಪ ಸವರುವುದನ್ನು ಬಿಡಿ, ರಸ್ತೆಗಳ ಅಭಿವೃದ್ಧಿಗೆ ರೂ.1000 ಕೋಟಿ ಕೊಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 31, 2026

*ಸುಂಟಿಕೊಪ್ಪ ಮಾಲಯಾಳಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 31, 2026

 *ದೆಹಲಿಯ ತಲ್ ಸೈನಿಕ್ ಶಿಬಿರಕ್ಕೆ ಕೊಡಗು ವಿದ್ಯಾಲಯದ ಎನ್.ಸಿ.ಸಿ ಕೆಡೆಟ್ ಆಯ್ಕೆ*

ಆಗಷ್ಟ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.