ಮಡಿಕೇರಿ, NEWS DESK ಸೆ.೦1: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೀದಿನಾಯಿಗಳ ಉಪಟಳವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೀದಿನಾಯಿಗಳಿಗೆ ರೇಬಿಸ್ ಲಸಿಕೆ ಹಾಕುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ನಗರ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವುದರ ಜೊತೆಗೆ ನಗರವನ್ನು ರೇಬಿಸ್ ಮುಕ್ತವನ್ನಾಗಿಸುವ ಉದ್ದೇಶದಿಂದ ನಗರಸಭೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ನಗರದ ವಿವಿಧ ಭಾಗಗಳಿಂದ ಇಂದು 43 ಬೀದಿನಾಯಿಗಳನ್ನು ಸೆರೆಹಿಡಿದು, ರೇಬಿಸ್ ಲಸಿಕೆ ನೀಡುವ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುವ ಕಾರ್ಯ ಕೈಗೊಳ್ಳಲಾಯಿತು.
ಬೀದಿನಾಯಿಗಳ ಉಪಟಳದಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಕಡಿಮೆ ಮಾಡುವ ಹಾಗೂ ರೇಬಿಸ್ ರೋಗದ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.







