
ಮಡಿಕೇರಿ ಸೆ.1 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1421 ಮತ್ತು ಸ್ಥಳೀಯ ವೃಂದದ 179 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಸೆ.6 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿ ಸೆ.6 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಮಡಿಕೇರಿ ಮತ್ತು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್, ಕೊಡಗು ವಿದ್ಯಾಲಯ ಮತ್ತು ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದದ 1421 ಮತ್ತು ಸ್ಥಳೀಯ ವೃಂದದ 179 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಕುರಿತು ಲಿಖಿತ ಪರೀಕ್ಷೆಯನ್ನು ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.









