Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ

ಸೆಪ್ಟೆಂಬರ್ 2, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಸೆ.2 : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಾವಳಿ), 2000 ನಿಯಮಗಳನ್ನು ಸಾರ್ವಜನಿಕರು ಹಾಗೂ ಕಾರ್ಯಕ್ರಮಗಳ ಆಯೋಜಕರು ಕಡ್ಡಾಯವಾಗಿ ಪಾಲಿಸುವಂತೆ ಕೊಡಗು ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಡಿಜೆ ಅಥವಾ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಿವಿಧ ಪ್ರದೇಶಗಳಿಗೆ ನಿಗದಿಪಡಿಸಿರುವ ಡೆಸಿಬಲ್ ಮಿತಿಯನ್ನು ಮೀರಿಯೂ ಧ್ವನಿ ಹೊರಸೂಸಬಾರದು ಎಂದು ಸೂಚಿಸಲಾಗಿದೆ. ವಸತಿ ಪ್ರದೇಶಗಳಲ್ಲಿ ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್; ವಾಣಿಜ್ಯ ಪ್ರದೇಶಗಳಲ್ಲಿ ಹಗಲು 65, ರಾತ್ರಿ 55 ಡೆಸಿಬಲ್; ಕೈಗಾರಿಕಾ ಪ್ರದೇಶಗಳಲ್ಲಿ ಹಗಲು 75, ರಾತ್ರಿ 70 ಡೆಸಿಬಲ್ ಹಾಗೂ ಶಾಂತ ಪ್ರದೇಶಗಳಾದ ಆಸ್ಪತ್ರೆ, ಶಾಲೆ ಮತ್ತಿತರ ಸ್ಥಳಗಳ ಸುತ್ತಮುತ್ತ ಹಗಲು 50, ರಾತ್ರಿ 40 ಡೆಸಿಬಲ್ ಮಿತಿ ನಿಗದಿಪಡಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಆಯೋಜಕರು ಹಾಗೂ ಮಾಲೀಕರ ವಿರುದ್ಧ ಪರಿಸರ ಸಂರಕ್ಷಣಾ ಕಾಯ್ದೆ-1986ರ ಸೆಕ್ಷನ್ 15ರ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. ತಪ್ಪು ಸಾಬೀತಾದಲ್ಲಿ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ.ವರೆಗೆ ದಂಡ, ಅಥವಾ ಎರಡನ್ನೂ ವಿಧಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಅಲ್ಲದೆ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸ್ಥಳದಲ್ಲೇ ಡಿಜೆ ಸೆಟ್‌, ಸ್ಪೀಕರ್‌ಗಳು ಹಾಗೂ ವಾಹನಗಳನ್ನು ಜಪ್ತಿ ಮಾಡಲಾಗುವುದು. ಪ್ರಕರಣ ದಾಖಲಾದ ಬಳಿಕವೂ ನಿಯಮ ಉಲ್ಲಂಘನೆ ಮುಂದುವರಿದರೆ ಪ್ರತಿ ದಿನಕ್ಕೆ ರೂ.5,000 ಹೆಚ್ಚುವರಿ ದಂಡ ವಿಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. “ಶಬ್ದ ಮಾಲಿನ್ಯ ಆರೋಗ್ಯಕ್ಕೆ ಅಪಾಯ. ನಿಯಮ ಪಾಲಿಸಿ, ಶಾಂತಿ ಕಾಪಾಡಿ” ಎಂದು ಕೊಡಗು ಜಿಲ್ಲಾ ಪೊಲೀಸ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, “Sound Pollution is a Crime” ಎಂಬ ಸಂದೇಶದ ಮೂಲಕ ಎಚ್ಚರಿಕೆ ನೀಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.13 NEWS DESK : ವಿರಾಜಪೇಟೆ ನಗರದ ಶಿವೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವೈಭವದ ನವರಾತ್ರಿ…

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.