Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಅಮೋಘ ಸಾಧನೆ*
  • *ಮುಂಗಾರು ಬೆಳೆ ಸಮೀಕ್ಷೆ: ಕೊಡಗಿನಲ್ಲಿ 2.60 ಲಕ್ಷಕ್ಕೂ ಅಧಿಕ ತಾಕುಗಳ(ಕೃಷಿ ಜಾಗ) ಸಮೀಕ್ಷೆ*
  • *ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ನಾಟಿ ಸಂಭ್ರಮ*
  • *ಭಾರತ್ ಜೋಡೋ ಯುವ ಸಂಘಕ್ಕೆ ಯುವಕ-ಯುವತಿಯರು ನೋಂದಣಿ ಮಾಡಿಕೊಳ್ಳಲು ಮನವಿ*
  • *ಭಾರಿ ಮಳೆಯಿಂದ ಮನೆ ಗೋಡೆ ಕುಸಿತ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹10 ಸಾವಿರ ನೆರವು*
  • *ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯಿಂದ ವನಮಹೋತ್ಸವ, ಹಿರಿಯ ನಾಗರಿಕರ ದಿನಾಚರಣೆ*
  • *ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ಸಮಾರಂಭ; ಯುವಯೋಗಸಾಧಕಿ ಸಿಂಚನಾಳಿಗೆ ಏಷ್ಯಾ, ಇಂಡಿಯಾ ಬುಕ್ ಆಫ್ ರೆಕಾಡ್೯ ಪ್ರಶಸ್ತಿ ಪ್ರದಾನ*
  • *ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ*
  • *ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು ಬೆಳೆ ಸಮೀಕ್ಷೆ: ಕೊಡಗಿನಲ್ಲಿ 2.60 ಲಕ್ಷಕ್ಕೂ ಅಧಿಕ ತಾಕುಗಳ(ಕೃಷಿ ಜಾಗ) ಸಮೀಕ್ಷೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು ಬೆಳೆ ಸಮೀಕ್ಷೆ: ಕೊಡಗಿನಲ್ಲಿ 2.60 ಲಕ್ಷಕ್ಕೂ ಅಧಿಕ ತಾಕುಗಳ(ಕೃಷಿ ಜಾಗ) ಸಮೀಕ್ಷೆ*

ಸೆಪ್ಟೆಂಬರ್ 2, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 2: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಲ್ಲಿ ಆರಂಭಗೊಂಡಿದ್ದು, ಜಿಲ್ಲೆಯ 525 ಹಳ್ಳಿಗಳ ವ್ಯಾಪ್ತಿಯ ಒಟ್ಟು 2,60,798 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.

ಈ ಬಾರಿ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರಗಳನ್ನು ಸ್ವತಃ ದಾಖಲಿಸಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಅವರು ರೈತರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರ ದಾಖಲಿಸಲು ಅಗತ್ಯವಿರುವ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಆ್ಯಪ್ ಬಳಕೆಗೆ ಸಂಬಂಧಿಸಿದಂತೆ ರೈತರಿಗೆ ಮಾರ್ಗದರ್ಶನ ನೀಡಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ತಮ್ಮ ಗ್ರಾಮದ ನಿಯೋಜಿತ ಖಾಸಗಿ ನಿವಾಸಿಗಳ ವಿವರಗಳನ್ನು ಸಂಬಂಧಪಟ್ಟ ಕೃಷಿ ಅಥವಾ ಕಂದಾಯ ಇಲಾಖೆಯ ಕಚೇರಿಗಳಿಂದ ಪಡೆಯಬಹುದು ಎಂದು ತಿಳಿಸಿದ್ದಾರೆ.

ಎಫ್‌ಐಡಿ ಸಂಖ್ಯೆ ಕಡ್ಡಾಯ

ಬೆಳೆ ಸಮೀಕ್ಷೆ ಆ್ಯಪ್ ಬಳಸಲು ರೈತರು FRUITS ತಂತ್ರಾಂಶದ ಎಫ್‌ಐಡಿ (FID) ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ. ರೈತರ ಆಧಾರ್ ಸಂಖ್ಯೆ ಮತ್ತು ಎಫ್‌ಐಡಿ ಸಂಖ್ಯೆಗೆ ಜೋಡಣೆಯಾಗಿರುವ ಜಮೀನುಗಳ ಮಾಹಿತಿಯು ಆ್ಯಪ್‌ನಲ್ಲಿ ಲಭ್ಯವಾಗಲಿದೆ.

ಮೊದಲು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು, e-KYC ಮೂಲಕ ಆಧಾರ್ ದೃಢೀಕರಣ ಮಾಡಬೇಕು. ಆಧಾರ್ ಸಂಖ್ಯೆ ನಮೂದಿಸಿ ‘Generate OTP’ ಆಯ್ಕೆ ಮಾಡಿದ ಬಳಿಕ ಮೊಬೈಲ್‌ಗೆ ಬರುವ ಒಟಿಪಿಯನ್ನು ನಮೂದಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ನಂತರ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಮೂಲಕ ಆ್ಯಪ್ ಅನ್ನು ಸಕ್ರಿಯಗೊಳಿಸಬಹುದು.

ಬೆಳೆ ವಿವರದೊಂದಿಗೆ ಛಾಯಾಚಿತ್ರ ಅಪ್‌ಲೋಡ್

ಆ್ಯಪ್‌ನಲ್ಲಿ ಲಭ್ಯವಾಗುವ ತಮ್ಮ ಜಮೀನಿನ ಮಾಹಿತಿಯನ್ನು ಪರಿಶೀಲಿಸಿದ ಬಳಿಕ ರೈತರು ಬೆಳೆದಿರುವ ಬೆಳೆಗಳ ವಿವರ ದಾಖಲಿಸಬೇಕು. ಪಾಳು ಬಿಟ್ಟಿರುವ ಪ್ರದೇಶ ಹಾಗೂ ಕೊಟ್ಟಿಗೆ, ಕೃಷಿ ಹೊಂಡ, ಮನೆ ಸೇರಿದಂತೆ ಕೃಷಿಯೇತರ ಉದ್ದೇಶಗಳಿಗೆ ಬಳಸಲಾಗುತ್ತಿರುವ ಪ್ರದೇಶದ ವಿವರಗಳನ್ನೂ ದಾಖಲಿಸಬೇಕಿದೆ.

ರೈತರು ಬೆಳೆದಿರುವ ಬೆಳೆಯ ಗಿಡಗಳ ಸಂಖ್ಯೆ, ಪ್ರತಿ ಗಿಡದ ನಡುವಿನ ಅಂತರ ಹಾಗೂ ಬೆಳೆ ವಿಸ್ತೀರ್ಣದ ವಿವರಗಳನ್ನು ನಮೂದಿಸಬೇಕು. ಪ್ರತಿ ಬೆಳೆಗೆ ಸಂಬಂಧಿಸಿದಂತೆ ಎರಡು ಛಾಯಾಚಿತ್ರಗಳನ್ನು ತೆಗೆದು ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ರೈತರು ದಾಖಲಿಸುವ ಮಾಹಿತಿಯನ್ನು ಆಯಾ ಗ್ರಾಮಗಳಿಗೆ ನೇಮಕಗೊಂಡಿರುವ ಸರ್ಕಾರಿ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸಲಿದ್ದಾರೆ.

ಎಫ್‌ಐಡಿ ಇಲ್ಲದವರು ನೋಂದಾಯಿಸಿಕೊಳ್ಳಿ

ಎಫ್‌ಐಡಿ ಸಂಖ್ಯೆ ಹೊಂದಿರದ ರೈತರು ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಕಂದಾಯ ಇಲಾಖೆಯನ್ನು ಸಂಪರ್ಕಿಸಿ ಎಫ್‌ಐಡಿ ಮಾಡಿಸಿಕೊಳ್ಳಬಹುದು. ಎಫ್‌ಐಡಿ ಸಂಖ್ಯೆಗೆ ಯಾವುದೇ ಜಮೀನು ಸೇರ್ಪಡೆಯಾಗದೆ ಇದ್ದಲ್ಲಿ ಅದನ್ನು ಸೇರಿಸಲು ಸಹ ಆ್ಯಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.

ನಿಗದಿತ ಅವಧಿಯೊಳಗೆ ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಆ್ಯಪ್‌ನಲ್ಲಿ ದಾಖಲಿಸದಿದ್ದರೆ, ಇಲಾಖೆಯಿಂದ ನೇಮಿಸಲಾದ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತದೆ. ಆದರೆ ಕೆಲವು ದುರ್ಗಮ ಪ್ರದೇಶಗಳಲ್ಲಿ ಖಾಸಗಿ ನಿವಾಸಿಗಳು ತಲುಪಲು ಸಾಧ್ಯವಾಗದ ಕಾರಣ ಅಲ್ಲಿನ ಬೆಳೆಗಳು ಸಮೀಕ್ಷೆಯಿಂದ ಹೊರಗುಳಿಯುವ ಸಾಧ್ಯತೆ ಇರುವುದರಿಂದ ರೈತರು ಸ್ವತಃ ತಮ್ಮ ಬೆಳೆ ವಿವರಗಳನ್ನು ನಿಗದಿತ ಅವಧಿಯೊಳಗೆ ದಾಖಲಿಸುವುದು ಸೂಕ್ತ ಎಂದು ಕೃಷಿ ಇಲಾಖೆ ತಿಳಿಸಿದೆ.

ಹಲವು ಸರ್ಕಾರಿ ಯೋಜನೆಗಳಿಗೆ ಬೆಳೆ ಸಮೀಕ್ಷೆ ಆಧಾರ

ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾಗುವ ಮಾಹಿತಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು ಹಾಗೂ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ತಯಾರಿಸಲು ಬಳಸಲಾಗುತ್ತದೆ.

ಇದಲ್ಲದೆ, ಬೆಳೆ ಕಟಾವು ಪ್ರಯೋಗ, ವಿವಿಧ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ, ಪಹಣಿಯಲ್ಲಿ ಬೆಳೆ ವಿವರ ದಾಖಲಿಸುವುದು ಹಾಗೂ ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮೂಲಕ ಬೆಳೆ ಸಾಲ ನೀಡುವ ಸಂದರ್ಭದಲ್ಲಿನ ಬೆಳೆ ಪರಿಶೀಲನೆಗೂ ಈ ಮಾಹಿತಿಯನ್ನು ಬಳಸಲಾಗುತ್ತದೆ.

ಹೀಗಾಗಿ ಕೊಡಗು ಜಿಲ್ಲೆಯ ರೈತರು ಸರ್ಕಾರ ಕಲ್ಪಿಸಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ನಿಖರ ವಿವರಗಳನ್ನು ಸ್ವತಃ ನಿಗದಿತ ಅವಧಿಯೊಳಗೆ ದಾಖಲಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ನಿಯೋಜಿತ ಖಾಸಗಿ ನಿವಾಸಿ, ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ನಾಡ ಕಚೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*48ನೇ ರಾಷ್ಟ್ರ ಮಟ್ಟದ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಅಮೋಘ ಸಾಧನೆ*

ಸೆಪ್ಟೆಂಬರ್ 2, 2026

*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ನಾಟಿ ಸಂಭ್ರಮ*

ಸೆಪ್ಟೆಂಬರ್ 2, 2026

*ಭಾರತ್ ಜೋಡೋ ಯುವ ಸಂಘಕ್ಕೆ ಯುವಕ-ಯುವತಿಯರು ನೋಂದಣಿ ಮಾಡಿಕೊಳ್ಳಲು ಮನವಿ*

ಸೆಪ್ಟೆಂಬರ್ 2, 2026

*ಮುಂಗಾರು ಬೆಳೆ ಸಮೀಕ್ಷೆ: ಕೊಡಗಿನಲ್ಲಿ 2.60 ಲಕ್ಷಕ್ಕೂ ಅಧಿಕ ತಾಕುಗಳ(ಕೃಷಿ ಜಾಗ) ಸಮೀಕ್ಷೆ*

ಸೆಪ್ಟೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 2: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಲ್ಲಿ ಆರಂಭಗೊಂಡಿದ್ದು,…

*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ನಾಟಿ ಸಂಭ್ರಮ*

ಸೆಪ್ಟೆಂಬರ್ 2, 2026

*ಭಾರತ್ ಜೋಡೋ ಯುವ ಸಂಘಕ್ಕೆ ಯುವಕ-ಯುವತಿಯರು ನೋಂದಣಿ ಮಾಡಿಕೊಳ್ಳಲು ಮನವಿ*

ಸೆಪ್ಟೆಂಬರ್ 2, 2026

*ಭಾರಿ ಮಳೆಯಿಂದ ಮನೆ ಗೋಡೆ ಕುಸಿತ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹10 ಸಾವಿರ ನೆರವು*

ಸೆಪ್ಟೆಂಬರ್ 2, 2026

*ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯಿಂದ ವನಮಹೋತ್ಸವ, ಹಿರಿಯ ನಾಗರಿಕರ ದಿನಾಚರಣೆ*

ಸೆಪ್ಟೆಂಬರ್ 2, 2026

*ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ಸಮಾರಂಭ; ಯುವಯೋಗಸಾಧಕಿ ಸಿಂಚನಾಳಿಗೆ ಏಷ್ಯಾ, ಇಂಡಿಯಾ ಬುಕ್ ಆಫ್ ರೆಕಾಡ್೯ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 2, 2026

*ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ*

ಸೆಪ್ಟೆಂಬರ್ 2, 2026

*ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*

ಸೆಪ್ಟೆಂಬರ್ 2, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.