Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗ್ಯಾರಂಟಿ ಯೋಜನೆಗಳ ಮೂರು ವರ್ಷದ ಸಾಧನೆ : ಗೃಹಲಕ್ಷ್ಮಿಯಿಂದ ಆರ್ಥಿಕ ಭದ್ರತೆ, ಶಕ್ತಿ ಯೋಜನೆಯಿಂದ ಸ್ವತಂತ್ರ ಸಂಚಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗ್ಯಾರಂಟಿ ಯೋಜನೆಗಳ ಮೂರು ವರ್ಷದ ಸಾಧನೆ : ಗೃಹಲಕ್ಷ್ಮಿಯಿಂದ ಆರ್ಥಿಕ ಭದ್ರತೆ, ಶಕ್ತಿ ಯೋಜನೆಯಿಂದ ಸ್ವತಂತ್ರ ಸಂಚಾರ*

ಸೆಪ್ಟೆಂಬರ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.2 NEWS DESK : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳು ಮಹಿಳಾ ಸಬಲೀಕರಣದ ದಿಕ್ಕಿನಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಯಶಸ್ವಿಯಾಗಿ ಮೂರು ವರ್ಷಗಳ ಪಯಣವನ್ನು ಪೂರೈಸಿವೆ. ಆರ್ಥಿಕ ಸ್ವಾವಲಂಬನೆ ಹಾಗೂ ಸುರಕ್ಷಿತ ಮತ್ತು ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿರುವ ಈ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಆಶಾಕಿರಣವಾಗಿವೆ.
ಗೃಹಲಕ್ಷ್ಮಿ ಯೋಜನೆ: ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಜಾರಿಗೊಳಿಸಲಾದ ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿದೆ. ಯೋಜನೆಯಿಂದ ದೊರೆಯುತ್ತಿರುವ ಆರ್ಥಿಕ ನೆರವನ್ನು ಫಲಾನುಭವಿ ಮಹಿಳೆಯರು ಮಕ್ಕಳ ಶಿಕ್ಷಣ, ಆರೋಗ್ಯ, ದಿನನಿತ್ಯದ ಕುಟುಂಬ ನಿರ್ವಹಣೆ ಸೇರಿದಂತೆ ವಿವಿಧ ಅಗತ್ಯ ವೆಚ್ಚಗಳಿಗೆ ಬಳಸಿಕೊಳ್ಳುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆಯು ಕೊಡಗು ಜಿಲ್ಲೆಯಲ್ಲಿಯೂ ಉತ್ತಮ ಸ್ಪಂದನೆ ಪಡೆದಿದ್ದು, ಜಿಲ್ಲೆಯ ಐದು ತಾಲೂಕುಗಳಲ್ಲಿ ಒಟ್ಟು 1,20,872 ಮಹಿಳೆಯರು ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಮಡಿಕೇರಿ 31,549, ಸೋಮವಾರಪೇಟೆ 25,286, ಕುಶಾಲನಗರ 23,179, ವಿರಾಜಪೇಟೆ 21,691 ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ 19,167 ಫಲಾನುಭವಿಗಳ ಹೆಸರು ನೋಂದಾಯಿಸಿಕೊಂಡಿದ್ದಾರೆ. ಯೋಜನೆಯಿಂದ ಮಹಿಳೆಯರ ಆರ್ಥಿಕ ಭದ್ರತೆ ಹೆಚ್ಚುವುದರ ಜೊತೆಗೆ ಕುಟುಂಬದಲ್ಲಿನ ಅವರ ಸ್ಥಾನಮಾನ ಮತ್ತು ಆತ್ಮವಿಶ್ವಾಸವೂ ವೃದ್ಧಿಯಾಗಿದೆ ಎಂದು ಫಲಾನುಭವಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. :: ಶಕ್ತಿ ಯೋಜನೆ : : ಮಹಿಳೆಯರ ಸ್ವಾವಲಂಬನೆ ಮತ್ತು ಸುರಕ್ಷಿತ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೊಳಿಸಲಾದ ಶಕ್ತಿ ಯೋಜನೆ 2023 ರ ಜೂನ್ 11 ರಂದು ಆರಂಭಗೊಂಡಿದ್ದು, ಮೂರು ವರ್ಷಗಳ ಯಶಸ್ವಿ ಪಯಣ ಮುಂದುವರಿಸಿದೆ. ಸರ್ಕಾರಿ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಈ ಯೋಜನೆಯಿಂದ ಉದ್ಯೋಗ, ಶಿಕ್ಷಣ, ವ್ಯಾಪಾರ, ಆರೋಗ್ಯ ಸೇವೆ ಸೇರಿದಂತೆ ವಿವಿಧ ಅಗತ್ಯಗಳಿಗಾಗಿ ಸಂಚರಿಸುವ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಪ್ರಯಾಣಿಸಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಪ್ರತಿದಿನ ಸರಾಸರಿ 16,675 ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವು ದೊರೆತಿದ್ದರೆ, ಶಕ್ತಿ ಯೋಜನೆಯ ಮೂಲಕ ಉಚಿತ ಮತ್ತು ಸುಲಭ ಸಂಚಾರದ ಅವಕಾಶ ಸಿಕ್ಕಿದೆ. ಈ ಎರಡೂ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆಗೆ ಕಾರಣವಾಗಿವೆ. ಮೂರು ವರ್ಷಗಳ ಯಶಸ್ವಿ ಪಯಣವನ್ನು ಸಂಭ್ರಮಿಸುತ್ತಿರುವ ಫಲಾನುಭವಿಗಳು, ಗ್ಯಾರಂಟಿ ಯೋಜನೆಗಳು ತಮ್ಮ ಬದುಕಿನ ಹೊರೆಯನ್ನು ತಗ್ಗಿಸಿ, ಆತ್ಮವಿಶ್ವಾಸದಿಂದ ಬದುಕಲು ನೆರವಾಗಿವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಮೂರು ವರ್ಷದ ಪಯಣವು ಕೇವಲ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗದೆ, ಮಹಿಳಾ ಸಬಲೀಕರಣ, ಆರ್ಥಿಕ ಭದ್ರತೆ ಮತ್ತು ಸ್ವತಂತ್ರ ಬದುಕಿಗೆ ಹೊಸ ಆಯಾಮ ನೀಡಿದ ಮಹತ್ವದ ಸಾಧನೆಯಾಗಿ ಗುರುತಿಸಿಕೊಂಡಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.