ಅಮ್ಮತ್ತಿ, NEWS DESK ಸೆ.03: ಅಮ್ಮತ್ತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ರನ್ನರ್ಸ್ ಅಪ್ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.
ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ತಂಡದ ಪರವಾಗಿ ಹಿತಾರ್ಥ್ ಪಿ.ಜಿ., ಮೊಹಮ್ಮದ್ ಶಾಝೀಲ್, ಮೊಹಮ್ಮದ್ ರಾಹಿಲ್, ಕನಿಶ್ ಕುಟ್ಟಪ್ಪ, ಐಚಂಡ ವಂಶಿಕ್ ಕುಟ್ಟಪ್ಪ, ನಜ್ವಾನ್ ಇಸ್ಮಾಯಿಲ್, ಮೊಹಮ್ಮದ್ ದಿಯಾನ್, ಅಮ್ಮಂಡ ತನಿಷ್ ನಾಣಯ್ಯ, ಕಾಳೆಚಂಡ ಬೋಪಣ್ಣ ಎಂ., ಸಣ್ಣುವಂಡ ವಚನ್ ಎಸ್., ರೇಹಾನ್ ಹಾಗೂ ಶಿಬಿಲ್ ಪಿ.ಆರ್. ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುದೇಶ್ ಬಿ.ಎಸ್. ಹಾಗೂ ಕಾರ್ಯದರ್ಶಿ ವಿನೋದ್ ಪಿ.ಎನ್. ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಕರಾದ ಶ್ರೀಮತಿ ಮೋನಿಕಾ ಹಾಗೂ ಶ್ರೀಮತಿ ಲಾವಣ್ಯ ಅವರು ತರಬೇತಿ ನೀಡಿದ್ದರು.
ತಂಡದ ಅತ್ಯುತ್ತಮ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮಾನ್ ಸುದೇಶ್ ಬಿ.ಎಸ್., ಕಾರ್ಯದರ್ಶಿ ಶ್ರೀಮಾನ್ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿ ಶ್ರೀಮತಿ ಪಾರ್ವತಿ ಪಿ.ಯು., ಸಂಯೋಜಕರಾದ ಅಮೃತ್ ಅರ್ಜುನ್, ಬೋಧಕ ಹಾಗೂ ಬೋಧಕೇತರ ವೃಂದದವರು ಮತ್ತು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ.








