Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
  • *ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
  • *“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
  • *ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»Uncategorized»*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಕ್ಕಬೆ, NEWS DESK ಸೆ.05: ಕೊಡಗಿನ ದೇವನೆಲೆಗಳು, ಐನ್‌ಮನೆಗಳು, ಸಮಾಜಗಳು ಹಾಗೂ ವಿದ್ಯಾಸಂಸ್ಥೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕು. ಸಾಂಸ್ಕೃತಿಕವಾದ ಬೆಳವಣಿಗೆಯು ಸಾಹಿತ್ಯಕ್ಕೆ ಒತ್ತು ನೀಡುತ್ತದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕೊಡವ ಪುಸ್ತಕ ಪತ್ತಾಯ ಇದಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ. ಇದರಿಂದ ಆಯಾಯ ದೇವನೆಲೆಗಳ ಪೌರಾಣಿಕ ಹಿನ್ನೆಲೆ, ಚಾರಿತ್ರಿಕ ಘಟನಾವಳಿಗಳು, ಮಹತ್ವ-ಮಹಿಮೆಯನ್ನು ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಕಕ್ಕಬೆಯಲ್ಲಿರುವ ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ಅಕಾಡೆಮಿಯ 20ನೇ ಕೊಡವ ಪುಸ್ತಕ ಪತ್ತಾಯ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗಿನ ಊರೂರುಗಳಲ್ಲಿರುವ ಪುರಾತನ ದೇವನೆಲೆಗಳಲ್ಲಿ ಪುಸ್ತಕ ಪತ್ತಾಯ ಸ್ಥಾಪಿಸುವುದರಿಂದ ಅಲ್ಲಿಗೆ ಬರುವ ಭಕ್ತರಿಗೆ ಆಯಾಯ ದೇವಸ್ಥಾನಗಳು ಹಾಗೂ ಆ ಭಾಗದ ಊರು-ನಾಡುಗಳ ವಿಚಾರವಾಗಿ ಪುಸ್ತಕಗಳನ್ನು ಓದಿ ಅರಿತುಕೊಳ್ಳಲು ಅನುಕೂಲವಾಗುತ್ತದೆ ಎಂದರು.

ದೇವಸ್ಥಾನಕ್ಕೆ ಬರುವ ಭಕ್ತರು ಬಿಡುವಿನ ವೇಳೆ ಇನ್ನಿತರೆ ಮಾತನಾಡುವುದರ ಬದಲು ಆಯಾಯ ಕ್ಷೇತ್ರದ ಮಹತ್ವ-ಮಹಿಮೆಯ ಬಗ್ಗೆ ಓದಿ ತಿಳಿದುಕೊಳ್ಳುವುದರಿಂದ ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಅನುಕೂಲವಾಗುತ್ತದೆ. ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಾದರೆ ಸಾಹಿತ್ಯ ಪ್ರಕಾರಗಳ ಲಭ್ಯತೆ ಹಾಗೂ ಓದುವಿಕೆಗೆ ಸೂಕ್ತ ಸ್ಥಳ ಇದಾಗಿದ್ದು, ಪುಸ್ತಕ ಪತ್ತಾಯವನ್ನು ಸ್ಥಾಪಿಸುವಲ್ಲಿ ದೇವಸ್ಥಾನ ಸಮಿತಿಯವರು ಮುಂದೆ ಬರಬೇಕೆಂದು ಕರೆ ನೀಡಿದರು.

ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮವನ್ನು ವಿಶೇಷ ರೀತಿಯ ಪೂಜಾ-ಕೈಂಕರ್ಯದೊಂದಿಗೆ ಉದ್ಘಾಟಿಸಿದ ಇಗ್ಗುತಪ್ಪ ದೇವಸ್ಥಾನದ ಪ್ರಧಾನ ಅರ್ಚಕ ಕುಶ ಭಟ್ ಮಾತನಾಡಿ, ಇಗ್ಗುತಪ್ಪನ ನೆಲೆಯಲ್ಲಿ ಪುಸ್ತಕ ಪತ್ತಾಯ ಸ್ಥಾಪಿಸಿರುವುದು ವಿದ್ಯಾದಾನದ ಮತ್ತೊಂದು ಸ್ವರೂಪ. ಇಂತಹ ಮಹತ್ಕಾರ್ಯವನ್ನು ಮಾಡುತ್ತಿರುವ ಕೊಡವ ಅಕಾಡೆಮಿಯನ್ನು ಎಲ್ಲರೂ ಎಲ್ಲಾಕಾಲದಲ್ಲೂ ನೆನಪಿಸಿಕೊಳ್ಳುತ್ತಾರೆ. ಮನೆಮನೆಗಳಲ್ಲಿ ಒಂದೆಡೆ ಇಟ್ಟಿರುವ ಪುಸ್ತಕಗಳನ್ನೆಲ್ಲ ಇಂತಹ ಪುಸ್ತಕ ಪತ್ತಾಯದಲ್ಲಿ ಸಂಗ್ರಹಿಸಿ ಇಟ್ಟರೆ ಓದುಗರ ಅನುಕೂಲಕ್ಕೆ ಪ್ರಯೋಜನವಾಗುತ್ತದೆ. ಈ ಮಣ್ಣಿನಲ್ಲಿ ಕೊಡವ ಸಾಹಿತ್ಯ, ಸಂಸ್ಕೃತಿ ಬೆಳೆಯಬೇಕು, ಚಿರಕಾಲ ಉಳಿಯಬೇಕು ಎಂದು ಆಶಿಸಿದರು.

ಇಗ್ಗುತಪ್ಪ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಚಮಂಡ ರಾಜ ಪೂವಣ್ಣ ಅಕಾಡೆಮಿಯ ಕೆಲಸ-ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ಸ್ಥಾಪಿಸಿರುವ 20ನೇ ಕೊಡವ ಪುಸ್ತಕ ಪತ್ತಾಯದ ನೋಂದಣಿ ಬಾಪ್ತು ರೂ. ಹತ್ತು ಸಾವಿರದ ಚೆಕ್ಕನ್ನು ಅಕಾಡೆಮಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಅಕಾಡೆಮಿ ವತಿಯಿಂದ ನೋಂದಣಿ ಪತ್ರವನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ನೀಡಲಾಯಿತು. ತದನಂತರ ಇಗ್ತುತಪ್ಪ ದೇವನೆಲೆಗೆ ಅಕಾಡೆಮಿ ವತಿಯಿಂದ ದುಡಿ ನೀಡಲಾಯಿತು.

ಅಕಾಡೆಮಿ ಸದಸ್ಯರಾದ ನಾಪಂಡ ಸಿ. ಗಣೇಶ, ಕುಡಿಯರ ಎಂ. ಕಾವೇರಪ್ಪ, ಪಾರುಪತ್ಯೆಗಾರ ಪರದಂಡ ಪ್ರಿನ್ಸ್, ದೇವತಕ್ಕರಾದ ಪರದಂಡ ವಿಠಲ ಭೀಮಯ್ಯ, ಪಂಚಾಯತ್ ಮಾಜಿ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ಕಲಿಯಂಡ ಸಂಪನ್, ದೇವಸ್ಥಾನದ ಜ್ಯೋತಿಷಿ ಕಣಿಯಂಡ ನಾಣಯ್ಯ, ಮುಜರಾಯಿ ಇಲಾಖೆಯ ಹಿಂದಿನ ಅಧ್ಯಕ್ಷರಾಗಿದ್ದ ಕೂತಂಡ ಉತ್ತಪ್ಪರ ಪತ್ನಿ ವಾಣಿ ಉತ್ತಪ್ಪ ಸಂಸಾರ, ಉದಿಯಂಡ ಸುಬಾಶ್, ಸಮಾಜ ಸೇವಕ ಪಾಲಂದಿರ ಜಗಜೋಯಪ್ಪ, ಕೋಲತಂಡ ವಿಠಲ್ ಸುಬ್ರಮಣಿ, ಪರದಂಡ ಲಾಲ ಸುಬ್ಬಯ್ಯ, ಕುಡಿಯರ ಮುತ್ತಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡು ಅಕಾಡೆಮಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 5: 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ, ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ…

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 2026

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 2026

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.