Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್

ಸೆಪ್ಟೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಸೆ.7 : ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ರಾಷ್ಟ್ರ ನಿರ್ಮಾಣದ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು ಎಂದು ಮಡಿಕೇರಿ ರೋಟರಿ ಅಧ್ಯಕ್ಷ ರೋಟೇರಿಯನ್ ಮನೋಹರ್ ಕಾಮತ್ ಅವರು ಬಣ್ಣಿಸಿದ್ದಾರೆ. ಮಡಿಕೇರಿ ರೋಟರಿ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ರೋಟರಿ ಸಭಾಂಗಣದಲ್ಲಿ ನಡೆದ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ರೋ. ಮನೋಹರ್ ಕಾಮತ್ ಅವರು, ಶಿಕ್ಷಕರು ಸಮಾಜದ ದಾರಿದೀಪವಾಗಿದ್ದಾರೆ ಎಂದರು. ಭಾರತದ ಪ್ರಥಮ ಉಪರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಶಿಸ್ತು ಮತ್ತು ಸಂಸ್ಕಾರಗಳನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ರೋ. ಎಂ.ಜಿ. ಡಾ. ಎ.ಜಿ. ಪಾಟ್ಕರ್ ಅವರು ಮಾತನಾಡಿ, ನಮ್ಮ ಕಾಲದಲ್ಲಿ ಸೈಕಲ್‌ನಲ್ಲಿ ಶಾಲೆಗೆ ಹೋಗಿ ಶಿಕ್ಷಕರನ್ನು ಪೋಷಕರಂತೆ ಗೌರವಿಸಿ ಆತ್ಮೀಯತೆಯಿಂದ ಶಿಕ್ಷಣ ಪಡೆಯುತ್ತಿದ್ದೆವು. ಆದರೆ ಇಂದು ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯಿಂದ ಶಿಕ್ಷಣದ ಸ್ವರೂಪ ಬದಲಾಗಿದ್ದು, ಶಿಕ್ಷಕರ ಜವಾಬ್ದಾರಿ ಹಾಗೂ ಒತ್ತಡವೂ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು. ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂತೋಷ, ನೆಮ್ಮದಿ, ಉತ್ತಮ ನಿದ್ರೆ ಹಾಗೂ ಒತ್ತಡಮುಕ್ತ ಮನಸ್ಸು ಅಗತ್ಯ. ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ನಡುವಿನ ಆತ್ಮೀಯ ಬಾಂಧವ್ಯವೇ ಉತ್ತಮ ಶಿಕ್ಷಣದ ಶಕ್ತಿಯಾಗಿದೆ ಎಂದು ಅವರು ಹೇಳಿದರು. ರೋ. ಡಾ. ರವಿ ಅಪ್ಪಾಜಿ ಅವರು ತಮ್ಮ ಬಾಲ್ಯದ ವಿದ್ಯಾಭ್ಯಾಸದ ದಿನಗಳನ್ನು ಸ್ಮರಿಸಿಕೊಂಡು, ಗುರುಗಳ ಮಾರ್ಗದರ್ಶನ ಹಾಗೂ ನಿರಂತರ ಪರಿಶ್ರಮದಿಂದ ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಲು ಸಾಧ್ಯವಾಯಿತು. ಜೀವನದಲ್ಲಿ ಯಶಸ್ಸು ಸಾಧಿಸಲು ಶಿಕ್ಷಣವೇ ಭದ್ರವಾದ ಅಡಿಪಾಯವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಕನಸು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಕಿ ಎಂ. ವನಜಾ ಅವರು ಮಾತನಾಡಿ, ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಸುವುದಲ್ಲ. ಪರಿಪೂರ್ಣ ವ್ಯಕ್ತಿತ್ವ ರೂಪಿಸಿ ಉತ್ತಮ ನಾಗರಿಕರನ್ನು ನಿರ್ಮಿಸುವ ಮಹತ್ತರ ಕಾರ್ಯವಾಗಿದೆ ಎಂದರು. ಕಪ್ಪು ಹಲಗೆಯಿಂದ ಆರಂಭವಾದ ಶಿಕ್ಷಣ ಇಂದು ಸ್ಮಾರ್ಟ್ ಕ್ಲಾಸ್ ಹಾಗೂ ಡಿಜಿಟಲ್ ತಂತ್ರಜ್ಞಾನದ ಯುಗಕ್ಕೆ ಬೆಳೆದಿದೆ. ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು. 27 ವರ್ಷಗಳ ಶಿಕ್ಷಕ ವೃತ್ತಿಯ ಸೇವಾನುಭವ ಹೊಂದಿರುವ ಶಿಕ್ಷಕಿ ವೀಣಾ ರೈ ಅವರು ಸನ್ಮಾನ ಸ್ವೀಕರಿಸುತ್ತಿರುವುದು ಹೆಮ್ಮೆ ಹಾಗೂ ಸಂತೋಷದ ಕ್ಷಣವಾಗಿದೆ ಎಂದರು. ಪಿಎಂ ಶ್ರೀ ಶಾಲೆಗಳಲ್ಲಿ ದೊರೆಯುತ್ತಿರುವ ಸೌಲಭ್ಯಗಳು, ಪಠ್ಯೇತರ ಚಟುವಟಿಕೆಗಳಿಗೆ ನೀಡುತ್ತಿರುವ ಪ್ರೋತ್ಸಾಹ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಕಾಳಜಿಯಿಂದ ಸರ್ಕಾರ ಒದಗಿಸುತ್ತಿರುವ ಪೌಷ್ಟಿಕ ಆಹಾರ, ಪುಸ್ತಕ ಮತ್ತು ಸಮವಸ್ತ್ರದಂತಹ ಸೌಲಭ್ಯಗಳನ್ನು ಶ್ಲಾಘಿಸಿದರು. ವಿಶೇಷ ಮಕ್ಕಳಿಗೂ ಅಗತ್ಯ ಸೌಲಭ್ಯಗಳು ದೊರೆಯುತ್ತಿರುವುದು ಸಂತಸದ ವಿಚಾರ ಎಂದರು. ಶಿಕ್ಷಕರ ದಿನಾಚರಣೆ ಅಂಗವಾಗಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್‌ಗೆ ಆಯ್ಕೆಯಾದ ಎಂ. ವನಜಾ ಅವರಿಗೆ ರೋಟೇರಿಯನ್ ಡಾ. ಪಾಟ್ಕರ್ ಹಾಗೂ ರೋ. ಮಲ್ಲಿಗೆ ಪೈ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಅವರ ಪರಿಚಯವನ್ನು ರೋ. ಹರಿಣಿ ವಿಜಯ್ ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ವೀಣಾ ರೈ ಅವರಿಗೆ ರೋಟೇರಿಯನ್ ಅನಂತ್ ಸುಬ್ಬರಾವ್ ಹಾಗೂ ಪಾರ್ವತಿ ಚೀಯಣ್ಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪರಿಚಯವನ್ನು ರೋ. ಲಲಿತಾ ರಾಘವನ್ ಮಾಡಿದರು. ಕಾರ್ಯಕ್ರಮದಲ್ಲಿ ರೋಟರಿಯ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಉಪಕ್ರಮಗಳ ಅವಲೋಕನವನ್ನು ರೋ. ಡಿ.ಎಂ. ಕಿರಣ್ ನಡೆಸಿಕೊಟ್ಟರು. ರೋಟರಿ ಕಾರ್ಯದರ್ಶಿ ರೋ. ಸೋಮಣ್ಣ ಬಿ.ಎಂ. ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ; ಪಥಸಂಚಲನದಲ್ಲಿ ಪಾಲ್ಗೊಂಡ ನೂರಾರು ಗಣವೇಷಧಾರಿ ಹಿಂದೂ ಬಾಂಧವರು

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026

ಪಾಲಿಬೆಟ್ಟದಲ್ಲಿ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನ: 56 ನಾಯಿಗಳಿಗೆ ಲಸಿಕೆ

ನವೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.1: ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಇಲಾಖೆಯ ಪಾಲಿಬೆಟ್ಟ ಪಶುಪಾಲನಾ ಕೇಂದ್ರದ ವತಿಯಿಂದ ಬೀದಿ…

ಕೊಡಗು ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ

ನವೆಂಬರ್ 1, 2026

ಮಡಿಕೇರಿ ನಗರಸಭೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ವಿಶ್ವಮಾನವ ಉದ್ಯಾನವನದಲ್ಲಿ ಕೊಡಗು ಹಿತರಕ್ಷಣಾ ವೇದಿಕೆಯಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 1, 2026

ಸುಂಟಿಕೊಪ್ಪದಲ್ಲಿ ಆರ್‌ಎಸ್‌ಎಸ್‌ನಿಂದ ವಿಜಯದಶಮಿ ಪಥಸಂಚಲನ

ನವೆಂಬರ್ 1, 2026

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.