Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*

ಸೆಪ್ಟೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ, NEWS DESK ಸೆ. 7: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿರುವ ಬಾಸ್ಕೆಟ್‌ಬಾಲ್ ಮೈದಾನದ ಬದಿಯಲ್ಲಿ ನಿರ್ಮಿಸುತ್ತಿರುವ ತಡೆಗೋಡೆ ಅವೈಜ್ಞಾನಿಕ ಹಾಗೂ ಕಳಪೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಈ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು, ಕಳಪೆ ಕಾಮಗಾರಿ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಮಗಾರಿಗೆ ತಡೆಯೊಡ್ಡಿದ್ದೇವೆ. ಅಧಿಕಾರಿಗಳು ಕಾಮಗಾರಿಯನ್ನು ಸರಿಯಾಗಿ ಪರಿಶೀಲಿಸುತ್ತಿಲ್ಲ. ಕಳಪೆ ಕಾಮಗಾರಿಯಿಂದಾಗಿ ರಸ್ತೆಯಲ್ಲಿ ಸಂಚರಿಸಲೂ ಭಯಪಡುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅರ್ಧಕ್ಕೆ ಸ್ಥಗಿತಗೊಂಡಿರುವ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅಪ್ಪಚ್ಚು ರಂಜನ್, ಬಾಸ್ಕೆಟ್‌ಬಾಲ್ ಮೈದಾನಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ನಂತರ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಕಳೆದ ಬಾರಿ ಸಣ್ಣ ನೀರಾವರಿ ಇಲಾಖೆಯಿಂದ ಟರ್ಫ್ ಮೈದಾನದ ಬದಿಯಲ್ಲಿ ನಿರ್ಮಿಸಿದ್ದ ತಡೆಗೋಡೆ ಕುಸಿದು ಬಿದ್ದಿತ್ತು. ಇಂತಹ ಕಳಪೆ ಕಾಮಗಾರಿಗೆ ಯಾರು ಹೊಣೆ ಎಂಬ ಪ್ರಶ್ನೆ ಉದ್ಭವಿಸಿದೆ. ಇಂಜಿನಿಯರ್, ಗುತ್ತಿಗೆದಾರ ಅಥವಾ ಶಾಸಕರು ಹೊಣೆಗಾರರೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಇದರೊಂದಿಗೆ ಆಲೇಕಟ್ಟೆ-ತೋಳೂರುಶೆಟ್ಟಳ್ಳಿ ರಸ್ತೆ ವರ್ಷದೊಳಗೆ ಹಾಳಾಗಿದೆ. ಕಾಂಕ್ರೀಟ್ ರಸ್ತೆ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಶಾಸಕರು ಕಳಪೆ ಕಾಮಗಾರಿಗೆ ಸಹಕಾರ ನೀಡುತ್ತಿದ್ದಾರೆಯೇ ಎಂಬ ಬಗ್ಗೆ ಉತ್ತರಿಸಬೇಕು. ಈಗಾಗಲೇ ಬಿರುಕು ಬಿಟ್ಟಿರುವ ಕಾಂಕ್ರೀಟ್ ರಸ್ತೆಯನ್ನು ಕಿತ್ತು, ಸರ್ವಋತು ರಸ್ತೆಯನ್ನಾಗಿ ಗುಣಮಟ್ಟದಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸಿದ ಅವರು, ಈ ಎಲ್ಲಾ ಕಳಪೆ ಕಾಮಗಾರಿಗಳ ಬಗ್ಗೆಯೂ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಸೋಮವಾರಪೇಟೆಯ ಹಾಕಿ ಪ್ರೇಮಿಗಳ ಅಭಿಲಾಷೆಯಂತೆ ಅಂತರರಾಷ್ಟ್ರೀಯ ಗುಣಮಟ್ಟದಲ್ಲಿ ಟರ್ಫ್ ಮೈದಾನ ನಿರ್ಮಿಸಲಾಗಿದೆ. ಸಂಬಂಧಿಸಿದ ಗುತ್ತಿಗೆದಾರ ಕಂಪನಿಯವರು ಏಳು ವರ್ಷಗಳ ಕಾಲ ಇದರ ನಿರ್ವಹಣೆ ಮಾಡಬೇಕು. ಆದರೆ ಪ್ರಸ್ತುತ ಟರ್ಫ್ ಮೈದಾನ ಅವ್ಯವಸ್ಥೆಯಿಂದ ಕೂಡಿದೆ. ತಕ್ಷಣ ಇಲಾಖೆಯ ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಮೈದಾನದ ಸುಸ್ಥಿತಿಗೆ ಕ್ರಮ ವಹಿಸಬೇಕು ಎಂದು ಅಪ್ಪಚ್ಚು ರಂಜನ್ ಒತ್ತಾಯಿಸಿದರು.

ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ನಗರೋತ್ಥಾನ ಯೋಜನೆಯಡಿ ರೂ. 5 ಕೋಟಿ ಅನುದಾನ ನೀಡಲಾಗಿತ್ತು. ಇದರಲ್ಲಿ ರಸ್ತೆ ಬದಿಯಲ್ಲಿ ಫುಟ್‌ಪಾತ್ ನಿರ್ಮಾಣ ಹಾಗೂ ಇಂಟರ್‌ಲಾಕ್ ಕಾಮಗಾರಿಗೆ ಅನುದಾನ ಮೀಸಲಿಟ್ಟಿದ್ದರೂ ಈವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ. ಅಮೃತ್-2 ಯೋಜನೆಯಡಿ ಕುಡಿಯುವ ನೀರಿಗಾಗಿ ರೂ. 15 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೆವು. ಅದೂ ಕೂಡ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿದರು.

ಅಮೃತ್-2 ಯೋಜನೆಯಡಿ ಹೊಸ ಟ್ಯಾಪ್‌ಗಳು ಹಾಗೂ ಪೈಪ್‌ಲೈನ್ ಅಳವಡಿಸಬೇಕಿತ್ತು. ಆದರೆ ಈವರೆಗೂ ಜನರಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕುಶಾಲನಗರ ಹಾಗೂ ಮಡಿಕೇರಿಯಲ್ಲೂ ಇದೇ ಪರಿಸ್ಥಿತಿ ಇದೆ. ಗುತ್ತಿಗೆದಾರರನ್ನು ಕರೆದು ಕಟ್ಟುನಿಟ್ಟಿನ ಸೂಚನೆ ನೀಡಿ ಕಾಮಗಾರಿ ಪೂರ್ಣಗೊಳಿಸಲು ಶಾಸಕರು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸೋಮವಾರ ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಮಂಗಳವಾರ ಕುಶಾಲನಗರ ಹಾಗೂ ಶುಕ್ರವಾರ ಮಡಿಕೇರಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭ ಪ್ರಮುಖರಾದ ಕಿಬ್ಬೆಟ್ಟ ಧರ್ಮಪ್ಪ, ಎಸ್.ಆರ್. ಸೋಮೇಶ್, ಹರೀಶ್‌ಕುಮಾರ್, ಶರತ್‌ಚಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Oplus_16908290

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.