ಸೋಮವಾರಪೇಟೆ, NEWS DESK ಸೆ.7: ತಾಲೂಕಿನ ಶಾಂತಳ್ಳಿ-ಬೆಟ್ಟದಳ್ಳಿ ಎಸ್‌ಕೆಎಲ್‌ಪಿ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಈ ಸಂದರ್ಭ ಶಾಲೆಯ ವಿದ್ಯಾರ್ಥಿಗಳು ಶ್ರೀ ಕೃಷ್ಣ ಹಾಗೂ ರಾಧೆಯರ ವೇಷಭೂಷಣ ಧರಿಸಿ ಗಮನ ಸೆಳೆದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶ್ರೀ ಕೃಷ್ಣನ ಬಾಲಲೀಲೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಾಲಾ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮವನ್ನು ಹಂಚಿಕೊಂಡರು.








