Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಸೆ.7: ಮದರ್ ಥೆರೇಸಾ ಸೇವಾ ಕೇಂದ್ರವು ಸಮಾಜಮುಖಿ ಚಟುವಟಿಕೆಗಳ ಮೂಲಕ ಸಲ್ಲಿಸುತ್ತಿರುವ ಸೇವೆ ಹಾಗೂ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ ಎಂದು ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್‌ನ ಪ್ರಧಾನ ಗುರುಗಳು ಹಾಗೂ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್ ಹೇಳಿದರು.

ವಿರಾಜಪೇಟೆಯ ಸಂತ ಅನ್ನಮ್ಮ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ಹಿರಿಯರ ದಿನಾಚರಣೆ ಹಾಗೂ ಮದರ್ ಥೆರೇಸಾ ಜನ್ಮ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರನ್ನು ಗೌರವಿಸುವ ಕಾರ್ಯ ಅತ್ಯಂತ ವಿಶೇಷವಾದದ್ದು. ಮದರ್ ಥೆರೇಸಾ ಸೇವಾ ಕೇಂದ್ರವು ಸಮಾಜದಲ್ಲಿ ಸಾಧನೆ ಮಾಡಿದವರ ವ್ಯಕ್ತಿತ್ವ ಹಾಗೂ ಸೇವೆಯನ್ನು ಗುರುತಿಸಿ ಪ್ರಶಂಸಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಸಂಸ್ಥೆಯು ಹಲವು ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿದ್ದು, ಸರ್ವರ ಸಹಕಾರದಿಂದ ಪ್ರಗತಿಯತ್ತ ಸಾಗುತ್ತಿದೆ. ಇದು ನಮ್ಮ ಧರ್ಮಕೇಂದ್ರದ ಹೆಮ್ಮೆಯ ಸೇವಾ ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಮಾಜ ಸೇವೆ ಸಲ್ಲಿಸುವಂತಾಗಲಿ ಎಂದು ಅವರು ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮದರ್ ಥೆರೇಸಾ ಸೇವಾ ಕೇಂದ್ರದ ಅಧ್ಯಕ್ಷರು ಹಾಗೂ ನಿವೃತ್ತ ಡಿಡಿಪಿಐ ಪೆರಿಗ್ರಿನ್ ಮಚ್ಚಾಡೋ ಮಾತನಾಡಿ, ಮದರ್ ಥೆರೇಸಾ ಸೇವಾ ಕೇಂದ್ರ ಆರಂಭವಾಗಿ ಐದು ವರ್ಷಗಳಾಗಿದ್ದು, ಮದರ್ ಥೆರೇಸಾ ಅವರ ಸೇವಾ ಜೀವನ ನಮಗೆಲ್ಲ ಪ್ರೇರಣೆಯಾಗಿದೆ ಎಂದರು.

ಸಾಧನೆಯನ್ನು ಪ್ರೀತಿಯಿಂದ ಮಾಡಿದಾಗ ಅದು ಮಹತ್ತರವಾಗುತ್ತದೆ. ಪ್ರೀತಿಯೇ ಸೇವಾ ಜೀವನದ ಬೆನ್ನೆಲುಬಾಗಿದೆ. ಸೇವಾ ಕೇಂದ್ರದ ವತಿಯಿಂದ ಇದುವರೆಗೆ ಸುಮಾರು ರೂ.14 ಲಕ್ಷ ವೆಚ್ಚದಲ್ಲಿ ಔಷಧೋಪಚಾರಕ್ಕೆ ನೆರವು ನೀಡಲಾಗಿದ್ದು, ರೂ.3 ಲಕ್ಷಕ್ಕೂ ಅಧಿಕ ಮೊತ್ತದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ಹಾಗೂ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಗಿದೆ. ಸರ್ವ ಸದಸ್ಯರ ಸಹಕಾರ ಹಾಗೂ ಪ್ರೋತ್ಸಾಹದಿಂದ ಕೇಂದ್ರವು ಮುನ್ನಡೆಯುತ್ತಿದ್ದು, ಹಿರಿಯರ ಮಾರ್ಗದರ್ಶನ ನಿರಂತರವಾಗಿ ದೊರೆಯುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆನೆಡಿಕ್ಟ್ ಸಲ್ಡಾನಾ ಸ್ವರಚಿತ ಹಾಡನ್ನು ಹಾಡಿದರು. ನೋಹ ವಿವೇಕ್ ಹಾಗೂ ವಾಯಿಲೆಟ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಜಾನ್ ಪ್ರಕಾಶ್ ತಂಡ ಪ್ರಾರ್ಥಿಸಿದರು. ಮದರ್ ಥೆರೇಸಾ ಸೇವಾ ಕೇಂದ್ರದ ಉಪಾಧ್ಯಕ್ಷ ಮಾರ್ಟಿನ್ ಬರ್ನಾಡ್ ಸ್ವಾಗತಿಸಿದರು. ಖಜಾಂಚಿ ಜೇಮ್ಸ್ ಮೆನೆಜಸ್ ವಂದಿಸಿದರು.

ವೇದಿಕೆಯಲ್ಲಿ ಸಿಸ್ಟರ್ ರೋಸಿ ಡೈಸಾ, ಸಹಾಯಕ ಗುರುಗಳಾದ ವಿಲ್ಫ್ರೆಡ್ ಅಂತೋಣಿ, ಹಿರಿಯರಾದ ಟೋನಿ ಮೆನೆಜಸ್, ಲಿಲ್ಲಿ ಜೋಸೆಫ್ ಹಾಗೂ ಎವೆಲಿನ್ ಪ್ಯಾರೆಟ್ ಮತ್ತು ಕಾರ್ಯದರ್ಶಿ ಅನಿತಾ ನರೋನ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರು, ಮದರ್ ಥೆರೇಸಾ ಸೇವಾ ಕೇಂದ್ರದ ಸದಸ್ಯರು ಹಾಗೂ ಧರ್ಮಕೇಂದ್ರದ ಭಕ್ತಾದಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಹಿರಿಯ ನಾಗರಿಕರಿಗೆ ಮನೋರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳೂ ಜರುಗಿದವು.

ಸಾಧಕರಿಗೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ

ಸಮಾರಂಭದಲ್ಲಿ ಸಮಾಜ ಸೇವೆ ಹಾಗೂ ಮುದ್ರಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪೌಲ್ ಕ್ಷೇವಿಯರ್, ವಿರಾಜಪೇಟೆಯ ಆರ್ಮಿ ಆಸ್ಪತ್ರೆಯ ವೈದ್ಯೆ ಡಾ. ಜಾಯಿಲಿನ್ ಮೆನೆಜಸ್, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಆಲ್ವಿನ್ ಅಂತೋಣಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಅನ್ರಿಟ ಫ್ರೂಟಾಡೊ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಡೀನ್ ಸಾಲ್ವೋ ಡಿಸೋಜ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಜೆನ್ಸಿ ಎ. ಡೇವಿಡ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇಳೆ 75 ವರ್ಷ ಮೇಲ್ಪಟ್ಟ ಒಟ್ಟು 55 ಹಿರಿಯ ನಾಗರಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.