Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
  • *ಸೆ.12 ರಂದು ವಂದೇ ಮಾತರಂ ಸ್ಪರ್ಧೆ*
  • *ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
  • *ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*
  • *ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಸೆ.7 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಹಯೋಗದಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ರೋಹಿಣಿ, ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಡಾ. ಸನತ್ ಕುಮಾರ್, ಆರ್‌ಎಂಒ ಡಾ. ಅಭಿನಂದನ್ ಬಿ., ನೇತ್ರ ವಿಭಾಗದ ಮುಖ್ಯಸ್ಥೆ ಡಾ. ಕೃಪಾಲಿನಿ ಅಯ್ಯಪ್ಪ, ಸೋಟ್ಟೋ ನೋಡಲ್ ಅಧಿಕಾರಿ ಡಾ. ನಿಶೀದ್ ಜೋಸೆಫ್, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ರವಿಕಿರಣ್ ಕಿಸಾನ್, ಇಎನ್‌ಟಿ ವಿಭಾಗದ ಮುಖ್ಯಸ್ಥೆ ಡಾ. ಶ್ವೇತಾ ಹಾಗೂ ಸಹ ಪ್ರಾಧ್ಯಾಪಕ ಡಾ. ಸತ್ಯಕಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್ ಅವರು ನೇತ್ರದಾನದ ಮಹತ್ವ ಹಾಗೂ ಇಂತಹ ಜಾಗೃತಿ ಕಾರ್ಯಕ್ರಮಗಳ ಅಗತ್ಯತೆಯ ಕುರಿತು ತಿಳಿಸಿದರು. ಮುಖ್ಯ ಆಡಳಿತಾಧಿಕಾರಿ ರೋಹಿಣಿ ಅವರು ಪ್ರತಿವರ್ಷ ಆ. 25ರಿಂದ ಸೆಪ್ಟೆಂಬರ್ 8ರವರೆಗೆ ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು. ವೈದ್ಯಕೀಯ ಅಧೀಕ್ಷಕ ಡಾ. ಸೋಮಶೇಖರ್ ಮಾತನಾಡಿ, ಕಣ್ಣಿನ ದಾನ ಮಾತ್ರವಲ್ಲದೆ ಅಂಗಾಂಗ ದಾನವೂ ಅನೇಕ ಜೀವಗಳಿಗೆ ಹೊಸ ಆಶಾಕಿರಣವಾಗಲಿದೆ ಎಂದರು. ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಡಾ. ಸನತ್ ಕುಮಾರ್ ಅವರು ಪ್ರತಿಯೊಬ್ಬರೂ ನೇತ್ರದಾನದ ಪ್ರತಿಜ್ಞೆ ಕೈಗೊಂಡು, ಅದರ ಮಹತ್ವವನ್ನು ತಮ್ಮ ಕುಟುಂಬ ಸದಸ್ಯರು ಹಾಗೂ ಬಂಧುಗಳಿಗೂ ತಿಳಿಸಬೇಕು ಎಂದು ಕರೆ ನೀಡಿದರು.
ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ರವಿಕಿರಣ್ ಕಿಸಾನ್ ಮಾತನಾಡಿ, ಕೇವಲ ಒಂದು ನಿಮಿಷ ಕಣ್ಣು ಮುಚ್ಚಿಕೊಂಡಿರುವುದೇ ಕಷ್ಟಕರವಾಗಿರುವಾಗ ದೃಷ್ಟಿಯನ್ನು ಕಳೆದುಕೊಂಡವರ ಜೀವನದ ಸಂಕಷ್ಟವನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ನೇತ್ರ ವಿಭಾಗದ ಮುಖ್ಯಸ್ಥೆ ಡಾ. ಕೃಪಾಲಿನಿ ಅಯ್ಯಪ್ಪ ಅವರು ಭಾರತದಲ್ಲಿ ಕಾರ್ನಿಯಾ ಅಂಧತ್ವದ ಪ್ರಮಾಣ ಹಾಗೂ ಅದರ ಪರಿಣಾಮಗಳ ಕುರಿತು ವಿವರಿಸಿದರು. ಒಬ್ಬ ವ್ಯಕ್ತಿಯ ನೇತ್ರದಾನದಿಂದ ಇಬ್ಬರು ಕಾರ್ನಿಯಾ ಅಂಧತ್ವದಿಂದ ಬಳಲುತ್ತಿರುವವರಿಗೆ ದೃಷ್ಟಿ ದೊರಕುವ ಸಾಧ್ಯತೆ ಇದೆ ಎಂದು ತಿಳಿಸಿದರು. ಪ್ರತಿಯೊಂದು ಕುಟುಂಬವೂ ನೇತ್ರದಾನವನ್ನು ಉತ್ತಮ ಸಂಪ್ರದಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನೇತ್ರದಾನ ಪಾಕ್ಷಿಕಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನೇತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಕಿರಣ್ ಭಟ್ ಅವರು ಗಣ್ಯರನ್ನು ಸ್ವಾಗತಿಸಿದರು. ನೇತ್ರಾಧಿಕಾರಿ ಶ್ರೀಮತಿ ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಡಾ. ಶಿವಪ್ರಸನ್ನ ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಡೀನ್, ನಿರ್ದೇಶಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ನಿಶಾ, ನೇತ್ರಾಧಿಕಾರಿ ಚೇತನ್, ರಾಘವೇಂದ್ರ, ಯಜ್ಞ ಪೂಜಾರಿ, ಸಿಸ್ಟಮ್ ಎಂಜಿನಿಯರ್ ಅಪ್ಪಯ್ಯ, ಅಮಿತಾ, ಡಿಇಒ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಡಿಇಒ ಕೌಶಿ ಸೇರಿದಂತೆ ಎಂಬಿಬಿಎಸ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.7 NEWS DESK : ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಹಬ್ಬಗಳು ಮತ್ತು ಆಚರಣೆಗಳು ಬರಲಿದ್ದು, ಈ ಸಂದರ್ಭದಲ್ಲಿ…

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026

*ಮಲೇಷ್ಯಾ ಏಷ್ಯಾ ಕಪ್ ಟೇಕ್ವಾಂಡೋದಲ್ಲಿ ಕೊಡಗಿನ ಇಬ್ಬರು ಕ್ರೀಡಾಪಟುಗಳಿಗೆ ಪದಕ*

ಸೆಪ್ಟೆಂಬರ್ 7, 2026

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026

*ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*

ಸೆಪ್ಟೆಂಬರ್ 7, 2026

*ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.