Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.7 NEWS DESK : ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಹಬ್ಬಗಳು ಮತ್ತು ಆಚರಣೆಗಳು ಬರಲಿದ್ದು, ಈ ಸಂದರ್ಭದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಗೌರಿ ಗಣೇಶ ಹಬ್ಬ ಸಂಬಂಧ ಜಿಲ್ಲೆಯ ಹಲವು ಕಡೆಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತಿದ್ದು, ವಿಸರ್ಜನೆ ಸಂದರ್ಭದಲ್ಲಿ ಸರ್ಕಾರದ ನಿಯಮ ಪಾಲಿಸುವಲ್ಲಿ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯವರು ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಲಹೆ ಮಾಡಿದ್ದಾರೆ. ಈಗಾಗಲೇ ಏಕಗವಾಕ್ಷಿ ಸಮಿತಿ ರಚಿಸಲಾಗಿದ್ದು, ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಸೆಪ್ಟೆಂಬರ್ 13 ರೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಏಕಗವಾಕ್ಷಿ ಸಮಿತಿಯಲ್ಲಿ ಆಯಾಯ ತಾಲ್ಲೂಕಿನ ತಹಶೀಲ್ದಾರರು ಅಧ್ಯಕ್ಷರಾಗಿ, ಪರಿಸರ ಅಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ತಾಲ್ಲೂಕಿನ ಪೊಲೀಸ್ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಸೆಸ್ಕ್ ಇಲಾಖೆಯ ಎಇಇಗಳು, ತಾ.ಪಂ.ಇಒ ಗಳು ಮತ್ತು ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು/ ಮುಖ್ಯಾಧಿಕಾರಿಗಳು ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಡಿಜೆಯನ್ನು ಹೆಚ್ಚು ಬಳಸುತ್ತಿದ್ದು, ಈ ಸಂದರ್ಭದಲ್ಲಿ ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಸರ್ಕಾರದ ನಿಯಮಗಳ ಬಗ್ಗೆ ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಧಾರ್ಮಿಕ ಹಬ್ಬ ಹಾಗೂ ಆಚರಣೆಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ಗೌರಿ-ಗಣೇಶ ಮೂರ್ತಿಗಳನ್ನು ಪರಿಸರ ಸ್ನೇಹಿಯಾಗಿ ಪ್ರತಿಷ್ಠಾಪಿಸಿ ಪೂಜಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಾತನಾಡಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಏಕಗವಾಕ್ಷಿ ಸಮಿತಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಹೇಳಿದರು. ಗೌರಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಮೆರವಣಿಗೆ ಸಾಗುವ ಪ್ರದೇಶದಲ್ಲಿ ಹೆಚ್ಚಿನ ಬೆಳಕು ವ್ಯವಸ್ಥೆ ಇರಬೇಕು. ವಿಸರ್ಜನೆ ಸಂದರ್ಭದಲ್ಲಿ ಜೀವರಕ್ಷಕ ಜಾಕೆಟ್ ಬಳಸಬೇಕು. ಹೀಗೆ ಏಕಗವಾಕ್ಷಿ ಸಮಿತಿಯು ಈ ಎಲ್ಲಾ ಬಗ್ಗೆ ಗಮನಿಸಿ ಮೇಲುಸ್ತುವಾರಿ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ನಿರ್ದೇಶನ ನೀಡಿದರು. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಬೃಹತ್ ವಾಹನದಲ್ಲಿ ಮೆರವಣಿಗೆ ಕೈಗೊಳ್ಳಲಿದ್ದು, ಈ ಸಂಬಂಧ ವಾಹನಗಳ ಅನುಮತಿ ಬಗ್ಗೆ ಸಂಬಂಧಿಸಿದವರ ಜೊತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ಸಭೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲಾ ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು ಮಾತನಾಡಿ ಪ್ರತಿ ವರ್ಷದಂತೆ ಈ ಬಾರಿಯು ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಬಳಸದೆ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿದರು.
ಬಣ್ಣದ ಮೂರ್ತಿಗಳನ್ನು ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಮೂಲ ಕಲುಷಿತಗೊಂಡು ಅವುಗಳ ಭೌತಿಕ ಹಾಗೂ ರಾಸಾಯನಿಕ ಸ್ಥಿತಿಗಳ ಬದಲಾವಣೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ, ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಉಂಟಾಗುತ್ತದೆ. ಆದ್ದರಿಂದ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತಾಗಬೇಕು ಎಂದರು. ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ಅವರು ತಿಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳಾದ ಸೂರಜ್ ಮತ್ತು ಮೇದಪ್ಪ ಅವರು ಮಾತನಾಡಿ ಪೊಲೀಸ್ ಇಲಾಖೆಯಿಂದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದರೆ ಪಾಲಿಸುತ್ತಿಲ್ಲ ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ತಹಶೀಲ್ದಾರರಾದ ಪ್ರವೀಣ್ ಕುಮಾರ್, ಶ್ರೀಧರ, ಕೃಷ್ಣಮೂರ್ತಿ, ಸಂಜನಾ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಕೃಷ್ಣ ಪ್ರಸಾದ್, ನಾಚಪ್ಪ, ಗೋಪಿ, ಗಿರೀಶ್, ತಾ.ಪಂ.ಇಒಗಳಾದ ಶೇಖರ್, ಅಪ್ಪಣ್ಣ, ರಾಜೇಶ್, ಇತರರು ಇದ್ದರು.
ಮತ್ತಷ್ಟು ಮಾಹಿತಿ: ಸಾರ್ವಜನಿಕರು ಪರಿಸರಸ್ನೇಹಿ ಗೌರಿಗಣೇಶ ಹಬ್ಬವನ್ನು ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲ ಸಂರಕ್ಷಿಸಲು ಸಹಕರಿಸಬೇಕಾಗಿ ಕೋರಿದೆ. ಮಾನ್ಯ ಉಚ್ಛ ನ್ಯಾಯಾಲಯದ ಆದೇಶದ ಪ್ರಕಾರ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟ ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು. ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.
ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಹಾಗೂ ಒಣಕಸವನ್ನು ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು, ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಗಣೇಶೋತ್ಸವದ ಸಂದರ್ಭದಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದನ್ನು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸಲಾಗಿದೆ. ಗಣೇಶ ವಿಗ್ರಹಗಳ ವಿಸರ್ಜನೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳ ಹೊರತಾಗಿ ಇತರೆ ಯಾವುದೇ ಪಟಾಕಿ ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ಕೀರ್ತಿ ಕುಮಾರ್ ಅವರು ಕೋರಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.