
ಮಡಿಕೇರಿ ಸೆ.7 NEWS DESK : ಮಡಿಕೇರಿ ಪ್ರಧಾನ ಅಂಚೆ ಕಚೇರಿಯಲ್ಲಿ ಸೆ.9 ರಿಂದ ಸೆ.11ರವರೆಗೆ ಮೂರು ದಿನಗಳ ಕಾಲ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಂಡು, ತಮ್ಮ ಆಧಾರ್ ನೋಂದಣಿ ಹಾಗೂ ಆಧಾರ್ ವಿವರಗಳ ತಿದ್ದುಪಡಿಯನ್ನು ಮಾಡಿಸಿಕೊಳ್ಳುವಂತೆ ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









