Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪಾಲಾಕ್ಷ ಅವರಿಗೆ ಬೀಳ್ಕೊಡುಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲಾಕ್ಷ ಅವರಿಗೆ ಬೀಳ್ಕೊಡುಗೆ

ಸೆಪ್ಟೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, ಸೆ.7 NEWS DESK : ಮಾದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಪಾಲಾಕ್ಷ ಅವರಿಗೆ ಶಾಲೆಯಲ್ಲಿ  ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಮುಖ್ಯ ಶಿಕ್ಷಕ ಪಾಲಾಕ್ಷ ದಂಪತಿಯನ್ನು ಶಾಲೆಯ ವತಿಯಿಂದ ಹಾಗೂ ಗ್ರಾಮಸ್ಥರ ವತಿಯಿಂದ ಶಾಲು ಹೊದಿಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಪಾಲಾಕ್ಷ ಅವರು ಮುಖ್ಯ ಶಿಕ್ಷಕರಾಗಿ ಮಾದಾಪುರ ಶಾಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ, ಶಿಸ್ತು ಮತ್ತು ವಿದ್ಯಾರ್ಥಿಗಳ ಮೇಲಿನ ಅವರ ಮಮತೆಯನ್ನು ಕಾರ್ಯಕ್ರಮದಲ್ಲಿ ನೆನೆಸಿಕೊಳ್ಳಲಾಯಿತು.
ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪಿಯೂ ಕಾಲೇಜಿನ ಪ್ರಾಂಶುಪಾಲ ಸಿ.ಜಿ. ಮಂದಪ್ಪ ಮಾತನಾಡಿ, ಮುಖ್ಯ ಶಿಕ್ಷಕ ಪಾಲಾಕ್ಷ ಅವರು ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ. ಶಿಕ್ಷಕರು ಉತ್ತಮವಾಗಿ ಅನನ್ಯ ಸೇವೆ ಸಲ್ಲಿಸಿದಾಗ ಸಮಾಜ ಗೌರವಿಸುತ್ತದೆ ಎಂದರು. ಶುಭ ಹಾರೈಕೆ: ತಾಲ್ಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ
ಸೋಮಯ್ಯ ಮಾತನಾಡಿ, ಅವರ ನಿವೃತ್ತ ಜೀವನವು ಸುಖ, ಶಾಂತಿ, ನೆಮ್ಮದಿ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಹಾರೈಸಿದರು. ಸನ್ಮಾನಕ್ಕೆ ಪ್ರತಿಕ್ರಿಯಿಸಿದ ನಿವೃತ್ತ ಮುಖ್ಯ ಶಿಕ್ಷಕ ಪಾಲಾಕ್ಷ ಮಾತನಾಡಿ, ತಮ್ಮ ಸೇವಾವಧಿಯಲ್ಲಿ ಶಾಲೆಯ ಪ್ರಗತಿಗೆ ಸಹಕರಿಸಿದ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು ಹಾಗೂ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು. ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ರತ್ನಕುಮಾರ್ , ತಾಲ್ಲೂಕು ಸರ್ಕಾರಿ ನೌಕರರ ಅಧ್ಯಕ್ಷ ಪ್ರದೀಪ್, ನಿರ್ದೇಶಕ ಯಶವಂತಕುಮಾರ್, ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್.ಬಿ.ತಳವಾರ್,
ಮಾತನಾಡಿದರು. ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಮಾದಪ್ಪ, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿ.ಸಿ. ಡೈಸಿ, ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಟಿ.ಜಿ.ಪ್ರೇಮಕುಮಾರ್, ಬಸವರಾಜ್, ಚಂದ್ರಚಾರ್, ಮಾದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಗಣಪತಿ, ಸಿ ಆರ್ ಪಿ ಟಿ.ಈ.ಮಂಜುನಾಥ್, ಎಸ್ ಜೆ ಎಂ ಬಾಲಿಕಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಾರಪ್ಪ, ಬೇಲೂರಿನ ಉಪನ್ಯಾಸಕ ಧರ್ಮೇಗೌಡ, ನಿವೃತ್ತ ಮುಖ್ಯ ಶಿಕ್ಷಕರಾದ ಶಿವಶಂಕರ್, ಬೀರೇಗೌಡ, ಪ್ರೌಢಶಾಲಾ ನಿವೃತ್ತ ಶಿಕ್ಷಕ ಆರ್.ಟಿ.ಅಂಟರದಾನಿ, ಇತರರು ಇದ್ದರು. ಶಿಕ್ಷಕ ಎ.ಎಂ.ಭರತ್ ನಿರ್ವಹಿಸಿದರು.
ಮಾದಾಪುರ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ,ಸದಸ್ಯರು, ಪೋಷಕರು, ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು. ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಹಾಗೂ ಸುತ್ಯಾರ್ಹ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕ ಪಾಲಾಕ್ಷ ಮತ್ತು ಅವರ ಪತ್ನಿ ಪಲ್ಲವಿ
ಅವರಿಗೆ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಗೌರವ ಪೂರ್ವಕವಾಗಿ ಗೌರವ ವಂದನೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ನ. 2 ಮತ್ತು 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 24 ತಂಡಗಳು ಭಾಗಿ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ನವೆಂಬರ್ 1ರಂದು ಕೊಡವ ಪ್ರೀಮಿಯರ್ ಲೀಗ್ ಸೀಸನ್-5 ಆಟಗಾರರ ಹರಾಜು

ಅಕ್ಟೋಬರ್ 31, 2026

ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2ಕ್ಕೆ ಅದ್ದೂರಿ ಚಾಲನೆ; ಕ್ರೀಡೆ ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆಯಾಗಿದೆ: ಸಿ.ಎಸ್. ಅರುಣ್ ಮಾಚಯ್ಯ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ನವೆಂಬರ್ 1ರಂದು ಕೊಡವ ಪ್ರೀಮಿಯರ್ ಲೀಗ್ ಸೀಸನ್-5 ಆಟಗಾರರ ಹರಾಜು

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.31: ಕೊಡವ ಪ್ರೀಮಿಯರ್ ಲೀಗ್ (ಕೆಪಿಎಲ್) ಸೀಸನ್-5 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಆಟಗಾರರ ಹರಾಜು ಪ್ರಕ್ರಿಯೆಯು…

ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2ಕ್ಕೆ ಅದ್ದೂರಿ ಚಾಲನೆ; ಕ್ರೀಡೆ ಸಮಾಜವನ್ನು ಒಗ್ಗೂಡಿಸುವ ಸುಂದರ ವೇದಿಕೆಯಾಗಿದೆ: ಸಿ.ಎಸ್. ಅರುಣ್ ಮಾಚಯ್ಯ

ಅಕ್ಟೋಬರ್ 31, 2026

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ

ಅಕ್ಟೋಬರ್ 31, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.