Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*
  • *ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*
  • *ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*
  • *ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*
  • *ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*
  • *ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*
  • *ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವರ ಹಕ್ಕುಗಳಿಗೆ ವಿರೋಧ ಸರಿಯಲ್ಲ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಸಮಾಧಾನ*

ಸೆಪ್ಟೆಂಬರ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.8 : ಇತ್ತೀಚೆಗೆ ಕೊಡಗು ಗೌಡ ಸಮಾಜಗಳ ಒಕ್ಕೂಟ ವಿಶೇಷ ಸಭೆ ನಡೆಸಿ ಕೊಡವರ ಸಂವಿಧಾನಬದ್ಧ ಹಕ್ಕುಗಳ ವಿರುದ್ಧ ನಿರ್ಣಯ ಕೈಗೊಂಡಿರುವುದು ಖಂಡನೀಯ. ಕೊಡವರ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲವೆಂದು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅನಾದಿ ಕಾಲದಿಂದಲೂ ಕಾವೇರಿ ತಾಯಿಯ ಈ ಪುಣ್ಯಭೂಮಿಯಲ್ಲಿ ಕೊಡವರು ಶಾಂತಿಯುತವಾಗಿ ಜೀವನ ಸಾಗಿಸುತ್ತಾ ಬಂದಿದ್ದಾರೆ. ತಮ್ಮ ಹಕ್ಕುಗಳಿಗಾಗಿ ನ್ಯಾಯಯುತ ಹೋರಾಟ ನಡೆಸಿದ್ದಾರೆಯೇ ಹೊರತು ಇತರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಎಂದಿಗೂ ಮಾಡಿಲ್ಲ. ಸ್ವಾಭಿಮಾನಿ ಕೊಡವರ ತ್ಯಾಗಮಯ ಗುಣವನ್ನೇ ದೌರ್ಬಲ್ಯವೆಂದು ತಿಳಿದುಕೊಂಡಿರುವ ಕೆಲವರು ಕೊಡವರ ಹಕ್ಕುಗಳ ಮೇಲೆ ಸವಾರಿ ಮಾಡುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ.
ಪುಟ್ಟ ಜಿಲ್ಲೆ ಕೊಡಗಿನಲ್ಲಿ ಕೊಡವರು ಮಾತ್ರವಲ್ಲದೆ ಎಲ್ಲಾ ಜಾತಿ ಜನಾಂಗದವರು ಸೌಹಾರ್ದತೆಯಿಂದ ಬದುಕು ಕಟ್ಟಿಕೊಂಡಿದ್ದಾರೆ. ಕೊಡವರು ಎಲ್ಲರೊಂದಿಗೂ ಅತ್ಯಂತ ಗೌರವ ಮತ್ತು ಅನ್ಯೋನ್ಯತೆಯಿಂದ ಇದ್ದು, ಯಾರೊಂದಿಗೂ ಭಿನ್ನಮತವನ್ನು ಹೊಂದಿಲ್ಲ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಡಗು ಮಾದರಿಯಾಗಿದೆ. ಆದರೆ ಕೆಲವರು ಕೊಡವರ ಸಂವಿಧಾನಬದ್ಧ ಹಕ್ಕುಗಳನ್ನೇ ತಪ್ಪಾಗಿ ಅರ್ಥೈಸಿಕೊಂಡು ಒಡಕು ಮೂಡಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅತ್ಯಂತ ವಿಶಿಷ್ಟ ಮತ್ತು ಸೂಕ್ಷö್ಮ ಜನಾಂಗವಾಗಿರುವ ಕೊಡವರ ಅಸ್ತಿತ್ವವನ್ನು ಉಳಿಸಿಕೊಳ್ಳಲು ಅಗತ್ಯವಿರುವ ಹಕ್ಕುಗಳನ್ನು ಮಂಡನೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಹಕ್ಕುಗಳನ್ನು ಮಂಡಿಸುವ ಸಂದರ್ಭ ಇತರ ಜನಾಂಗಗಳ ಹಕ್ಕುಗಳನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನಗಳನ್ನು ಕೊಡವ ಸಂಘಟನೆಗಳು ಮಾಡುತ್ತಿಲ್ಲ. ಕೊಡವರ ಭೂಮಿ, ಭಾಷೆ, ಸಾಂಪ್ರದಾಯಿಕ ಕೋವಿ ಹಕ್ಕಿನ ರಕ್ಷಣೆ, ರಾಜಕೀಯ ಬಲ ಮತ್ತು ಕೊಡವ ಜನಾಂಗಕ್ಕೆ ಸಂವಿಧಾನದ ಭದ್ರತೆಗಾಗಿ ನಿರಂತರ ಹೋರಾಟಗಳು ನಡೆಯುತ್ತಿದೆ. ಇನ್ನು ಮುಂದೆಯೂ ನಡೆಯಲಿದೆ, ಈ ಎಲ್ಲಾ ಹೋರಾಟಗಳಿಗೆ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಸಂಪೂರ್ಣ ಬೆಂಬಲವನ್ನು ನೀಡಲಿದೆ. ಕೊಡವರ ಹೋರಾಟಕ್ಕೆ ಅನಗತ್ಯವಾಗಿ ಅಡ್ಡಿ ಪಡಿಸುವುದು ಅಥವಾ ಬೇರೆಯದ್ದೇ ಅರ್ಥ ಕಲ್ಪಿಸುವುದನ್ನು ಸಂಘಟನೆ ತೀವ್ರವಾಗಿ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ. ಕೊಡವರು, ಗೌಡರು ಸೇರಿದಂತೆ ಎಲ್ಲಾ ಜಾತಿ ಜನಾಂಗದವರು ಒಗ್ಗಟ್ಟಿನಿಂದ ಜೀವನ ಸಾಗಿಸುವುದನ್ನು ಸಹಿಸದ ಕೆಲವರು ವರ್ಷದಲ್ಲಿ ಒಂದೆರಡು ಬಾರಿ ಈ ರೀತಿಯ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ. ಸಮಾಜದಲ್ಲಿ ಒಡಕು ಮೂಡಿಸುವ ಇಂತಹ ವ್ಯಕ್ತಿಗಳು ತಮ್ಮ ಚಾಳಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಮನು ಮುದ್ದಪ್ಪ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಮಾತೆ ಮರಿಯಮ್ಮ ಜಯಂತ್ಯೋತ್ಸವ*

ಸೆಪ್ಟೆಂಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.8 : ಕೊಡಗು ಜಿಲ್ಲೆಯಾದ್ಯಂತ ಮಾತೆ ಮರಿಯಮ್ಮನವರ ಜಯಂತಿಯನ್ನು ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು. ಕಳೆದ…

*ಕೊಡವರ ನ್ಯಾಯಯುತ ಹಕ್ಕುಗಳಿಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ : ಬೇಂಗ್ ನಾಡ್ ಕೊಡವ ಸಮಾಜ ಅಸಮಾಧಾನ*

ಸೆಪ್ಟೆಂಬರ್ 8, 2026

*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 8, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 7, 2026

*ಪಾಲಾಕ್ಷ ಅವರಿಗೆ ಬೀಳ್ಕೊಡುಗೆ*

ಸೆಪ್ಟೆಂಬರ್ 7, 2026

*ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ವಿಶೇಷ ಶಿಬಿರ*

ಸೆಪ್ಟೆಂಬರ್ 7, 2026

*ಗೌರಿ-ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ವಿಸರ್ಜನೆ : ಸೆ.13 ರೊಳಗೆ ಅನುಮತಿ ಪಡೆಯಿರಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 7, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರಾಷ್ಟ್ರೀಯ ನೇತ್ರದಾನ ಪಾಕ್ಷಿಕಾಚರಣೆ*

ಸೆಪ್ಟೆಂಬರ್ 7, 2026

*ಮದರ್ ಥೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ: ರೆ. ಫಾ. ಜೇಮ್ಸ್ ಡೊಮಿನಿಕ್. ; ವಿರಾಜಪೇಟೆ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಹಿರಿಯರ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ*

ಸೆಪ್ಟೆಂಬರ್ 7, 2026

*ಸೆ.12 ರಂದು ವಂದೇ ಮಾತರಂ ಸ್ಪರ್ಧೆ*

ಸೆಪ್ಟೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.