ಮಡಿಕೇರಿ, NEWS DESK ಸೆ.8: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೈಬುಲಿರ ಪಾರ್ವತಿ ಬೋಪಯ್ಯ ಅವರು ಸ್ಥಾಪಿಸಿರುವ ದಿ. ಕೈಬುಲಿರ ಬೋಪಯ್ಯ ಜ್ಞಾಪಕಾರ್ಥ ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲೆಯ ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದರೊಂದಿಗೆ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.
ಕೊಡಗು ಜಿಲ್ಲೆಯ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಒಂದು ಕಾಲೇಜಿನಿಂದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ಸ್ಪರ್ಧಾರ್ಥಿಗಳು ಕೆಳಗಿನ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಎರಡು ಪುಟ ಮೀರದಂತೆ ಸ್ವಹಸ್ತದಿಂದ ಪ್ರಬಂಧ ಬರೆದು, ಸೆ.15, 2026ರೊಳಗೆ ಸಲ್ಲಿಸಬೇಕು.
ಪ್ರಬಂಧದ ವಿಷಯಗಳು:
1. ಕನ್ನಡ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ
2. ಸಾಹಿತ್ಯ ಮತ್ತು ಸಮಾಜ
3. ಕನ್ನಡ ಸಾಹಿತ್ಯದ ಬೆಳವಣಿಗೆಯಲ್ಲಿ ಪತ್ರಿಕೆಗಳ ಪಾತ್ರ
4. ಕೊಡಗಿನಲ್ಲಿ ಕನ್ನಡವನ್ನು ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ
ಪ್ರಬಂಧವನ್ನು ಅಂಚೆ, ವಾಟ್ಸ್‌ಆ್ಯಪ್ ಅಥವಾ ಇ-ಮೇಲ್ ಮೂಲಕ ಕಳುಹಿಸಬಹುದು.
ಪ್ರಬಂಧ ಕಳುಹಿಸಬೇಕಾದ ವಿಳಾಸ:
ಅಧ್ಯಕ್ಷರು,
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,
ಅಂಬೇಡ್ಕರ್ ಭವನದ ಬಳಿ, ಸುದರ್ಶನ್ ವೃತ್ತ,
ಮಡಿಕೇರಿ–571201.
ಮೊಬೈಲ್: 9113892396
ಇ-ಮೇಲ್: kamathkeshava33@gmail.com
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಂಸಾ ಪತ್ರ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







