
ವಿರಾಜಪೇಟೆ ಸೆ.8 NEWS DESK : ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಯ ಪ್ರಮುಖ ಸಭೆಯು ನಗರಾಧ್ಯಕ್ಷ ಮಾಳೇಟಿರ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ, ಎಸ್.ಐ.ಆರ್ ಯೋಜನೆ ಹಾಗೂ ಭಾರತ್ ಜೋಡೋ ಕಾರ್ಯಕ್ರಮದ ಮುಂದಿನ ರೂಪುರೇಷೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರಮುಖವಾಗಿ ವಿರಾಜಪೇಟೆ ನಗರ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು, ಸಾಮಾಜಿಕ ನ್ಯಾಯದ ತತ್ವದಡಿಯಲ್ಲಿ ಸಮಿತಿ ರಚಿಸಲು ನಿರ್ಧರಿಸಲಾಯಿತು. ಪ್ರತಿಯೊಂದು ಬೂತ್‍ನಿಂದ ಸದಸ್ಯರ ಹೆಸರುಗಳನ್ನು ಪಡೆದುಕೊಂಡು ಅಂತಿಮ ಪಟ್ಟಿಯನ್ನು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಸಲ್ಲಿಸಿ, ನೂತನ ಸಮಿತಿಯನ್ನು ಆಯ್ದುಕೊಳ್ಳಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸಿ.ಎ. ನಾಸರ್, ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ಶಾಹುಲ್ ಹಮೀದ್, ದಿನೇಶ್ ನಂಬಿಯಾರ್, ಡಿಸಿಸಿ ಸದಸ್ಯರಾದ ಮರ್ವೀನ್ ಲೋಬೊ, ಸಿ.ಬಿ. ರವಿ, ಹಿರಿಯ ಮುಖಂಡರಾದ ಚಿಲ್ಲವಂಡ ಕಾವೇರಪ್ಪ, ಡಿ.ಸಿ. ಧ್ರುವ, ಮಾಜಿ ನಗರಾಧ್ಯಕ್ಷರಾದ ಜಿ.ಜಿ. ಮೋಹನ್, ಮಾದಂಡ ತಿಮ್ಮಯ್ಯ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಸ್ನಾ ಭಾನು, ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಶಬೀರ್, ಬ್ಲಾಕ್ ಎಸ್.ಸಿ. ಘಟಕಾಧ್ಯಕ್ಷ ಮಹದೇವ್ ಉಪಸ್ಥಿತರಿದ್ದರು. ಅಲ್ಲದೆ, ಪುರಸಭೆಯ ಮಾಜಿ ಹಾಗೂ ನಾಮನಿರ್ದೇಶಿತ ಸದಸ್ಯರು, ವಿವಿಧ ಬೂತ್ ಅಧ್ಯಕ್ಷರು, ಬಿ.ಎಲ್.ಎಗಳು ಮತ್ತು ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯದರ್ಶಿ ಶಶಿಧರನ್ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಇತ್ತೀಚೆಗೆ ಅಗಲಿದ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಯೂಸಫ್ ಅವರಿಗೆ ಮೌನಾಚರಣೆ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.









