Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.9:  ಅಧಿಕಾರಿಗಳು ಮಾನವೀಯತೆಯ ದೃಷ್ಟಿಕೋನದಿಂದ ಕರ್ತವ್ಯ ನಿರ್ವಹಿಸಬೇಕು.ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗೆ ಅಲೆಸುವುದು ಅಥವಾ ಸತಾಯಿಸುವುದು ಸರಿಯಲ್ಲ ಎಂದು ಕರ್ನಾಟಕ ಲೋಕಾಯುಕ್ತ ಮಡಿಕೇರಿ ಡಿವೈಎಸ್‌ಪಿ ದಿನಕರ ಶೆಟ್ಟಿ  ತಿಳಿಸಿದರು.
ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ ಸಂದರ್ಭ ದೂರು ಅರ್ಜಿಗಳನ್ನು  ಸ್ವೀಕರಿಸಿ, ದೂರುದಾರರ ಅಹವಾಲುಗಳನ್ನು ಆಲಿಸಿದ ಅವರು ಅಧಿಕಾರಿಗಳಿಗೆ  ಸೂಚನೆ ನೀಡಿದರು.
ಅಲೆದರೂ ನಡೆಯದ ಕೆಲಸ-ಮನವಿದಾರ ಬಾಲಕೃಷ್ಣ ಅವರು ಕಳೆದ ಮೂರು ವರ್ಷಗಳಿಂದ ಭೂಮಿ ದುರಸ್ತಿಗಾಗಿ ಕಚೇರಿಗೆ ಅಲೆಯುತ್ತಿದ್ದರೂ, ಇದುವರೆಗೆ ಸಮಸ್ಯೆ ಬಗೆಹರಿದಿಲ್ಲ ಎಂದು ದೂರಿದರು. ಮತ್ತೊಬ್ಬರು ತಮ್ಮ ಜಮೀನು ಒತ್ತುವರಿಯಾಗಿದ್ದು, ಸರ್ವೆ ನಡೆಸಿ ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದರು. ಇನ್ನೊಬ್ಬ ದೂರುದಾರರು ಜಮೀನಿನ ಖಾತೆ ಮಾಡಿಕೊಡುವಂತೆ ಹಲವು ಬಾರಿ ಮನವಿ ಮಾಡಿದರೂ ಕೆಲಸವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಭೂಮಿ ದುರಸ್ತಿ ಕಾರ್ಯ ಪೂರ್ಣಗೊಂಡಲ್ಲಿ ಕುಟುಂಬದ ಸದಸ್ಯರಿಗೆ ಜಮೀನಿನ ಪಾಲು ಮಾಡಲು ಅನುಕೂಲವಾಗಲಿದೆ. ಸಣ್ಣ ಪ್ರಮಾಣದ ಭೂಮಿ ಹೊಂದಿರುವವರು ಜಮೀನು ವಿಭಜನೆ ಮಾಡಿಕೊಳ್ಳಲು ದುರಸ್ತಿ ಅಗತ್ಯವಾಗಿದ್ದು, ಈ ಕಾರ್ಯ ವಿಳಂಬವಾದರೆ ಕುಟುಂಬದವರಿಗೆ ಭಾಗ ಮಾಡುವುದು ಕಷ್ಟವಾಗುತ್ತದೆ ಎಂದು ದೂರುದಾರರು ಡಿವೈಎಸ್‌ಪಿ ಅವರ ಗಮನಕ್ಕೆ ತಂದರು.
ಕೆಲಸ ವಿಳಂಬ ಸಲ್ಲ-ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ದಿನಕರ ಶೆಟ್ಟಿ ಅವರು, ಕಳೆದ ಮೂರು ವರ್ಷಗಳಿಂದ ಭೂಮಿ ದುರಸ್ತಿ ಮಾಡದೆ ಸಾರ್ವಜನಿಕರನ್ನು ಕಚೇರಿಗೆ ಅಲೆಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ, ಮಾನವೀಯತೆಯಿಂದ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಹೇಳಿದರು. 15 ದಿನಗಳೊಳಗೆ ಭೂಮಿ ದುರಸ್ತಿ ಕಾರ್ಯ ಪೂರ್ಣಗೊಳ್ಳದಿದ್ದಲ್ಲಿ ಮತ್ತೊಮ್ಮೆ ತಮ್ಮ ಗಮನಕ್ಕೆ ತರುವಂತೆ ದೂರುದಾರರಿಗೆ ಸಲಹೆ ನೀಡಿದರು.
ಖಾಲಿ ನಿವೇಶನದಲ್ಲಿರುವ ಉದ್ಯಾನವನದ ಜಾಗವನ್ನೂ ಖಾತೆ ಮಾಡಿರುವ ಕುರಿತು ದೂರುಗಳು ಬರುತ್ತಿವೆ. ಅಧಿಕಾರಿಗಳು ಇಂತಹ ಕಾರ್ಯಗಳಿಗೆ ಮುಂದಾಗಬಾರದು. ಸಾರ್ವಜನಿಕರಿಂದ ದೂರುಗಳು ಬಂದಾಗ ಸಂಬAಧಪಟ್ಟ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಸಮಸ್ಯೆ ಪರಿಹರಿಸಬೇಕು ಎಂದು ದಿನಕರ ಶೆಟ್ಟಿ ಸೂಚಿಸಿದರು.
ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಸಮಯಕ್ಕೆ ಸರಿಯಾಗಿ ಬಿಸಿನೀರು ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. ಕೆಲವು ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಕುರಿತು ವಿಶೇಷವಾಗಿ ಗಮನಹರಿಸುವಂತೆ ಸೂಚಿಸಿದರು.
ರಾಜಾಸೀಟ್ ಬಳಿಯ ಕೂರ್ಗ್ ವಿಲೇಜ್ ಬಗ್ಗೆಯೂ ಲೋಕಾಯುಕ್ತ ಡಿವೈಎಸ್‌ಪಿ ಮಾಹಿತಿ ಪಡೆದರು. ಕೂರ್ಗ್ ವಿಲೇಜ್‌ನ ಜಾಗವು ಸಾರ್ವಜನಿಕ ಉಪಯೋಗಕ್ಕೆ ಬಾರದಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ವಿವಿಧ ಸರ್ಕಾರಿ ಕಚೇರಿಗಳಲ್ಲಿರುವ ಲೋಕಾಯುಕ್ತ ನಾಮಫಲಕಗಳಲ್ಲಿ ಸಂಚಾರಿ ದೂರವಾಣಿ ಸಂಖ್ಯೆಗಳು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ನಮೂದಿಸಬೇಕು. ಕೆಲವು ಕಚೇರಿಗಳಲ್ಲಿ ದೂರವಾಣಿ ಸಂಖ್ಯೆಯನ್ನು ಸಣ್ಣದಾಗಿ ಅಥವಾ ಸರಿಯಾಗಿ ಕಾಣದ ರೀತಿಯಲ್ಲಿ ಬರೆದಿರುವ ಕುರಿತು ದೂರುಗಳು ಬರುತ್ತಿವೆ ಎಂದು ತಿಳಿಸಿದರು.
ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ವೀಣಾ ನಾಯಕ್ ಮಾತನಾಡಿದರು. ಕಡಗದಾಳುವಿನ ಶಿವಶಂಕರ, ಯವಕಪಾಡಿಯ ಕೆ.ಬಿ.ಪೊಣ್ಣಪ್ಪ ಹಾಗೂ ಮೇಕೇರಿಯ ಕೆ.ಎಸ್.ಮೊಣ್ಣಪ್ಪ ಅವರು ಭೂಮಿ ವಿಲೇವಾರಿಗೆ ಸಂಬoಧಿಸಿದoತೆ ಮನವಿ ಸಲ್ಲಿಸಿದರು.
ತಾಲ್ಲೂಕು ಪಂಚಾಯಿತಿ ಇಒ ಶೇಖರ್ ಅವರು ಹಿಂದಿನ ಸಭೆಯ ನಡಾವಳಿಯನ್ನು ಓದಿದರು. ಶಿರಸ್ತೇದಾರ್ ದೇವರಾಜು ಅವರು ಕಂದಾಯ ಇಲಾಖೆಗೆ ಸಂಬoಧಿಸಿದ ಮಾಹಿತಿಯನ್ನು ನೀಡಿದರು. ಭೂದಾಖಲೆಗಳ ಸಹಾಯಕ ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಸಂಬoಧಿಸಿದ ವಿಷಯಗಳ ಕುರಿತು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.