Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಸೆ.10: “ರಕ್ತದಾನ – ಜೀವದಾನ” ಎಂಬ ಸಂದೇಶದೊಂದಿಗೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ NCC, NSS ಹಾಗೂ ಯುವ ರೆಡ್ ಕ್ರಾಸ್ (YRC) ಘಟಕಗಳ ಸಂಯುಕ್ತ ಆಶ್ರಯದಲ್ಲಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಗುರುವಾರ ಬೃಹತ್ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಒಟ್ಟು 65 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ, “ನಿಮ್ಮ ಒಂದು ರಕ್ತದ ಹನಿ ಮತ್ತೊಬ್ಬರ ಬದುಕಿನ ಹೊಸ ಅಧ್ಯಾಯಕ್ಕೆ ನಾಂದಿಯಾಗುತ್ತದೆ” ಎಂದು ಹೇಳಿದರು. ರಕ್ತದಾನವು ಜಾತಿ, ಧರ್ಮ, ಭಾಷೆಯ ಭೇದವಿಲ್ಲದೆ ಮತ್ತೊಂದು ಜೀವಕ್ಕೆ ಜೀವದಾನ ಮಾಡುವ ಶ್ರೇಷ್ಠ ಮಾನವೀಯ ಸೇವೆಯಾಗಿದೆ. ಯುವಶಕ್ತಿ ಸಮಾಜದಲ್ಲಿ ಬದಲಾವಣೆ ತರುವ ಸಾಮರ್ಥ್ಯ ಹೊಂದಿದ್ದು, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಮಾತನಾಡಿ, ಪ್ರಸ್ತುತ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ಹೆಚ್ಚಿನ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಅಗತ್ಯವಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಲಭ್ಯತೆ ಹೆಚ್ಚಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
59 ಬಾರಿ ರಕ್ತದಾನ ಮಾಡಿರುವ ಮತ್ತೊಬ್ಬ ಮುಖ್ಯ ಅತಿಥಿ ಖಲೀಲ್ ಕ್ರಿಯೇಟಿವ್ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ನಮ್ಮ ರಕ್ತ ಮತ್ತೊಬ್ಬರ ಅಮೂಲ್ಯ ಜೀವ ಉಳಿಸಲು ನೆರವಾಗುತ್ತದೆ. ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆ ಬೆಳೆಸಿಕೊಂಡು ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಜೊತೆಗೆ ತಮ್ಮ ಗುರಿಯನ್ನು ಸ್ಪಷ್ಟಪಡಿಸಿಕೊಂಡು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು.
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ  ಬೊಟ್ಟಂಗಡ ಗಣಪತಿ ಅವರು ವಿದ್ಯಾರ್ಥಿಗಳು ಸಮಾಜ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿ ಹಾಗೂ ಜಿಲ್ಲಾ ಆಸ್ಪತ್ರೆ, ಮಡಿಕೇರಿಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ರವಿ ಕರುಂಬಯ್ಯ ಅವರು ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ಅಪಘಾತ, ಶಸ್ತ್ರಚಿಕಿತ್ಸೆ, ಹೆರಿಗೆ, ರಕ್ತಹೀನತೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲದ ಕಾರಣ ಸ್ವಯಂಪ್ರೇರಿತ ರಕ್ತದಾನದಿಂದ ಮಾತ್ರ ರಕ್ತದ ಲಭ್ಯತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ರಕ್ತದಾನಕ್ಕೂ ಮುನ್ನ ದಾನಿಗಳ ಆರೋಗ್ಯ ತಪಾಸಣೆ ನಡೆಸಿ, ಅರ್ಹರಾದವರಿಂದ ಮಾತ್ರ ರಕ್ತ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.
ಅತಿಥಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾತುಗಳಿಂದ ಪ್ರೇರಿತರಾದ ವಿದ್ಯಾರ್ಥಿಗಳು, ಬೋಧಕರು ಹಾಗೂ ಸಿಬ್ಬಂದಿ ಉತ್ಸಾಹದಿಂದ ರಕ್ತದಾನ ಮಾಡಿದರು. ಆರೋಗ್ಯ ತಪಾಸಣೆಯ ಬಳಿಕ ಅರ್ಹ ದಾನಿಗಳಿಂದ ಸ್ವಯಂಪ್ರೇರಿತವಾಗಿ ರಕ್ತ ಸಂಗ್ರಹಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ NSS ಅಧಿಕಾರಿಗಳಾದ ಡಾ. ಶೈಲಶ್ರೀ ಕೆ. ಹಾಗೂ  ಅಲೋಕ್ ಬಿಜೈ ಸಂಯೋಜಿಸಿದರು. IQAC ಸಂಚಾಲಕರಾದ ಡಾ. ಸೌಮ್ಯ ಕೆ. ಸಹಕರಿಸಿದರು. ಕು. ಕವನ ಕಾರ್ಯಕ್ರಮ ನಿರೂಪಿಸಿದರು. ಕು. ಗಾನ ಸ್ವಾಗತಿಸಿದರು ಹಾಗೂ ಕು. ಸಾನಿಕ ವಂದನಾರ್ಪಣೆ ನೆರವೇರಿಸಿದರು.
NCC, NSS ಹಾಗೂ YRC ಘಟಕಗಳ ಅಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘ, ಕೊಡಗು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಿಬ್ಬಂದಿ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಶಿಬಿರ ಯಶಸ್ವಿಯಾಗಿ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ…

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.