
ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತನ್ನು ಸಂರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ಗಂಟೆಗೆ ನಗರದ ಅರಣ್ಯ ಭವನದ ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಟಿ, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಖಾರಿ ವಿ.ಅಭಿಷೇಕ್, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನಿತಾ ಚಹ್ವಾನ್, ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಹಶೀನ್ ಬಾನು ದವಡಿ, ಮಡಿಕೇರಿ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪಿ.ಗೋಪಾಲ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಪಿ.ಅಭಯಂಕರ್, ಆನೆ ಕಾರ್ಯಪಡೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ನಾಯಕ್, ಮಡಿಕೇರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ. ಸೆಂದಿಲ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.









