Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ. 11: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ನೇತೃತ್ವದಲ್ಲಿ ಶುಕ್ರವಾರ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ಪ್ರತಿಭಟನೆ ನಡೆಸಿದ ಪರಿಣಾಮ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದ ರೈತರು, ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಆಲಿಸಬೇಕೆಂದು ಪಟ್ಟು ಹಿಡಿದರು. ಪರಿಣಾಮ ಮೈಸೂರು, ವೀರಾಜಪೇಟೆ ಹಾಗೂ ಮಂಗಳೂರು ರಸ್ತೆಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಹೋರಾಟ ಸಮಿತಿ ಸಂಚಾಲಕ ಸುರೇಶ್ ಚಕ್ರವರ್ತಿ ಮಾತನಾಡಿ, ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ನಡೆಸಿ ಕಸ್ತೂರಿ ರಂಗನ್ ವರದಿಯ ವಿರುದ್ಧ ನಿರ್ಣಯ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ಕಸ್ತೂರಿ ರಂಗನ್ ವರದಿಯಿಂದ ಜಿಲ್ಲೆಯ 53 ಗ್ರಾಮಗಳು ಸೂಕ್ಷ್ಮ ಪರಿಸರ ವಲಯಕ್ಕೆ ಒಳಪಡಲಿವೆ. ಈ ಗ್ರಾಮಗಳೊಂದಿಗೆ ಬಫರ್ ಝೋನ್ ಸೇರ್ಪಡೆಯಾದರೆ ಜಿಲ್ಲೆಯ 295 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಸಿ ಮತ್ತು ಡಿ ಜಮೀನಿನಲ್ಲಿ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಲಾಯಿತು. ಮುಕ್ಕೋಡ್ಲು ಗ್ರಾಮದ ಕೃಷಿಕ ನಾಣಿಯಪ್ಪ ಅವರ ತೋಟದಲ್ಲಿದ್ದ ಕಾಫಿ ಮತ್ತು ಏಲಕ್ಕಿ ಬೆಳೆಗಳನ್ನು ಅರಣ್ಯ ಇಲಾಖೆ ನಾಶಪಡಿಸಿದ ಪ್ರಕರಣದಲ್ಲೂ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಲಾಯಿತು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಜಿ. ಸೋಮಶೇಖರ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಹಾಗೂ ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸ್ಥಳಕ್ಕೆ ಆಗಮಿಸಿ ರೈತರ ಬೇಡಿಕೆಗಳನ್ನು ಆಲಿಸಿದರು.

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಿಲ್ಲೆಯ ಜನರ ಭಾವನೆಗಳಿಗೆ ಅನುಗುಣವಾಗಿ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರಕ್ಕೆ ಮಾಹಿತಿ ಒದಗಿಸುವುದಾಗಿ ಜಿಲ್ಲಾಧಿಕಾರಿ ಸೋಮಶೇಖರ್ ಭರವಸೆ ನೀಡಿದರು. ಶಾಸಕ ಡಾ. ಮಂತರ್ ಗೌಡ ಅವರು ಸಿ ಮತ್ತು ಡಿ ಜಮೀನು ಸಮಸ್ಯೆ ಕುರಿತು ರಚಿಸಿರುವ ವಿಶೇಷ ತನಿಖಾ ಸಮಿತಿ ಸ್ಥಳೀಯ ಭಾವನೆಗಳನ್ನು ಪರಿಗಣಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.

ಇದೇ ವೇಳೆ ಮುಕ್ಕೋಡ್ಲು ಗ್ರಾಮದ ಸಂತ್ರಸ್ತ ಕೃಷಿಕ ನಾಣಿಯಪ್ಪ ಅವರಿಗೆ ಪರಿಹಾರ ನೀಡುವ ವಿಚಾರದಲ್ಲೂ ಜಿಲ್ಲಾಡಳಿತ ಕ್ರಮ ಕೈಗೊಂಡಿತು. ಪ್ರತಿಭಟನೆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನಾಣಿಯಪ್ಪ ಅವರ ಮೊಬೈಲ್‌ನಲ್ಲಿ ಅಂದಿನ ಘಟನೆಯ ದೃಶ್ಯಗಳನ್ನು ವೀಕ್ಷಿಸಿ ಮಾಹಿತಿ ಪಡೆದಿದ್ದರು. ಬಳಿಕ ನಾಣಿಯಪ್ಪ ಹಾಗೂ ಅವರ ಕುಟುಂಬವನ್ನು ಜಿಲ್ಲಾಧಿಕಾರಿ ಕಚೇರಿಗೆ ಕರೆಸಿ ಒಟ್ಟು 6 ಲಕ್ಷ ರೂ. ಮೌಲ್ಯದ ಚೆಕ್ ಅನ್ನು ಹಸ್ತಾಂತರಿಸಿದರು.

ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅರಣ್ಯ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪರಿಹಾರ ನೀಡುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರಸ್ತೆ ತಡೆ ಹಿಂಪಡೆದ ರೈತರು ಗಾಂಧಿ ಮೈದಾನಕ್ಕೆ ತೆರಳಿ ಬಹಿರಂಗ ಸಭೆ ನಡೆಸಿದರು.

ಪ್ರತಿಭಟನೆಯಲ್ಲಿ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ರೈತ ಹೋರಾಟ ಸಮಿತಿಯ ಬಿ.ಜೆ. ದೀಪಕ್, ಮಿಥುನ್ ಹರಗ, ದಿವಾಕರ ಕೂತಿ, ಕಾಂಗ್ರೆಸ್ ಪ್ರಮುಖ ನಾಪಂಡ ಮುತ್ತಪ್ಪ ಸೇರಿದಂತೆ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಾವಿರಾರು ರೈತರು ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ನಗರದ ಫೀ.ಮಾ.ಕೆ.ಎಂ. ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ…

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.