Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.11 NEWS DESK : ಜಿಲ್ಲೆಯ ಪ್ರವಾಸಿ ತಾಣಗಳನ್ನು ಪರಿಸರ ಸ್ನೇಹಿಯಾಗಿ ಮತ್ತಷ್ಟು ಜನಪ್ರಿಯಗೊಳಿಸುವುದು, ಸ್ಥಳೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದು ಹಾಗೂ ಪ್ರವಾಸಿಗರಿಗೆ ಉತ್ತಮ ಅನುಭವ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಮತ್ತು ಸಂಘ, ಸಂಸ್ಥೆಯವರು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಹೋಂಸ್ಟೇ ಅಸೋಸಿಯೇಷನ್, ಚೇಂಬರ್ ಆಫ್ ಕಾಮರ್ಸ್, ಟೂರ್ ಅಂಡ್ ಟ್ರಾವಲ್ಸ್, ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಅಗತ್ಯ ಎಂದರು. ಸಭೆಯಲ್ಲಿ ಜಿಲ್ಲೆಯ ಪ್ರವಾಸೋದ್ಯಮದ ವೈವಿಧ್ಯತೆ, ಸ್ಥಳೀಯ ಸಂಸ್ಕøತಿ, ಪರಂಪರೆ, ಆಹಾರ, ಕಲೆ ಹಾಗೂ ಪ್ರಕೃತಿ ಸೌಂದರ್ಯವನ್ನು ಪ್ರವಾಸಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಎಚ್.ಶಶಿಧರ್ ಅವರು, ಪ್ರವಾಸೋದ್ಯಮ ದಿನಾಚರಣೆಯ ಪ್ರಯುಕ್ತ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಸಾಂಪ್ರದಾಯಿಕ ಹಾಗೂ ಸಾಂಸ್ಕøತಿಕ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೊಡಗಿನ ಸಾಂಪ್ರದಾಯಿಕ ಆಹಾರ ಮೇಳ, ಕಾಫಿ, ಜೇನು, ಸಾಂಬಾರ ಪದಾರ್ಥಗಳು ಸೇರಿದಂತೆ ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಧಾರ್ಮಿಕ ಕೇಂದ್ರಗಳಾದ ತಲಕಾವೇರಿ, ಭಾಗಮಂಡಲ, ಓಂಕಾರೇಶ್ವರ ದೇವಸ್ಥಾನ, ಪ್ರವಾಸಿ ತಾಣಗಳಾದ, ರಾಜಾಸೀಟು, ನಿಸರ್ಗಧಾಮ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೆರಿಟೇಜ್ ವಾಕ್ (ಪಾರಂಪರಿಕ ನಡಿಗೆ) ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಉಪನಿದೇರ್ಶಕರು ತಿಳಿಸಿದರು. ಪರಿಸರ ಸಂರಕ್ಷಣೆ ಮತ್ತು ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲು ಪ್ರಮುಖ ಪ್ರವಾಸಿ ತಾಣಗಳಲ್ಲಿ ‘ಸ್ವಚ್ಛ ಕೊಡಗು-ಸುಂದರ ಕೊಡಗು’ ಅಭಿಯಾನ, ಶುಚಿತ್ವ ಕಾರ್ಯಕ್ರಮ ಹಾಗೂ ಪ್ಲಾಸ್ಟಿಕ್ ಮುಕ್ತ ಪ್ರತಿಜ್ಞೆ, ಪ್ರವಾಸಿಗರಿಗೆ ಮತ್ತು ಹೋಂಸ್ಟೇ-ರೆಸಾರ್ಟ್ ಮಾಲೀಕರಿಗೆ ಘನತ್ಯಾಜ್ಯ ವಿಲೇವಾರಿ ಮರುಬಳಕೆ ಕುರಿತು ಕಾರ್ಯಾಗಾರ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿ ಕುರಿತ ಪ್ರಬಂಧ, ಚಿತ್ರಕಲೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು, ಸಸಿ ನೆಡುವಿಕೆ ಹಾಗೂ ಜಲಮೂಲಗಳ ಸಂರಕ್ಷಣೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಡ್ರಗ್ಸ್ ಫ್ರೀ ಕುರಿತು ಜಾಗೃತಿ ಮೂಡಿಸಲು ವಾಕಥಾನ್, ಮ್ಯಾರಥಾನ್ ಮತ್ತು ಸೈಕಲ್ ಜಾಥಾ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತದೆ ಎಂದರು. ವಿದ್ಯಾರ್ಥಿಗಳು, ಸ್ಟಾರ್ಟ್ ಅಪ್‍ಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ಉದ್ಯಮಿಗಳು ಕೊಡಗಿನ ಸ್ವಚ್ಛ, ಸುರಕ್ಷಿತ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕಾಗಿ ಡಿಜಿಟಲ್ ಹಾಗೂ ಕೃತಕ ಬುದ್ಧಿಮತ್ತೆ ಆಧಾರಿತ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸುವ ‘ಡಿಜಿಟಲ್ ಪ್ರವಾಸೋದ್ಯಮ ನವೋದ್ಯಮ ಸ್ಪರ್ಧೆ’ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶಶಿಧರ್ ಅವರು ತಿಳಿಸಿದರು. ಪ್ರವಾಸಿ ಮಾರ್ಗದರ್ಶಕರು, ಟ್ಯಾಕ್ಸಿ ಚಾಲಕರು, ಕಲಾವಿದರು ಹಾಗೂ ಸಣ್ಣ ಉದ್ಯಮಿಗಳಿಗೆ ಆನ್‍ಲೈನ್ ಪಟ್ಟಿ, ಡಿಜಿಟಲ್ ಪಾವತಿ, ಸಾಮಾಜಿಕ ಜಾಲತಾಣ ಬಳಕೆ ಮತ್ತು ಮೂಲಭೂತ ಕೃತಕ ಬುದ್ಧಿಮತ್ತೆ ಆಧಾರಿತ ಮಾರ್ಕೆಟಿಂಗ್ ಕುರಿತು ಡಿಜಿಟಲ್ ಕೌಶಲ್ಯ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಯುವಕರಿಗಾಗಿ ಕೊಡಗಿನ ಪ್ರಕೃತಿ, ಸಂಸ್ಕøತಿ ಮತ್ತು ಪ್ರವಾಸಿ ತಾಣಗಳನ್ನು ಜವಾಬ್ದಾರಿಯುತವಾಗಿ ಪರಿಚಯಿಸುವ ಛಾಯಾಚಿತ್ರ, ಕಿರುಚಿತ್ರ ಹಾಗೂ ಪೆÇೀಸ್ಟರ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ನೈತಿಕ ಕೃತಕ ಬುದ್ಧಿಮತ್ತೆ ಬಳಕೆಯ ಸೃಜನಾತ್ಮಕ ಕೃತಿಗಳಿಗೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಅವರು ತಿಳಿಸಿದರು. ಇದರೊಂದಿಗೆ ಸುಸ್ಥಿರ ಮತ್ತು ಜವಾಬ್ದಾರಿಯುತ ಪ್ರವಾಸೋದ್ಯಮ ಕುರಿತು ಸ್ಥಳೀಯ ಹೋಟೆಲ್, ಹೋಂಸ್ಟೇ, ಟೂರ್ ಆಪರೇಟರ್‍ಗಳೊಂದಿಗೆ ವಿಚಾರ ಸಂಕಿರಣ ಹಾಗೂ ಸಂವಾದ, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಸನ್ಮಾನ, ಕೊಡಗಿನ ಪ್ರವಾಸಿ ತಾಣಗಳ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಡಿಜಿಟಲ್ ಪ್ರಚಾರ ಕೈಗೊಳ್ಳಲು ಉದ್ದೇಶಿಸಲಾಗಿದೆ. ಸ್ಥಳೀಯ ಶಾಲಾ ಮಕ್ಕಳಿಗೆ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಿಗೆ ಶೈಕ್ಷಣಿಕ ಭೇಟಿ ಏರ್ಪಡಿಸುವ ಮೂಲಕ ಜಿಲ್ಲೆಯ ಪ್ರಕೃತಿ, ಸಂಸ್ಕøತಿ ಹಾಗೂ ಪ್ರವಾಸೋದ್ಯಮದ ಕುರಿತು ಅರಿವು ಮೂಡಿಸಲು ಸಹ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಕೊಡಗು ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್, ಟೂರ್ ಅಂಡ್ ಟ್ರಾವೆಲ್ ಅಸೋಸಿಯೇಷನ್ ವಂಸತ, ಹೋಂಸ್ಟೇ ಅಸೋಸಿಯೇಷನ್‍ನ ಪ್ರಮುಖರಾದ ನವೀನ್ ಅಂಬೆಕಲ್, ರೋಟರಿಯ ಮನೋಹರ್ ಕಾಮತ್, ಹೋಟೆಲ್ ಮತ್ತು ರೆಸಾರ್ಟ್ ಸಂಘದ ಸಲಹೆಗಾರರಾದ ಜಿ.ಚಿದ್ವಿಲಾಸ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಜತೀನ್ ಬೋಪಣ್ಣ, ಇಲಾಖಾ ಸಿಬ್ಬಂದಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ…

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.