Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಸೆ.11 NEWS DESK : ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ರಸ್ತೆ, ವಾಹನ ನಿಲುಗಡೆ ಹಾಗೂ ಸೂಚನಾ ಫಲಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸುವುದರ ಜೊತೆಗೆ ಈಗಾಗಲೇ ಇರುವ ಪ್ರವಾಸಿ ತಾಣಗಳ ನಿರ್ವಹಣೆ ಹಾಗೂ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಬೇಕು. ಜಿಲ್ಲೆಯ ನೈಸರ್ಗಿಕ, ಐತಿಹಾಸಿಕ ಹಾಗೂ ಸಾಂಸ್ಕøತಿಕ ಪ್ರವಾಸಿ ತಾಣಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿ, ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಪ್ರವಾಸೋದ್ಯಮ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ಉತ್ತೇಜಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಟೂರ್ ಅಂಡ್ ಟ್ರಾವೆಲ್ ಅಸೋಸಿಯೇಷನ್‍ನ ವಂಸತ ಅವರು ಮಾತನಾಡಿ, ದಸರಾ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಆದ್ದರಿಂದ ಟ್ರೆಕ್ಕಿಂಗ್ ಸ್ಥಳಗಳನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು. ದುಬಾರೆಯಲ್ಲಿ ಆನೆಗಳ ಸಂಘರ್ಷದಿಂದ ದುರಂತ ಸಂಭವಿಸಿದ್ದು, ಈ ರೀತಿಯ ಪ್ರಕರಣ ಇದೇ ಮೊದಲ ಬಾರಿಗೆ ನಡೆದಿದೆ. ದುಬಾರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪ್ರವಾಸಿಗರಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ಈ ಕುರಿತು ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಮೋಂತಿ ಗಣೇಶ್ ಅವರು ಮಾತನಾಡಿ, ಹೋಂಸ್ಟೇಗಳಲ್ಲಿ ಗ್ಯಾಸ್ ಗೀಸರ್ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಆದರೆ ಕೊಡಗಿನ ಹವಾಮಾನಕ್ಕೆ ಅನುಗುಣವಾಗಿ ಬಿಸಿನೀರಿನ ಅಗತ್ಯವಿರುವುದರಿಂದ, ಸುರಕ್ಷತಾ ಕ್ರಮಗಳನ್ನು ಕೈಗೊಂಡು ಗ್ಯಾಸ್ ಗೀಸರ್ ಬಳಕೆಗೆ ಅನುಮತಿ ನೀಡುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ಮಾತನಾಡಿ, ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಫುಡ್ ಫೆಸ್ಟ್ ಹಾಗೂ ಕೊಡಗು ಉತ್ಸವದಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಬೇಕು. ದಸರಾ ಸಂದರ್ಭದಲ್ಲಿಯೇ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಹೇಳಿದರು. ಟೂರ್ ಅಂಡ್ ಟ್ರಾವೆಲ್ ಅಸೋಸಿಯೇಷನ್‍ನ ವಂಸತ ಅವರು ಮಾತನಾಡಿ, ನಗರದ ಪ್ರಮುಖ ಪ್ರವಾಸಿ ತಾಣ ರಾಜಾಸೀಟು ಮುಂಭಾಗದಲ್ಲಿ ಹಲವು ಅಂಗಡಿಗಳು ಆರಂಭವಾಗಿದ್ದು, ಅವುಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಪುಟಾಣಿ ರೈಲು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಹೋಂಸ್ಟೇ ಅಸೋಸಿಯೇಷನ್‍ನ ಪ್ರಮುಖರಾದ ನವೀನ್ ಅಂಬೆಕಲ್ ಅವರು ಮಾತನಾಡಿ, ರಾಜಾಸೀಟು ಮುಂಭಾಗದಲ್ಲಿ ಅಂಗಡಿಗಳು ಹೆಚ್ಚಾಗಿರುವುದರಿಂದ ಪ್ರವಾಸಿಗರಿಗೆ ನಾಮಫಲಕಗಳು ಕಾಣದೆ ಗೊಂದಲ ಉಂಟಾಗುತ್ತಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಮೋಂತಿ ಗಣೇಶ್ ಅವರು ಮಾತನಾಡಿ, ಅಂಗಡಿಗಳನ್ನು ತೆರವುಗೊಳಿಸುವಂತೆ ಈ ಹಿಂದೆ ಹಲವು ಬಾರಿ ಅಸೋಸಿಯೇಷನ್ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ. ಆದರೆ ತೆರವುಗೊಳಿಸಿದ ಎರಡನೇ ದಿನವೇ ಮತ್ತೆ ರಾಜಾಸೀಟು ಮುಂಭಾಗದಲ್ಲಿ ಅಂಗಡಿಗಳನ್ನು ಆರಂಭಿಸಲಾಗುತ್ತಿದೆ ಎಂದು ಕೋರಿದರು. ಹೋಟೆಲ್ ಮತ್ತು ರೆಸಾರ್ಟ್ ಸಂಘದ ಸಲಹೆಗಾರರಾದ ಜಿ.ಚಿದ್ವಿಲಾಸ್ ಅವರು ಮಾತನಾಡಿ, ರಾಜಾಸೀಟು ಮುಂಭಾಗದಲ್ಲಿರುವ ಅಂಗಡಿಗಳನ್ನು ಕೂರ್ಗ್ ವಿಲೇಜ್‍ಗೆ ಸ್ಥಳಾಂತರಿಸಲು ಕ್ರಮ ಕೈಗೊಂಡರೆ, ರಾಜಾಸೀಟ್‍ಗೆ ಆಗಮಿಸುವ ಪ್ರವಾಸಿಗರು ನೆಹರು ಮಂಟಪಕ್ಕೆ ತೆರಳಲು ಅನುಕೂಲವಾಗಲಿದೆ ಎಂದು ತಿಳಿಸಿದರು. ಸಭೆಯಲ್ಲಿ ಓಂಕಾರೇಶ್ವರ ದೇವಾಲಯದ ಸ್ವಚ್ಛತೆ, ಅಬ್ಬಿಫಾಲ್ಸ್ ಸೇತುವೆ ದುರಸ್ತಿ, ಅಬ್ಬಿಫಾಲ್ಸ್ ಬಳಿ ಶೌಚಾಲಯ ವ್ಯವಸ್ಥೆ, ಇರ್ಪು ಜಲಪಾತ ಅಭಿವೃದ್ಧಿ ಹಾಗೂ ಸೂಕ್ತ ಪಾಕಿರ್ಂಗ್ ವ್ಯವಸ್ಥೆ, ಮಡಿಕೇರಿ ಕೋಟೆಯೊಳಗೆ ಪ್ರವಾಸಿಗರ ಆಕರ್ಷಣೆಗಾಗಿ ಲೇಸರ್ ಲೈಟ್ ಶೋ ಆಯೋಜನೆ ಹಾಗೂ ಕುಶಾಲನಗರದ ತಾವರೆಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಸೋಸಿಯೇಷನ್ ಪ್ರಮುಖರು ಸಲಹೆಗಳನ್ನು ನೀಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಜಿಲ್ಲೆಯ ನೈಸರ್ಗಿಕ, ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದು, ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ಉತ್ತೇಜಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯೊಂದಿಗೆ ವಿವಿಧ ಸಂಘ-ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಸಭೆಯಲ್ಲಿ ರೋಟರಿ ಸಂಸ್ಥೆಯ ಮನೋಹರ್ ಕಾಮತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಎಚ್.ಶಶಿಧರ್, ಜಿಲ್ಲಾ ಸಮಾಲೋಚಕ ಜತೀನ್ ಬೋಪಣ್ಣ, ಅಗ್ನಿಶಾಮಕ ದಳ, ಕೃಷಿ, ಪರಿಸರ, ಅಬಕಾರಿ ಇಲಾಖೆ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ನಗರಸಭೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.

 

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ…

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.