Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
  • *ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*
  • *ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿತರಕರು ಪತ್ರಿಕೆ ಮತ್ತು ಸಮಾಜದ ನಡುವಿನ ಕೊಂಡಿಗಳು: ಜಿ. ಚಿದ್ವಿಲಾಸ್*

ಸೆಪ್ಟೆಂಬರ್ 12, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK ಸೆ. 12: ದೇವರು ಮತ್ತು ಭಕ್ತರ ನಡುವಿನ ಕೊಂಡಿಯಾಗಿ ಅರ್ಚಕರು ಕಾರ್ಯನಿರ್ವಹಿಸಿದರೆ, ಪತ್ರಿಕಾ ವಿತರಕರು ಪತ್ರಿಕೆ ಮತ್ತು ಓದುಗರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಹಾಗೂ ‘ಶಕ್ತಿ’ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಅಭಿಪ್ರಾಯಪಟ್ಟರು.

ಕೊಡಗು ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಘಟಕದ ಸಹಯೋಗದಲ್ಲಿ ಇಲ್ಲಿನ ಕೇರಳ ಸಮಾಜಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ವಿತರಕರ ದಿನಾಚರಣೆ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘ ಕೊಡಮಾಡುವ ಶೈಕ್ಷಣಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕೆ ಮತ್ತು ಪತ್ರಿಕಾ ವಿತರಕರು ಒಂದು ಕುಟುಂಬವಿದ್ದಂತೆ. ಪತ್ರಿಕಾ ಸಂಪಾದಕರು ಎಷ್ಟೇ ಉತ್ತಮವಾಗಿ ಪತ್ರಿಕೆಯನ್ನು ಹೊರತಂದರೂ ಅದು ಓದುಗರಿಗೆ ತಲುಪದಿದ್ದರೆ ವ್ಯರ್ಥ. ಆದ್ದರಿಂದ ಪತ್ರಿಕೆಗಳ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ವಿಶ್ಲೇಷಿಸಿದರು.

ಇತ್ತೀಚಿನ ವರ್ಷಗಳಲ್ಲಿ ಹಿರಿಯ ತಲೆಮಾರಿನವರು ಮಾತ್ರ ಪತ್ರಿಕೆಗಳನ್ನು ಓದುತ್ತಿದ್ದು, ಯುವಜನರಲ್ಲಿ ಪತ್ರಿಕೆ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದ ಅವರು, ಪತ್ರಿಕೆ ವಿತರಣೆ ಎಷ್ಟು ಕಷ್ಟ ಎಂಬುದು ತಮಗೂ ಅರಿವಿದೆ ಎಂದು ಸ್ವಾನುಭವವನ್ನು ಬಿಚ್ಚಿಟ್ಟರು.

ಇಂದು ಪತ್ರಿಕಾ ವಿತರಣೆ ಲಾಭದಾಯಕ ವೃತ್ತಿಯಾಗಿ ಉಳಿದಿಲ್ಲ. ಬದಲಾಗಿ ಪತ್ರಿಕೆಗಳ ಮೇಲಿನ ಪ್ರೀತಿಯಿಂದ ಮಾತ್ರ ವಿತರಕರು ಕಾರ್ಯನಿರ್ವಹಿಸುತ್ತಿದ್ದಾರೆ. ಓದುಗರು ಇದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ಪತ್ರಿಕೆಗಳ ಬೆಲೆ ಮಾತ್ರ ನಿಂತ ನೀರಾಗಿದೆ ಎಂದು ನುಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಪತ್ರಿಕಾ ವಿತರಕರೇ ಪತ್ರಿಕೆಗಳಿಗೆ ಸುದ್ದಿಗಳನ್ನು ನೀಡುವ ವರದಿಗಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಸಮಾಜದ ಸಮಸ್ಯೆಗಳನ್ನು ಪತ್ರಿಕೆಗಳ ಗಮನಕ್ಕೆ ತರುವ ಮೂಲಕ ಸಮಾಜದಲ್ಲಿ ಸಾಕಷ್ಟು ಬದಲಾವಣೆ ತರಲು ಸಾಧ್ಯವಿದೆ ಎಂದು ತಿಳಿಸಿದರು.

ಪತ್ರಿಕಾ ವಿತರಕರ ಕ್ಷೇಮ ನಿಧಿಗಾಗಿ ‘ಶಕ್ತಿ’ ಸಂಸ್ಥೆಯಿಂದ ಒಂದು ಲಕ್ಷ ರೂ.ಗಳ ನೆರವನ್ನು ಎರಡು ವರ್ಷಗಳ ಹಿಂದೆಯೇ ಘೋಷಿಸಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ.ಜಿ. ಸತೀಶ್ ಅವರಿಗೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್ ಅವರು ಪತ್ರಿಕೆಗಳು, ಪತ್ರಿಕಾ ವಿತರಕರು ಮತ್ತು ಪತ್ರಕರ್ತರ ಸಮಸ್ಯೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಪತ್ರಿಕಾ ವಿತರಕರಿಗೆ ವಸತಿ ಸಂಕೀರ್ಣಗಳನ್ನು ಸರ್ಕಾರ ನಿರ್ಮಿಸಿಕೊಡಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಅನುದಾನ ನೀಡುವುದಾಗಿ ಘೋಷಿಸಿದ್ದು, ಅದು ಇನ್ನೂ ಅನುಷ್ಠಾನಗೊಂಡಿಲ್ಲ ಎಂದು ವೇದಿಕೆಯಲ್ಲಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಗಮನಕ್ಕೆ ತಂದರು. ಅಲ್ಲದೆ, ಈ ನಿಟ್ಟಿನಲ್ಲಿ ಸರ್ಕಾರದ ಗಮನಸೆಳೆಯುವಂತೆ ಮನವಿ ಮಾಡಿದರು.

ಮುಖ್ಯ ಅತಿಥಿಯಾಗಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಪತ್ರಿಕಾ ವಿತರಕರು ಮತ್ತು ಏಜೆಂಟರು ಅಸಂಘಟಿತ ಕಾರ್ಮಿಕರ ವಿಭಾಗಕ್ಕೆ ಸೇರುತ್ತಿದ್ದು, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸಂಘದ ಮೂಲಕ ಪ್ರತಿಯೊಬ್ಬರೂ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೊರವಂಡ ವಸಂತಿ ಪೊನ್ನಪ್ಪ ಮತ್ತು ಕೊರವಂಡ ಪೊನ್ನಪ್ಪ ಅವರು ಸ್ಥಾಪಿಸಿರುವ ಶೈಕ್ಷಣಿಕ ದತ್ತಿ ನಿಧಿಯ ಪ್ರತಿಭಾ ಪುರಸ್ಕಾರವನ್ನು ಶಿರಂಗಾಲದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಣಯ್ ಬಿ.ಪಿ. ಅವರಿಗೆ ನೀಡಿ ಗೌರವಿಸಲಾಯಿತು.

ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ಜಾತ್ಯತೀತ ಮತ್ತು ಪಕ್ಷಾತೀತ ನೆಲೆಗಟ್ಟಿನಲ್ಲಿ ಸಂಘಟಿಸಲಾಗಿರುವ ‘ವೇವ್’ ಸಂಘಟನೆಯ ಕುರಿತು ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲ ಪರಾಜ್ ಉಸ್ಮಾನ್ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ಬಿ.ಸಿ. ದಿನೇಶ್ ವಹಿಸಿದ್ದರು.

ವೇದಿಕೆಯಲ್ಲಿ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಟಿ.ಜಿ. ಸತೀಶ್, ವೇವ್ ಸಂಸ್ಥೆಯ ಅಧ್ಯಕ್ಷ ಕೆ.ಎ. ಲತೀಫ್, ಕೇರಳ ಸಮಾಜದ ಪಿ. ರವೀಂದ್ರನ್, ಜಿಲ್ಲಾ ಸಂಘದ ಖಜಾಂಜಿ ಹಾಗೂ ಕಾರ್ಯಕ್ರಮದ ಸಂಚಾಲಕ ಟಿ.ಕೆ. ಸಂತೋಷ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಿಕಾ ವಿತರಕರು, ಏಜೆಂಟರು ಹಾಗೂ ಪತ್ರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮೊದಲಿಗೆ ಸಂಘದ ಉಪಾಧ್ಯಕ್ಷ ನವೀನ್ ಚಿನ್ನಪ್ಪ ಪ್ರಾರ್ಥಿಸಿದರು. ತಾಲೂಕು ಸಂಘದ ಸಲಹೆಗಾರ ಕೆ. ತಿಮ್ಮಪ್ಪ ಸ್ವಾಗತಿಸಿದರು. ಖಜಾಂಜಿ ಕೆ.ಎಸ್. ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಸಂಘದ ಸಹಕಾರ್ಯದರ್ಶಿ ಬಿ.ಎನ್. ರವಿಕುಮಾರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ಹಚ್ಚಹಸಿರಿನ ಬೆಟ್ಟಗುಡ್ಡಗಳ ಸೌಂದರ್ಯದ ನಡುವೆ 2ನೇ ಮೊಣ್ಣಂಗೇರಿಯ ಮರಾಟಿ ಸೋಮಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ…

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.