
ಮಡಿಕೇರಿ ಸೆ.12 NEWS DESK : ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ವತಿಯಿಂದ ಶ್ರೀ ಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಹೊನ್ನಮ್ಮನ ಕೆರೆ ಹೊನ್ನಮ್ಮ ತಾಯಿಗೆ ಬಾಗಿನ ಅರ್ಪಣೆ ಕಾರ್ಯಕ್ರಮವು ಸೆಪ್ಟೆಂಬರ್, 14 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಸಚಿವರಾದ ಬಿ.ಎ.ಜೀವಿಜಯ, ಎಂ.ಪಿ.ಅಪ್ಪಚ್ಚು ರಂಜನ್, ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಜಿ.ಪಂ.ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ, ಗ್ರಾ.ಪಂ. ಅಧ್ಯಕ್ಷರಾದ ಎಚ್.ಎಂ.ಗೋಪಾಲಕೃಷ್ಣ, ಗೌಡಳ್ಳಿ ಪ್ರಾ.ಕೃ.ಪ.ಸ.ಸಂ. ಅಧ್ಯಕ್ಷರಾದ ಭರತ್ ಕುಮಾರ್, ಮಾಜಿ ಅಧ್ಯಕ್ಷರಾದ ಎಚ್.ಆರ್.ಸುರೇಶ್, ರಾಜ್ಯ ವಕ್ಕಲಿಗರ ಸಂಘದ ನಿರ್ದೇಶಕರಾದ ಹರಪಳ್ಳಿ ರವೀಂದ್ರ, ಹಾಸನ ಶೇಖರ್ ಪೈಂಟ್ಸ್‍ನ ಶೇಖರ್, ಇತರರು ಪಾಲ್ಗೊಳ್ಳಲಿದ್ದಾರೆ.








