Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
  • *ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
  • *ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*
  • *ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ : ಕೊಡಗು ಗೌಡ ಸಮಾಜಗಳ ಒಕ್ಕೂಟ ಸ್ಪಷ್ಟನೆ*

ಸೆಪ್ಟೆಂಬರ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.15 NEWS DESK : ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಭೌಗೋಳಿಕ ಸ್ವಾಯತ್ತತೆ ಹಾಗೂ ವಿಶೇಷ ರಾಜಕೀಯ ಸ್ಥಾನಮಾನ ನೀಡುವ ಬೇಡಿಕೆ ಮತ್ತು ಮುಂದೆ ಇದರಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಂವಿಧಾನಾತ್ಮಕ ಕರ್ತವ್ಯವೆಂದು ಭಾವಿಸಿರುವುದಾಗಿ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಯಾವುದೇ ಒಂದು ಸಮುದಾಯಕ್ಕೆ ಸೇರಿದ ಪ್ರದೇಶವಲ್ಲ. ಕೊಡಗಿನ ನೆಲದಲ್ಲಿ ತಲೆತಲಾಂತರಗಳಿಂದ ಕೊಡವರು, ಅರೆಭಾಷಿಕ ಗೌಡ ಸಮೂಹ ಸೇರಿದಂತೆ ವಿವಿಧ ಸಮುದಾಯಗಳು ಸಹಬಾಳ್ವೆಯನ್ನು ನಡೆಸಿಕೊಂಡು ಬರುತ್ತಿವೆ. ಈ ಸಮುದಾಯಗಳ ಹಕ್ಕು, ಗೌರವ ಮತ್ತು ಅಸ್ತಿತ್ವವನ್ನು ನಾವು ಎಂದಿಗೂ ಗೌರವಿಸುವುದಾಗಿ ತಿಳಿಸಿದರು. ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶೇಷ ರಾಜಕೀಯ ಆಡಳಿತಾತ್ಮಕ ಅಧಿಕಾರಗಳನ್ನು ನೀಡುವ ಬೇಡಿಕೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಅದರ ಪರಿಣಾಮಗಳು ಜಿಲ್ಲೆಯಲ್ಲಿ ನೆಲೆಸಿರುವ ವಿವಿಧ ಸಮುದಾಯಗಳ ಮೇಲೆ ಹೇಗಿರಬಹುದು ಎನ್ನುವುದನ್ನು ಪ್ರಶ್ನಿಸುವುದು ನಮ್ಮ ಸಂವಿಧಾನಾತ್ಮಕ ಕರ್ತವ್ಯವಾಗಿದೆ. ಒಂದು ಸಮುದಾಯದ ಹಕ್ಕುಗಳನ್ನು ರಕ್ಷಿಸುವ ಹೆಸರಿನಲ್ಲಿ ಮತ್ತೊಂದು ಸಮುದಾಯದ ಹಕ್ಕುಗಳನ್ನು ಕುಗ್ಗಿಸುವ ಕಾರ್ಯ ಎಂದಿಗೂ ನಡೆಯಬಾರದು. ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಶಾಸಕರುಗಳು ತಮ್ಮ ನಿಲುವುಗಳನ್ನು ವ್ಯಕ್ತಪಡಿಸಬೇಕೆಂದು ಆನಂದ ಕರಂದ್ಲಾಜೆ ಆಗ್ರಹಿಸಿದರು. ಒಕ್ಕೂಟದ ಉಪಾಧ್ಯಕ್ಷ ರಾಜೇಶ್ ತೇನನ ಅವರು ಮಾತನಾಡಿ, ಭೌಗೋಳಿಕ ರಾಜಕೀಯ ಸ್ವಾಯತ್ತತೆ ಎಂದರೆ ಅದು ಕೇವಲ ಒಂದು ಸಮುದಾಯದ ಭಾಷೆ, ಸಂಸ್ಕೃತಿಯ ಅಥವಾ ಪರಂಪರೆಯ ರಕ್ಷಣೆಯಲ್ಲ. ಬದಲಾಗಿ ಸ್ಥಳೀಯ ಆಡಳಿತ, ಕಾನೂನು ರೂಪಿಸುವಿಕೆ, ಭೂಮಿ, ನೈಸರ್ಗಿಕ ಸಂಪನ್ಮೂಲಗಳು, ಸಾಂಪ್ರದಾಯಿಕ ಕಾನೂನು ಮೊದಲಾದ ವಿಷಯಗಳಲ್ಲಿಯೂ ವಿಶೇಷ ಅಧಿಕಾರವನ್ನು ಹೊಂದಿರಬಹುದಾಗಿದೆ. ಈ ಹಿನ್ನೆಲೆ ಸ್ವಾಯತ್ತತೆ ಪದವನ್ನು ಕೇವಲ ಸಾಂಸ್ಕೃತಿಕ ಹಕ್ಕು ಎಂದು ಪರಿಗಣಿಸದೆ ಅದರ ಸಾಂವಿಧಾನಿಕ ಮತ್ತು ಆಡಳಿತಾತ್ಮಕ ಪರಿಣಾಮಗಳನ್ನು ಪರಿಶೀಲಿಸಬೇಕಾಗುತ್ತದೆ ಎಂದು ತಿಳಿಸಿದರು. ನಮ್ಮ ವಿರೋಧ ಕೊಡವ ಜನರ ವಿರುದ್ಧವಲ್ಲ, ಬದಲಾಗಿ ಒಂದು ಸಮುದಾಯಕ್ಕೆ ಮಾತ್ರ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡುವ ಬೇಡಿಕೆಯ ವಿರುದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಕೊಡಗು ಗೌಡ ಸಮಾಜದ ಅಧ್ಯಕ್ಷ ದಂಬೆಕೋಡಿ ಆನಂದ, ಕುಶಾಲನಗರದ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಒಕ್ಕೂಟದ ನಿರ್ದೇಶಕರಾದ ಕುಯ್ಯಮುಡಿ ರಂಜು ಹಾಗೂ ಕುಂಬುಗೌಡನ ಜಲಜಾಕ್ಷಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.6: ಹಚ್ಚಹಸಿರಿನ ಬೆಟ್ಟಗುಡ್ಡಗಳ ಸೌಂದರ್ಯದ ನಡುವೆ 2ನೇ ಮೊಣ್ಣಂಗೇರಿಯ ಮರಾಟಿ ಸೋಮಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ…

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.