ಕುಶಾಲನಗರ, NEWS DESK ಸೆ.18: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ವಿರಾಜಪೇಟೆ ತಾಲೂಕು ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಆಶ್ರಯದಲ್ಲಿ, ವಿವಿಧ ಸಂಘ-ಸಂಸ್ಥೆಗಳು ಮತ್ತು ದಾನಿಗಳ ಸಹಕಾರದೊಂದಿಗೆ ಅಕ್ಟೋಬರ್ 1ರಿಂದ ನಡೆಯಲಿರುವ 2131ನೇ ಮಧ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಕುಶಾಲನಗರದಲ್ಲಿ ಬಿಡುಗಡೆಗೊಳಿಸಲಾಯಿತು.
ಯೋಜನೆಯ ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಒಂದು ವಾರಗಳ ಕಾಲ ವಿರಾಜಪೇಟೆಯ ಹೆಗ್ಗಳ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಶಿಬಿರದ ಯಶಸ್ಸಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ವೇದಿಕೆಯ ಅಧ್ಯಕ್ಷ ಎ.ಟಿ. ರಂಗಸ್ವಾಮಿ, ಜಿಲ್ಲಾ ನಿರ್ದೇಶಕ ವಿಠಲ ಸಾಲಿಯಾನ್, ಸ್ಥಾಪಕ ಅಧ್ಯಕ್ಷ ಪಿ. ಅಭಿಮನ್ಯು ಕುಮಾರ್, ನಿಕಟಪೂರ್ವ ಅಧ್ಯಕ್ಷ ಅರುಣ್ ಬಾನಂಗಡ, ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಜಿಲ್ಲಾ ಉಪಾಧ್ಯಕ್ಷ ವಿ.ಡಿ. ಪುಂಡರಿಕಾಕ್ಷ, ಕೋಶಾಧಿಕಾರಿ ಶಾಂತಮಲ್ಲಪ್ಪ, ವಿರಾಜಪೇಟೆ ಯೋಜನಾಧಿಕಾರಿ ಪಿ. ಹರೀಶ್ ಸೇರಿದಂತೆ ವಿವಿಧ ತಾಲೂಕುಗಳ ಯೋಜನಾಧಿಕಾರಿಗಳು ಹಾಗೂ ವೇದಿಕೆಯ ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.








